ETV Bharat / state

ಬಿಜೆಪಿಯ ಮೂವರು ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆ: ಅರುಣ್ ಸಿಂಗ್ ವಿಶ್ವಾಸ

ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಮೂವರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.

all-karnataka-bjp-candidates-will-be-selected-for-rajyasabha
ಬಿಜೆಪಿಯ 3 ಅಭ್ಯರ್ಥಿಗಳು ರಾಜ್ಯಸಭೆಗೆ ಆಯ್ಕೆ: ಅರುಣ್ ಸಿಂಗ್ ವಿಶ್ವಾಸ
author img

By

Published : Jun 5, 2022, 3:36 PM IST

ಬೆಂಗಳೂರು : ಕರ್ನಾಟಕದಿಂದ ರಾಜ್ಯಸಭೆಗೆ ಸ್ಪರ್ಧಿಸಿರುವ ಮೂರೂ ಅಭ್ಯರ್ಥಿಗಳು ವಿಜೇತರಾಗಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಆದ್ಯತೆ ಕೊಟ್ಟಿದೆ. ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಮಾಡಿದ ಉತ್ತಮ ಕಾರ್ಯಗಳನ್ನು ಗಮನದಲ್ಲಿಟ್ಟುಕೊಂಡು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ 8 ವರ್ಷಗಳನ್ನು ಪೂರೈಸಿದೆ. ಬಡವರು, ರೈತರು, ಶೋಷಿತರು ಮತ್ತು ದಲಿತರು ಸೇರಿದಂತೆ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಕೆಲಸ ಮಾಡಿದೆ ಎಂದು ಅವರು ತಿಳಿಸಿದರು.

ಬಿಜೆಪಿ ವತಿಯಿಂದ 15 ದಿನಗಳ ಕಾಲ ಮೋದಿಯವರ ಸಾಧನೆಯನ್ನು ಜನರಿಗೆ ತಿಳಿಸುವ ಅಭಿಯಾನವನ್ನು ನಡೆಸಲಾಗುತ್ತಿದೆ. ಪ್ರತಿ ಗ್ರಾಮದ ಪ್ರತಿಯೊಂದು ಮನೆಯನ್ನು ಸಂಪರ್ಕಿಸಿ ಸಾಧನೆಯನ್ನು ತಿಳಿಸುವ ಕಾರ್ಯ ನಡೆಯುತ್ತಿದೆ. ಇದರ ಜೊತೆಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರದ ಸಾಧನೆಗಳು ಮತ್ತು ಯೋಜನೆಗಳ ಕುರಿತಾದ ಮಾಹಿತಿಗಳನ್ನು ಜನರಿಗೆ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಓದಿ : ಪರಿಸರ ಸಂರಕ್ಷಣೆಗಾಗಿ ಭಾರತದಿಂದ ವಿವಿಧ ಪ್ರಯತ್ನ: ಪ್ರಧಾನಿ ಮೋದಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.