ETV Bharat / state

ಪಿಯುಸಿ ಪಾಸ್​ ಸಚಿವರ ಸಂಬಂಧಿಗೆ ಉನ್ನತ ಹುದ್ದೆ ವಿವಾದ; ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ತಾಕೀತು - High Court

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಕೇವಲ ಪಿಯುವರೆಗೆ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ, ಸಿಎಂ ಮತ್ತು ಸಚಿವ ಆರ್​. ಅಶೋಕ್ ಅವರ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

High Court
ಹೈಕೋರ್ಟ್
author img

By

Published : Mar 17, 2021, 3:16 PM IST

ಬೆಂಗಳೂರು: ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಕಂದಾಯ ಸಚಿವ ಆರ್. ಅಶೋಕ್ ಸಂಬಂಧಿ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಸರ್ಕಾರಕ್ಕೆ ಕಡೆಯ ಅವಕಾಶ ನೀಡಿದೆ.

ಈ ಕುರಿತು ಆರ್​ಟಿಐ ಕಾರ್ಯಕರ್ತ ಟಿ. ನರಸಿಂಹಮೂರ್ತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ವಾದಿಸಿ, ಕಳೆದ ಜುಲೈನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಕೋರ್ಟ್ ನವೆಂಬರ್​ನಲ್ಲಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಆದರೆ, ಈವರೆಗೆ ಸರ್ಕಾರ ಅರ್ಜಿಗೆ ಆಕ್ಷೇಪಣೆ ಸಲ್ಲಿಸಿಲ್ಲ, ಅನಗತ್ಯ ವಿಳಂಬ ಮಾಡುತ್ತಿದೆ ಎಂದರು.

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ಪರ ವಕೀಲರು ಕಾರಣಾಂತರಗಳಿಂದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಳಂಬವಾಗಿದೆ. ಹೀಗಾಗಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಸಮ್ಮತಿಸಿದ ಪೀಠ, ಮಾ.30ರೊಳಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಬೇಕು. ಇದು ಕಡೆಯ ಅವಕಾಶ ಎಂದು ಸ್ಪಷ್ಟಪಡಿಸಿತು. ಅಲ್ಲದೇ, ನೇಮಕಾತಿ ಆದೇಶಕ್ಕೆ ಸಂಬಂಧಿಸಿದ ಕಡತವನ್ನು ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ನಿರ್ದೇಶಿಸಿ, ವಿಚಾರಣೆಯನ್ನು ಏ.12ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ:

ನಿಗದಿತ ಶೈಕ್ಷಣಿಕ ಅರ್ಹತೆ ಇಲ್ಲದಿದ್ದರೂ ಸಚಿವ ಆರ್. ಅಶೋಕ್ ಸಂಬಂಧಿ ಎ. ರವಿ ಅವರನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಾಧಿಕಾರದ ಅಧ್ಯಕ್ಷರಾಗಿರುವ ಎ. ರವಿ ಕೇವಲ ಪಿಯುವರೆಗೆ ಓದಿದ್ದು, ಪದವಿ ಕೂಡ ಪೂರೈಸಿಲ್ಲ. ಹಾಗಿದ್ದೂ, ಸಿಎಂ ಮತ್ತು ಅಶೋಕ್ ಅವರ ಪ್ರಭಾವ ಬಳಸಿ ಉನ್ನತ ಹುದ್ದೆ ಪಡೆದುಕೊಂಡಿದ್ದಾರೆ.

ವಿಮಾನ ನಿಲ್ದಾಣದ ಸುತ್ತಲಿನ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯ ಬಹುದೊಡ್ಡ ವ್ಯಾಪ್ತಿಯ ಪ್ರದೇಶಗಳಲ್ಲಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸುವ, ಮಾನ್ಯ ಮಾಡುವ ಅಥವಾ ತಿರಸ್ಕರಿಸುವ ಜವಾಬ್ದಾರಿಯನ್ನು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಹೊಂದಿದೆ. ಇಂತಹ ಪ್ರಾಧಿಕಾರಕ್ಕೆ ಕನಿಷ್ಠ ಶೈಕ್ಷಣಿಕ ಅರ್ಹತೆಯೂ ಇಲ್ಲದ ವ್ಯಕ್ತಿಯನ್ನು ರಾಜಕೀಯ ಕಾರಣಗಳಿಗಾಗಿ ನೇಮಕ ಮಾಡಿದ್ದು, ಸರ್ಕಾರದ ನೇಮಕಾತಿ ಆದೇಶವನ್ನು ರದ್ದುಗೊಳಿಸೇಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಓದಿ: ಹಣದಿಂದ ಉನ್ನತ ಹುದ್ದೆ.. ಪಿಐಎಲ್​ ದಾಖಲಿಸಿ ವಿಚಾರಣೆ ನಡೆಸಿ; ಸಿಜೆಗೆ ಏಕಸದಸ್ಯ ಪೀಠ ಮನವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.