ETV Bharat / state

5 ರಾಜ್ಯಗಳಿಂದ ಬರುವ ಪ್ರಯಾಣಿಕರಿಗೆ ನೋ ಎಂಟ್ರಿ: ಪೊಲೀಸ್ ನೇಮಕಾತಿ ವಯೋಮಿತಿ ಸಡಿಲಿಕೆಗೆ ಸಂಪುಟ ಅಸ್ತು - ಸಚಿವ ಸಂಪುಟ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಐದು ರಾಜ್ಯಗಳಿಂದ ಏರ್​, ಟ್ರಾಫಿಕ್​ ನಿರ್ಬಂಧ, ಪೊಲೀಸ್ ನೇಮಕಾತಿ ವಯೋಮಿತಿ ಸಡಿಲಿಕೆ, ಕುಮಾರಧಾರ ನದಿಯ ಸೇತುವೆ ನಿರ್ಮಾಣ, ರೈತರಿಗೆ ತಲಾ 5 ಸಾವಿರ ರೂಪಾಯಿ, ಔಷಧ ದಾಸ್ತಾನು ಉಗ್ರಾಣ ನಿರ್ಮಾಣ ಸೇರಿದಂತೆ ಇನ್ನೂ ಹತ್ತಾರು ಯೋಜನೆಗಳಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

Cabinet approves
ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿ
author img

By

Published : May 28, 2020, 7:42 PM IST

ಬೆಂಗಳೂರು: ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ತಮಿಳುನಾಡು, ಮಧ್ಯಪ್ರದೇಶ, ಗುಜರಾತ್, ರಾಜಸ್ಥಾನದಿಂದ ಬರುವ ಪ್ರಯಾಣಿಕರಿಗೆ ರಾಜ್ಯ ಪ್ರವೇಶಕ್ಕೆ ನಿರ್ಬಂಧ ಹೇರಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಂಜೆ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ತಮಿಳುನಾಡು, ಮಹಾರಾಷ್ಟ್ರ, ಗುಜರಾತ್​, ಮಧ್ಯ ಪ್ರದೇಶ ಮತ್ತು ರಾಜಸ್ಥಾನ ಈ ಐದು ರಾಜ್ಯಗಳಿಂದ ವಿಮಾನ, ರಸ್ತೆ, ರೈಲ್ವೆ ಮೂಲಕ ಬರುವ ಪ್ರಯಾಣಿಕರಿಗೆ 15 ದಿನಗಳ ಕಾಲ ನಿರ್ಬಂಧಿಸಲಾಗಿದೆ ಎಂದರು.

ವಿಶೇಷವಾಗಿ ಮಹಾರಾಷ್ಟ್ರ ಮತ್ತು ರಾಜಸ್ಥಾನ ಕಡೆಯಿಂದ ಅತೀ ಹೆಚ್ಚು ಜನ ಬರುತ್ತಿರುವುದರಿಂದ ಈ ಎರಡು ರಾಜ್ಯಕ್ಕೆ ಹೆಚ್ಚು ನಿರ್ಬಂಧ ವಿಧಿಸಲಾಗುತ್ತಿದೆ. ಕಳ್ಳದಾರಿಯಿಂದ ರಾಜ್ಯ ಪ್ರವೇಶ ಮಾಡುವುದನ್ನು ತಡೆಯಲು ಹೆಚ್ಚು ನಿಗಾ ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ ಎಂದು ತಿಳಿಸಿದರು.

ಜೆ.ಸಿ. ಮಾಧುಸ್ವಾಮಿ ಸುದ್ದಿಗೋಷ್ಠಿ

ಇನ್ನು, ಹೊರ ರಾಜ್ಯಗಳಿಂದ ಬಂದಿರುವವರು ಸಂಪೂರ್ಣ ಪರೀಕ್ಷೆಗೆ ಒಳಗಾಗಬೇಕು ಹಾಗೂ ಕ್ವಾರಂಟೈನ್ ಅವಧಿ ಮುಗಿಯುವವರೆಗೆ ಮತ್ತೆಲ್ಲಿಯೂ ಪ್ರವೇಶಕ್ಕೆ ಅವಕಾಶವಿಲ್ಲ. ಇನ್ನು ಕೆಲವರು ಬೇರೆ ರಾಜ್ಯಗಳಿಂದ ಆಗಮಿಸಲಿದ್ದು, ಅಂತವರನ್ನು ನಾವೇ ಬ್ಯಾಚ್ ಬೈ ಬ್ಯಾಚ್ ಕರೆಸಿಕೊಳ್ಳುತ್ತೇವೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ವಿವರಿಸಿದರು.

ವಯೋಮಿತಿ ಸಡಿಲಿಕೆ:

ಪೊಲೀಸ್ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ ಮಾಧುಸ್ವಾಮಿ, ಸಾಮಾನ್ಯ ವರ್ಗಕ್ಕೆ 30 ವರ್ಷ ಮತ್ತು ಮೀಸಲು ಕೆಟಗರಿಗೆ 38 ವರ್ಷದವರಗೆ ಒಂದು ಬಾರಿಗೆ ಸಡಿಲಿಕೆ ನೀಡಲಾಗಿದೆ ಎಂದು ಹೇಳಿದರು.

ನಿಸಾರ್ ಅಹಮದ್ ಟ್ರಸ್ಟ್ ಗೆ ಜಮೀನು ಮಂಜೂರು:

ಚಿಕ್ಕಬಳ್ಳಾಪುರದ ನಂದಿ ಹೋಬಳಿಯ ಮೋಟ್ಲೂರು ಗ್ರಾಮದಲ್ಲಿ ಬೆಂಗಳೂರಿನ ಕವಿ ದಿ. ನಿಸಾರ್ ಅಹಮದ್ ಟ್ರಸ್ಟ್‌ಗೆ 2.20 ಎಕರೆ ಜಮೀನು ಮಂಜೂರು ಮಾಡಲಾಗಿದೆ. ಕರ್ನಾಟಕ ಭಿಕ್ಷಾಟನೆ ನಿಷೇಧ( ತಿದ್ದುಪಡಿ) ವಿಧೇಯಕ 2020ಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದರು.

ಔಷಧ ಉಗ್ರಾಣ ಸ್ಥಾಪನೆ:

ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮಂಡ್ಯ ಹಾಗೂ ಚಿಕ್ಕಬಳ್ಳಾಪುರದಲ್ಲಿ 18.80 ಕೋಟಿ ರೂ. ವೆಚ್ಚದಲ್ಲಿ ಔಷಧ ದಾಸ್ತಾನು ಉಗ್ರಾಣ ನಿರ್ಮಾಣಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಕರ್ನಾಟಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್​​ಗೆ 1,500 ಕೋಟಿ ರೂ‌. ಸಾಲ ಕ್ಕೆ ಖಾತ್ರಿ ನೀಡಲಾಗಿದ್ದು, ಪುತ್ತೂರು ತಾಲೂಕಿನಲ್ಲಿ ಕುಮಾರಧಾರ ನದಿಯ ಸೇತುವೆ ನಿರ್ಮಾಣಕ್ಕೆ 15 ಕೋಟಿ ರೂ. ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಕೊರೊನಾ ಪ್ಯಾಕೇಜ್​​ನಲ್ಲಿ ಮೆಕ್ಕೆಜೋಳ ಬೆಳೆದ ರೈತರಿಗೆ ಒಂದು ಹೆಕ್ಟೇರ್ ಗೆ ಐದು ಸಾವಿರ ರೂ. ನೀಡಲು ನಿರ್ಧರಿಸಲಾಗಿದ್ದು, ಕ್ಷೌರಿಕರು, ಆಟೋ, ಟ್ಯಾಕ್ಸಿ ಚಾಲಕರಿಗೆ ಐದು ಸಾವಿರ ರೂ ಪರಿಹಾರ ನೀಡಲು ವಿಧಿಸಲಾಗಿದ್ದ ಶರತ್ತುಗಳನ್ನು ಸಡಿಲಿಸಲಾಗಿದೆ. ಎಲ್ಲಾ ಚಾಲಕರಿಗೂ ಪರಿಹಾರ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ಮಾಧುಸ್ವಾಮಿ ವಿವರಿಸಿದರು.

ಸಿಎಂ ಗೆ ಅಧಿಕಾರ:

ವಿಧಾನ ಪರಿಷತ್‌ಗೆ ಐವರನ್ನು ನಾಮನಿರ್ದೇಶನ ಮಾಡುವ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆದಿದ್ದು, ಜೂನ್ 23ಕ್ಕೆ ವಿಧಾನ‌ಪರಿಷತ್ತಿನ ಐದು ನಾಮ ನಿರ್ದೇಶನ ಸ್ಥಾನಗಳು ಖಾಲಿಯಾಗಲಿದೆ. ನಾಮನಿರ್ದೇಶನ ಶಿಫಾರಸು ಮಾಡುವ ಅಧಿಕಾರವನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.