ಬೆಂಗಳೂರು: ಇದೇ ಮೊದಲ ಬಾರಿಗೆ ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಕಂಬಳಕ್ಕೆ ಕನಿಷ್ಠ 3 ರಿಂದ 5 ಲಕ್ಷ ಜನರು ಆಗಮಿಸುವ ನಿರೀಕ್ಷೆ ಇದ್ದು, ಅದಕ್ಕೆ ತಕ್ಕಂತೆ ತಯಾರಿ ಮಾಡಿಕೊಳ್ಳಲಾಗುತ್ತಿದೆ. ನವೆಂಬರ್ 24, 25 ಮತ್ತು 26ರಂದು ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳ ತಯಾರಿ ಸಲುವಾಗಿ ಬೆಂಗಳೂರಿನ ಬಂಟರ ಸಂಘದಲ್ಲಿ ಕರಾವಳಿಯ ವಿವಿಧ ಜಾತಿ - ಭಾಷಾ ಸಂಘಟನೆಗಳ ಜೊತೆ ಬೃಹತ್ ಸಮಾಲೋಚನಾ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಕಂಬಳ ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಕರಾವಳಿಯ ಸಮಸ್ತ ಸಮುದಾಯದವರು ಒಂದೆಡೆ ಒಗ್ಗಟ್ಟಾಗಿ ಸೇರುವ ಬೃಹತ್ ವೇದಿಕೆ ಇದಾಗಲಿದೆ. ಕರಾವಳಿಯ ವಿವಿಧ ಭಾಷೆ - ಜಾತಿಗಳ 50ಕ್ಕೂ ಅಧಿಕ ಸಂಘಟನೆಗಳು ತಯಾರಿ ನಡೆಸುತ್ತಿವೆ. ಬೆಂಗಳೂರು ಕಂಬಳ ಬೆಂಗಳೂರಿನ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ನಡೆಯಲಿದೆ. 'ಬೆಂಗಳೂರು ಕಂಬಳ ನಮ್ಮ ಕಂಬಳ' ಎಂಬ ಥೀಮ್ ಸಾಂಗ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ. ಈ ಥೀಮ್ ಸಾಂಗ್ಗೆ ವಿ.ಮನೋಹರ್ ಸಾಹಿತ್ಯ, ಗುರುಕಿರಣ್ ಸಂಗೀತ ಸಂಯೋಜನೆ, ಮಣಿಕಾಂತ್ ಕದ್ರಿ ಪ್ರೋಗ್ರಾಮಿಂಗ್‌ನಲ್ಲಿ ಮೂಡಿ ಬಂದಿದೆ.
-
Welcome To All #ಬೆಂಗಳೂರುಕಂಬಳ #BengaluruKambala @DKShivakumar@INCKarnataka @utkhader @siddaramaiah pic.twitter.com/BT47LcG4aO
— Ashok Kumar Rai (@AshokRaiestate) November 14, 2023 " class="align-text-top noRightClick twitterSection" data="
">Welcome To All #ಬೆಂಗಳೂರುಕಂಬಳ #BengaluruKambala @DKShivakumar@INCKarnataka @utkhader @siddaramaiah pic.twitter.com/BT47LcG4aO
— Ashok Kumar Rai (@AshokRaiestate) November 14, 2023Welcome To All #ಬೆಂಗಳೂರುಕಂಬಳ #BengaluruKambala @DKShivakumar@INCKarnataka @utkhader @siddaramaiah pic.twitter.com/BT47LcG4aO
— Ashok Kumar Rai (@AshokRaiestate) November 14, 2023
ಬೆಂಗಳೂರು ಕಂಬಳಕ್ಕೆ ಈಗಾಗಲೇ 150ಕ್ಕೂ ಅಧಿಕ ಕೋಣಗಳ ನೋಂದಣಿ ಆಗಿದ್ದು, ಆ ಎಲ್ಲ ಕೋಣಗಳನ್ನು ನವೆಂಬರ್ 23ರಂದು ಉಪ್ಪಿನಂಗಡಿಯಲ್ಲಿ ಬೀಳ್ಕೊಡುಗೆ ಮಾಡಿ ಕಳುಹಿಸಿಕೊಡಲಾಗುವುದು. ಅಷ್ಟೂ ಕೋಣಗಳನ್ನು ಹಾಸನ ಹಾಗೂ ನೆಲಮಂಗಲದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿಕೊಳ್ಳಲಾಗುವುದು. ಅಲ್ಲದೇ ಪ್ರತಿ ತಾಲೂಕಿನಲ್ಲೂ ಸ್ವಾಗತ - ಬೀಳ್ಕೊಡುಗೆ ಇರಲಿದೆ ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಅಶೋಕ್ ರೈ ತಿಳಿಸಿದ್ದಾರೆ.
ಬೆಂಗಳೂರು ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 1 ಕೋಟಿ ರೂ. ಅನುದಾನ ಘೋಷಿಸಿದ್ದಾರೆ ಎಂದು ಕಂಬಳ ಸಮಿತಿ ಉಪಾಧ್ಯಕ್ಷ ಗುಣರಂಜನ್ ಶೆಟ್ಟಿ ಮಾಹಿತಿ ನೀಡಿದ್ದಾರೆ. ಬೆಂಗಳೂರು ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯಾ ರೈ, ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಸೇರಿದಂತೆ ವಿವಿಧ ಚಿತ್ರರಂಗಗಳಲ್ಲಿ ಇರುವ ಕರಾವಳಿ ಮೂಲದ ಸಿನಿಮಾತಾರೆಯರು ಆಗಮಿಸಲಿದ್ದಾರೆ ಎಂದು ಸಮಿತಿ ಸಂಘಟನಾ ಅಧ್ಯಕ್ಷ ಉಮೇಶ್ ಶೆಟ್ಟಿ ಮಾಹಿತಿ ನೀಡಿದ್ದಾರೆ.
ಕಂಬಳ ಕ್ರೀಡೆ: ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆಯಾಗಿ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆಯೇ ಕಂಬಳ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಹೆಚ್ಚು ಈ ಕ್ರೀಡೆ ನಡೆಯುತ್ತದೆ. ಕರಾವಳಿಯ ರೈತಾಪಿ ಜನರು ಭತ್ತದ ಕೊಯಿಲಿನ ನಂತರ ತಮ್ಮ ಮನರಂಜನೆಗೋಸ್ಕರ ಏರ್ಪಡಿಸುತ್ತಿದ್ದ ಈ ಕ್ರೀಡೆಯೂ ಈಗ ರಾಜ್ಯಾದ್ಯಂತ ಹೆಸರು ವಾಸಿಯಾಗಿದೆ.
ಇದನ್ನೂ ಓದಿ: ಬೆಟ್ಟದಪುರ: ವಿಜೃಂಭಣೆಯಿಂದ ನಡೆದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿಯ ದೀವಟಿಗೆ ಉತ್ಸವ - ವಿಡಿಯೋ