ETV Bharat / state

ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ - ಮುಖಂಡರ ಭೇಟಿ

ಚುನಾವಣಾ ಸಂದರ್ಭದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ನೀಡಿ ಹೆಚ್ಚುವರಿ ಅಕ್ಕಿ ಬದಲಿಗೆ ಹಣವನ್ನು ಜನರ ಖಾತೆ ಹಾಕುತ್ತೇವೆ. ಕಾಂಗ್ರೆಸ್​ ಘೋಷಣೆ ಮಾಡಿರುವ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಹೇಳಿದ್ದಾರೆ.

all-guaratees-announced-by-the-congress-will-be-implemented-dcm-dk-shivakumar
ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ
author img

By

Published : Jul 1, 2023, 6:13 PM IST

ಕಾಂಗ್ರೆಸ್​ನ ಘೋಷಿತ ಎಲ್ಲಾ ಯೋಜನೆಗಳು ಜಾರಿಗೆ ಬರಲಿದೆ: ಡಿಸಿಎಂ ಡಿಕೆಶಿ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿರುವ ಎಲ್ಲಾ ಯೋಜನೆಗಳನ್ನೂ ಜಾರಿಗೆ ತರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಗರದ ಕುಮಾರಕೃಪಾ ಅತಿಥಿಗೃಹದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನಾವು ಜನರಿಗೆ ಕೊಟ್ಟ ಮಾತಿನಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಈಗ 5 ಕೆ.ಜಿ ಅಕ್ಕಿ ಹಾಗೂ ಹೆಚ್ಚುವರಿ ಅಕ್ಕಿ ಸಿಗುವವರೆಗೂ ಅದಕ್ಕೆ ಪ್ರತಿಯಾಗಿ ಹಣ ನೀಡುತಿದ್ದೇವೆ. ಅಕ್ಕಿ ಖರೀದಿಗೆ ನಮ್ಮ ಸಚಿವರು ಎಲ್ಲಾ ಪ್ರಯತ್ನ ಮಾಡುತ್ತಿದ್ದಾರೆ. ಅಕ್ಕಿ ಸಿಗುವವರೆಗೂ ಬೇರೆ ಪಕ್ಷಗಳ ಸಲಹೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದರು. ಆರಂಭದಲ್ಲಿ ಹಣ ನೀಡಿ ಎಂದ ಬಿಜೆಪಿ ನಾಯಕರು ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ನೀಡಿ ಎಂದು ಹೇಳುತ್ತಿರುವ ಬಗ್ಗೆ ಕೇಳಿದಾಗ, "ಇದರಿಂದ ಅವರ ಇಬ್ಬಗೆಯ ನೀತಿ ಗೊತ್ತಾಗುತ್ತಿದೆ" ಎಂದು ತಿಳಿಸಿದರು.

ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ಮಾಡುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, "ಬಹಳ ಸಂತೋಷ. ಪ್ರತಿಭಟನೆ ಮಾಡಬೇಕು. ನಾವು ಅವರನ್ನು ತಡೆಯುವುದಿಲ್ಲ. ಬಿಜೆಪಿಯವರು ಕೊಟ್ಟ ಮಾತು ಈಡೇರದೇ ಇರುವುದರ ಬಗ್ಗೆ ಹೋರಾಟ ಮಾಡಲು ಹೇಳಿದ್ದೇನೆ. ಅವರು ಹೋರಾಟದ ಮೂಲಕ ನಮ್ಮ ಯೋಜನೆಗೆ ಪ್ರಚಾರ ನೀಡುತ್ತಿದ್ದಾರೆ. ಬಿಜೆಪಿ ಬಡವರ ಮೇಲೆ ಹೇಗೆ ಗದಾಪ್ರಹಾರ ಮಾಡುತ್ತಿದೆ, ಅಕ್ಕಿ ವಿಚಾರದಲ್ಲೂ ಅವರು ಹೇಗೆ ರಾಜಕೀಯ ಮಾಡುತ್ತಿದ್ದಾರೆ, ನಾವು ಜನರಿಗೆ ಅಕ್ಕಿ ನೀಡಲು ಎಷ್ಟು ಪ್ರಯತ್ನ ಮಾಡುತ್ತಿದ್ದೇವೆ ಎಂಬುದು ಜನರಿಗೆ ಅರ್ಥವಾಗುತ್ತಿದೆ. ಗೋದಾಮಿನಲ್ಲಿ ಅಕ್ಕಿ ಹುಳ ಹಿಡಿಯುತ್ತಿದ್ದರೂ ಬಡವರಿಗೆ ನೀಡದೇ ರಾಜಕಾರಣ ಮಾಡುತ್ತಿದ್ದಾರೆ. ಇದೆಲ್ಲವೂ ಜನರಿಗೆ ಗೊತ್ತಿದೆ ಎಂದರು.

ನಾವು ದೀರ್ಘಾವಧಿ ಪರಿಹಾರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಕೇಂದ್ರ ನಿಗದಿ ಮಾಡಿರುವ ಮೊತ್ತಕ್ಕೆ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ನಮ್ಮ ರಾಜ್ಯದಲ್ಲಿ ಅಕ್ಕಿ ಬೆಳೆದು ಈ ಮೊತ್ತಕ್ಕೆ ನೀಡಿದರೆ ಅವರಿಗೂ ಪ್ರೋತ್ಸಾಹ ನೀಡುತ್ತೇವೆ. ನಮಗೆ ಕೆಲ ರಾಜ್ಯದವರು ಒಂದೆರಡು ತಿಂಗಳು ಅಕ್ಕಿ ಪೂರೈಸಲು ಮುಂದಾಗಿದ್ದರು. ನಮಗೆ ತಾತ್ಕಾಲಿಕ ಪರಿಹಾರಕ್ಕಿಂತ ಶಾಶ್ವತ ಪರಿಹಾರ ಬೇಕು. ನಾವು ಆರಂಭದಲ್ಲಿ ಅಕ್ಕಿ ನೀಡಿ ನಂತರ ಅದನ್ನು ನಿಲ್ಲಿಸುವಂತೆ ಆಗಬಾರದು. ಹೀಗಾಗಿ ಬಿಜೆಪಿ ನಾಯಕರು ಕೊಟ್ಟಿರುವ ಸಲಹೆಯಂತೆ ಈಗ ಹಣ ನೀಡಲು ನಿರ್ಧರಿಸಿದ್ದೇವೆ" ಎಂದು ತಿಳಿಸಿದರು.

ಚುನಾವಣೆ ಸಮಯದಲ್ಲಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದವರ ಬಗ್ಗೆ ಕ್ರಮ ಜರುಗಿಸುವಂತೆ ಸಿದ್ದರಾಮಯ್ಯ ಪತ್ರದ ಬಗ್ಗೆ ಮಾತನಾಡಿ, "ಚುನಾವಣೆ ಸಮಯದಲ್ಲಿ ಯಾರು ಶಿಸ್ತು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಶಿಸ್ತು ಸಮಿತಿ ಕ್ರಮ ಕೈಗೊಳ್ಳಲಿದೆ" ಎಂದು ತಿಳಿಸಿದರು. ತಮಿಳುನಾಡಿಗೆ ನೀರು ಹಂಚಿಕೆ ಬಗ್ಗೆ ಕೇಳಿದಾಗ, "ನಮಗೆ ಜಗಳ ಮಾಡಲು ಇಷ್ಟ ಇಲ್ಲ. ಸುಪ್ರೀಂ ಕೋರ್ಟ್ ತೀರ್ಪು ಬಂದಿದ್ದು, ಈ ವಿಚಾರವಾಗಿ ವಾಸ್ತವಾಂಶ ಗೊತ್ತಿಲ್ಲ ಎಂದು ಭಾವಿಸುತ್ತೇನೆ. ಅವರು ನಮ್ಮ ಸಹೋದರರು. ನಾವು ಯುದ್ಧ ಮಾಡಲು ಆಗುವುದಿಲ್ಲ. ಹೀಗಾಗಿ ಕುಳಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು" ಎಂದರು.

ಬಿಜೆಪಿ ಆಂತರಿಕ ಕಚ್ಚಾಟದ ಪ್ರತಿಕ್ರಿಯಿಸಿ "ಬಿಜೆಪಿಯವರ ಬಾಯಿಗೆ ನಾವು ಹಿಂದೆಯೂ ಬೀಗ ಹಾಕಿಲ್ಲ. ಈಗಲೂ ಹಾಕುವುದಿಲ್ಲ. ಅವರ ಅನುಭವ, ನುಡಿಮುತ್ತುಗಳನ್ನು ಜನರಿಗೆ ತಿಳಿಸುತ್ತಿದ್ದಾರೆ" ಎಂದರು.

ಮುಖಂಡರ ಭೇಟಿ : ಬೆಂಗಳೂರು ಅಪಾರ್ಟ್ಮೆಂಟ್ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಕ್ರಂ ರೈ, ಕಿರಣ್ ಹೆಬ್ಬಾರ್, ಕೆಪಿಸಿಸಿ ಅಪಾರ್ಟ್ಮೆಂಟ್ ಮಾಲೀಕರ ಘಟಕದ ಅಧ್ಯಕ್ಷ, ರಾಜ್ಯಸಭೆ ಮಾಜಿ ಸದಸ್ಯ, ರಾಜೀವ್ ಗೌಡ, ಅಜಯ್, ಸತೀಶ್ ಮಲ್ಯ, ಪೀಟರ್, ಬ್ರಾಂಡ್ ಬೆಂಗಳೂರು ಫೋರ್ಸ್ ನ ಚೇತನ್ ಗೌಡ ಮತ್ತಿತರರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಕುಮಾರಕೃಪಾ ಅತಿಥಿಗೃಹದಲ್ಲಿ ಭೇಟಿ ಮಾಡಿ ಸಮಾಲೋಚನೆ ನಡೆಸಿದರು.

ಶ್ರೀಗಳಿಂದ ಆಶೀರ್ವಾದ : ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇದಾರನಾಥ ಮಠದ ಶ್ರೀ 108 ರಾವಲ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿ ಅವರನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಶನಿವಾರ ಭೇಟಿ ಮಾಡಿ ಆಶೀರ್ವಾದ ಪಡೆದರು.

ಇದನ್ನೂ ಓದಿ : ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ ‌ಮೂರು ಈಡೇರಿದೆ: ದಿನೇಶ್‌ ಗುಂಡೂರಾವ್‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.