ETV Bharat / state

‘ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ‘: ಯತ್ನಾಳ್ ಕಿಡಿ - ದೇಶವನ್ನು ಲೂಟಿ ಮಾಡಿದ ದರೋಡೆಕೋರರು

ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
author img

By

Published : Jul 17, 2023, 10:26 PM IST

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರು ಒಟ್ಟಿಗೆ ಸೇರುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೇಶವನ್ನು ಲೂಟಿ ಮಾಡಿದ ದರೋಡೆಕೋರರು ಒಟ್ಟಾಗಿದ್ದಾರೆ. ಇದು
ಕಾಶ್ಮೀರದಿಂದ ಕನ್ಯಾಕುಮಾರಿವರೆಗಿನ ಎಲ್ಲ ದರೋಡೆಕೋರರ ಒಕ್ಕೂಟವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ತಿಂಗಳಾಗಿದೆ. ಬರಗಾಲದ ಛಾಯೆ ಎದುರಾಗಿದೆ. ರೈತರ ಆತ್ಮಹತ್ಯೆ ಹೆಚ್ಚಿದೆ. ಆತಂಕದ ಛಾಯೆ ಹೆಚ್ಚಾಗಿದೆ ಎಂದು ಕಿಡಿ ಕಾರಿದರು.

ಹಿಂದೂ ಕಾರ್ಯಕರ್ತರ ಹಾಗೂ ಜೋಡಿ ಕೊಲೆಯಾಗಿದೆ. ನರೇಂದ್ರ ಮೋದಿ ಅವರನ್ನ ಲೋಕಸಭಾ ಚುನಾವಣೆಯಲ್ಲಿ ಸೋಲಿಸಲು ಒಟ್ಟಾಗ್ತಿದ್ದಾರೆ. ಕರ್ನಾಟಕದಲ್ಲಿ ಜಾಮೀನಿನ ಮೇಲಿರುವ ಎಲ್ಲ ಕುಟುಂಬಗಳು ಒಟ್ಟಿಗೆ ಸೇರಿವೆ. ಮತ್ತೆ ಮೋದಿ ಬಂದರೆ ಜೈಲೇ ಗತಿ ಅನ್ನೋದು ಗೊತ್ತಾಗಿದೆ ಎಂದರು.

ನಮ್ಮ ಜೊತೆ ಯಾವುದೇ ಚರ್ಚೆ ಆಗಿಲ್ಲ: ಎನ್‌ಡಿಎ ಮೈತ್ರಿ ಬಗ್ಗೆ ನಮ್ಮ ನಾಯಕರು ಮುಕ್ತವಾಗಿ ಮಾತಾಡಿದ್ದಾರೆ. ಅವರು ಸಭೆಗೆ ಆಹ್ವಾನ‌ ಬಂದಿಲ್ಲ ಅಂತಾ ಹೇಳಿದ್ದಾರೆ. ನಾನು ಮೀಡಿಯಾದಲ್ಲಿ ನೋಡಿದ್ದೇನೆ. ನಮ್ಮ ಜೊತೆ ಯಾವುದೇ ಚರ್ಚೆ ಆಗಿಲ್ಲ ಎಂದು ಜೆಡಿಎಸ್ ಶಾಸಕ ಜಿ. ಟಿ ದೇವೇಗೌಡ ತಿಳಿಸಿದರು. ಆ ತರಹದ ತೀರ್ಮಾನ ತೆಗೆದುಕೊಂಡಾಗ ಅದರ ಬಗ್ಗೆ ಮಾತನಾಡುತ್ತೇನೆ. ಸುಮ್ಮನೆ ಏನನ್ನೂ ಹೇಳೋದಿಕ್ಕೆ ಆಗುವುದಿಲ್ಲ. ನಮ್ಮ ನಾಯಕರ ಜೊತೆ ತೀರ್ಮಾನ ತೆಗೆದುಕೊಂಡು, ಶಾಸಕರನ್ನು ಕರೆದು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.

ನಾಳೆ ವಿಪಕ್ಷಗಳ ಒಕ್ಕೂಟದ ಮಹಾಮೈತ್ರಿ ಸಭೆ : ಇನ್ನೊಂದೆಡೆ ಕಾಂಗ್ರೆಸ್ ಸಮ್ಮುಖದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಮಹಾಘಟಬಂಧನ್​ ಸಭೆಗೆ 24 ಪಕ್ಷದ 46ಕ್ಕೂ ಅಧಿಕ ನಾಯಕರು ಆಗಮಿಸಿದ್ದಾರೆ. ನಾಳೆ ಲೋಕಸಭೆ ಚುನಾವಣೆ ಸಂಬಂಧ ಕಾರ್ಯತಂತ್ರ ರೂಪಿಸಲು ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರಮುಖವಾಗಿ ಆರು ಅಂಶಗಳ ಬಗ್ಗೆ ಚರ್ಚೆ ನಡೆಯಲಿದೆ ಎಂಬುದು ತಿಳಿದುಬಂದಿದೆ.

ಸೋಮವಾರದಿಂದ 2 ದಿನಗಳ ಕಾಲ ನಡೆಯುತ್ತಿರುವ ಮಹತ್ವದ ಸಭೆಯಲ್ಲಿ 24 ಪಕ್ಷದ 46ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ದಾರೆ. ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಸ್ಟಾಲಿನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಸಿಎಂ ನಿತೀಶ್ ಕುಮಾರ್, ಬಿಹಾರ ಡಿಸಿಎಂ ತೇಜಸ್ವಿ ಯಾದವ್, ಲಾಲೂ ಪ್ರಸಾದ್ ಯಾದವ್, ಅಖಿಲೇಶ್ ಯಾದವ್, ಸೀತಾರಾಮ್ ಯಚೂರಿ, ಡಿ. ರಾಜ, ವೈಕೋ, ಮೆಹಬೂಬಾ ಮುಫ್ತಿ ಸೇರಿದಂತೆ 46ಕ್ಕೂ ಅಧಿಕ ನಾಯಕರು ಪಾಲ್ಗೊಂಡಿದ್ದಾರೆ.

ಇದನ್ನೂ ಓದಿ: ನಾಳೆ ವಿಪಕ್ಷಗಳ ಒಕ್ಕೂಟದ ಮಹಾಮೈತ್ರಿ ಸಭೆ: ಪ್ರಮುಖವಾಗಿ ಆರು ಅಂಶಗಳ ಬಗ್ಗೆ ಚರ್ಚೆ ಸಾಧ್ಯತೆ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.