ಬೆಂಗಳೂರು: ಏರ್ ಶೋ ನಡೆಯುವ ವೇಳೆ ಸಂಭವಿಸಿದ್ದ ಬೆಂಕಿ ಅವಘಡ ಸ್ಥಳಕ್ಕೆ ಅಗ್ನಿಶಾಮಕ ದಳದ ಮಹಾ ನಿರ್ದೇಶಕ ಎಂ.ಎನ್.ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಂದೂ ಕೂಡ ಅವಘಡ ಸ್ಥಳಕ್ಕೆ ಭೇಟಿ ನೀಡಿದ ಅವರು ಸುರಕ್ಷತೆಗಾಗಿ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು, ಯಾವುದೇ ಸಮಸ್ಯೆಯಿಲ್ಲ ಎಂದು ದೃಢಪಡಿಸಿದರು.
ಹೆಚ್ಚುವರಿ ಸುರಕ್ಷತೆಗಾಗಿ ಅಗ್ನಿಶಾಮಕ ಇಲಾಖೆಗೆ ಬೆಂಕಿ ನಂದಿಸುವ ಉಪಕರಣಗಳನ್ನು ನೀಡಿದೆ ಎಂದು ತಿಳಿಸಿದ ಅವರು, ತನಿಖೆ ಬಗ್ಗೆ ಮಾತನಾಡುವುದಕ್ಕೆ ನಿರಾಕರಿಸಿದರು. ಇದೇ ವೇಳೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅವಘಡ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ನೀಡಿದರು.