ETV Bharat / state

ತಾಂತ್ರಿಕ ದೋಷ: ಬೆಂಗಳೂರಿನ HAL ಏರ್​ಪೋರ್ಟ್​ನಲ್ಲಿ ವಿಮಾನ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವೊಂದು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನಲ್ಲಿ ತುರ್ತು ಭೂಸ್ಪರ್ಶಿಸಿದೆ.

emergency landing
ತುರ್ತು ಭೂಸ್ಪರ್ಶ ಮಾಡಿದ ವಿಮಾನ
author img

By

Published : Jul 12, 2023, 12:49 PM IST

ಬೆಂಗಳೂರು : ನೋಸ್ ಲ್ಯಾಂಡಿಂಗ್ ಗೇರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಫ್ಲೈ ಬೈ ವೈರ್ ಪ್ರೀಮಿಯರ್ 1ಎ ವಿಮಾನವು ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ವಿಮಾನ ನಿಲ್ದಾಣದಲ್ಲಿಂದು ತುರ್ತು ಭೂಸ್ಪರ್ಶ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಚಕ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಕಾರಣ ತುರ್ತಾಗಿ ಎಚ್‌ಎಎಲ್‌ನಲ್ಲೇ ಲ್ಯಾಂಡ್ ಆಗಿದೆ. ವಿಮಾನ ತುರ್ತು ಭೂಸ್ಪರ್ಶವಾಗುವ ದೃಶ್ಯಗಳು ಮೊಬೈಲ್​ನಲ್ಲಿ ಸೆರೆಯಾಗಿವೆ. ಲ್ಯಾಂಡಿಂಗ್ ವೇಳೆ ವಿಮಾನ ಮಗುಚಿ ಬೀಳುವ ಹಂತಕ್ಕೆ ಹೋಗಿದ್ದು, ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಕುರಿತು ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಅಧಿಕೃತ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದು, “ಎ ಫ್ಲೈ ಬೈ ವೈರ್ ಪ್ರೀಮಿಯರ್ 1 ಎ ಏರ್‌ಕ್ರಾಫ್ಟ್ ವಿಟಿ-ಕೆಬಿಎನ್ (A Fly By wire Premier 1A aircraft VT-KBN) ನ ಏರ್‌ಟರ್ನ್‌ಬ್ಯಾಕ್​ನಲ್ಲಿ ದೋಷ ಕಾಣಿಸಿಕೊಂಡು ಎಚ್‌ಎಎಲ್​ನಲ್ಲಿ ತುರ್ತು ಭೂಸ್ಪರ್ಶ ಮಾಡಿತು. ಈ ವಿಮಾನವು ಎಚ್‌ಎಎಲ್​ನಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿತ್ತು. ಇಬ್ಬರು ಪೈಲಟ್‌ಗಳಿದ್ದರು ಮತ್ತು ಯಾವುದೇ ಪ್ರಯಾಣಿಕರು ವಿಮಾನದಲ್ಲಿ ಇರಲಿಲ್ಲ. ಸುರಕ್ಷಿತವಾಗಿ ಟೇಕ್-ಆಫ್ ಮಾಡಲಾಗಿದೆ" ಎಂದು ತಿಳಿಸಿದೆ.

ಇದನ್ನೂ ಓದಿ : ಬೆಳಗಾವಿ ಹೊರವಲಯದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

ಡಿಜಿಸಿಎ ಹಂಚಿಕೊಂಡ ವಿಡಿಯೋದಲ್ಲಿ ವಿಮಾನವು ರನ್‌ವೇಯಲ್ಲಿ ಸುರಕ್ಷಿತವಾಗಿ ಇಳಿಯುವುದನ್ನು ಕಾಣಬಹುದು. ಏರ್‌ಟರ್ನ್‌ಬ್ಯಾಕ್ ಸಾಮಾನ್ಯವಾದ ಎಂಜಿನ್ ವೈಫಲ್ಯವಾಗಿದೆ.

ಇದನ್ನೂ ಓದಿ : ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಪಕ್ಷಿ ಡಿಕ್ಕಿ; ಹೆಲಿಕಾಪ್ಟರ್​ ತುರ್ತು ಭೂಸ್ಪರ್ಶ

ಕಳೆದ ಮೇ ತಿಂಗಳ 30 ರಂದು ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ತರಬೇತಿ ವಿಮಾನವೊಂದು ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹೊರವಲಯದ ಮಾರಿಹಾಳ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಘಟನೆಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ರೆಡ್‌ಬರ್ಡ್ ಸಂಸ್ಥೆಗೆ ಸೇರಿದ ವಿಟಿ-ಆರ್ ಬಿಎಫ್ ತರಬೇತಿ ವಿಮಾನವು ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟಿತ್ತು. ಇಬ್ಬರು ಪ್ರಯಾಣಿಸುತ್ತಿದ್ದರು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ" ಎಂದು ಸಾಂಬ್ರಾ ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದರು.

ಇದನ್ನೂ ಓದಿ : ಬೆಂಗಳೂರಿನಿಂದ ತೆರಳುತ್ತಿದ್ದ ರವಿಶಂಕರ್ ಗುರೂಜಿ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.