ETV Bharat / state

ಕೊವಿಡ್ 3ನೇ ಅಲೆ ಎದುರಿಸಲು ಸಕಲ ಸಿದ್ಧತೆ: ಸಚಿವೆ ಶಶಿಕಲಾ ಜೊಲ್ಲೆ - ಅಂಗನವಾಡಿ ಕಾರ್ಯಕರ್ತೆಯರಿಗೆ ಲಸಿಕೆ

ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ. ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಸಕಲ ಸಿದ್ಧತೆ ಮಾಡಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

jolle
jolle
author img

By

Published : Jun 21, 2021, 6:27 PM IST

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಎದುರಿಸಲು ಪ್ರತಿ ತಾಲೂಕಿನಲ್ಲಿಯೂ ಮಕ್ಕಳಿಗಾಗಿ ಪ್ರತ್ಯೇಕ ಕೊವಿಡ್ ಕೇರ್ ಸೆಂಟರ್ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಕೊವಿಡ್ 3 ಅಲೆ ನಿಯಂತ್ರಣ ಕುರಿತು ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಜನ ಪ್ರತಿನಿಧಿಗಳು ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 50 ಮಕ್ಕಳು ತಂದೆ ತಾಯಿಯನ್ನು ಕಳೆದುಕೊಂಡಿದ್ದಾರೆ. ಅವರಿಗೆ ಬಾಲ ಸೇವಾ ಯೋಜನೆಯ ಮೂಲಕ ಪ್ರತಿ ತಿಂಗಳು ಮಗುವಿಗೆ 3,500 ರೂ. ನೀಡುವುದು, ಅಲ್ಲದೇ ಉಚಿತ ಶಿಕ್ಷಣ ನೀಡುವುದು, 21 ವರ್ಷ ತುಂಬಿದ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ. ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಮಕ್ಕಳ ದತ್ತು ಸ್ವಿಕಾರ:

ತಂದೆ ತಾಯಿಗಳನ್ನು ಮಕ್ಕಳನ್ನು ನೋಡಿಕೊಳ್ಳಲು ಸಂಬಂಧಿಗಳು ಶಕ್ತರಿಲ್ಲದಿದ್ದರೆ ಇಲಾಖೆ ಮೂಲಕ ದತ್ತು ಸ್ವೀಕಾರ ಕ್ರಮ ಕೈಗೊಳ್ಳಲಾಗುವುದು. ಯಾರಾದರೂ ದಾನಿಗಳು ಅವರ ಜೀವನಕ್ಕೆ ಉಜ್ವಲ ಭವಿಷ್ಯ ರೂಪಿಸಲು ಮುಂದೆ ಬಂದರೆ ಅಂತ ಮಕ್ಕಳ ಭವಿಷ್ಯ ರೂಪಿಸಲು ಇಲಾಖೆ ಕೊಂಡಿಯಾಗಿ ಕೆಲಸ ಮಾಡಲಿದೆ ಎಂದರು.

ಮೂರನೇ ಅಲೆ ನಿಯಂತ್ರಿಸಲು ಮಹಿಳಾ ಮತ್ತು ಮಕ್ಕಳ ಇಲಾಖೆ, ಆರೋಗ್ಯ, ಶಿಕ್ಷಣ, ಗ್ರಾಮೀಣಾಭಿವೃದ್ದಿ ಮತ್ತು ಪೊಲೀಸ್ ಇಲಾಖೆ ಮಕ್ಕಳನ್ನು ಗುರುತಿಸುವ ಕೆಲಸವನ್ನು ಮಾಡಲಾಗುತ್ತಿದೆ. ಮಕ್ಕಳಿಗೆ ಸೋಂಕು ದೃಢ ಪಟ್ಟರೆ ಕೊವಿಡ್ ಕೇರ್ ಸೆಂಟರ್​ಗೆ ಮಗುವಿನೊಂದಿಗೆ ತಾಯಿಯೂ ಇರಲು ಅವಕಾಶ ಮಾಡಲಾಗಿದೆ. ಯುವತಿಯರಿಗೆ ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಅಂಗವಿಕಲರಿಗೂ ಪ್ರತ್ಯೇಕ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಲ್ಲಿ ಪ್ರತ್ಯೇಕ ಮಕ್ಕಳ ಕೊವಿಡ್ ಆಸ್ಪತ್ರೆಗೆ ಚಿಂತನೆ :

ಬೆಂಗಳೂರು ನಗರ ಜಿಲ್ಲೆಯಲ್ಲಿ ಸಾಕಷ್ಟು ಆಸ್ಪತ್ರೆಗಳನ್ನು ಗುರುತಿಸಲಾಗಿದೆ. ಅದರ ಹೊರತಾಗಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೊವಿಡ್ ಆಸ್ಪತ್ರೆ ತೆರೆಯಲು ಸಲಹೆ ಬಂದಿದೆ. ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚಿಸಿ ತೀರ್ಮಾನಿಸಲಾಗುವುದು.

ಈಗಾಗಲೇ ಬಿಬಿಎಂಪಿ ವ್ಯಾಪ್ತಿಯಲ್ಲಿ 1419 ಬೆಡ್​ಗಳನ್ನು ಗುರುತಿಸಲಾಗಿದೆ. 141 ವೆಂಟಿಲೇಟರ್ ಉಳ್ಳ ಐಸಿಯು ಬೆಡ್​ಗಳು, 116 ಐಸಿಯು ರಹಿತ ಬೆಡ್​ಗಳು, 430 ಹೆಚ್​ಡಿಯು ಬೆಡ್​ಗಳು, 712 ಸಾಮಾನ್ಯ ಬೆಡ್​ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಬೆಡ್ ಬೇಡಿಕೆ ಇದೆ. ಮಕ್ಕಳಿಗೆ ಪ್ರತ್ಯೇಕವಾದ ಮಾಸ್ಕ್, ವೆಂಟಿಲೇಟರ್, ಬೆಡ್, ಔಷಧ, ಮಾತ್ರೆ ಬೇಕಾಗುತ್ತದೆ ಅದರ ಸಿದ್ದತೆಯೂ ನಡೆಯುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಪ್ರತಿ ತಾಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಮಕ್ಕಳ ತಜ್ಞರನ್ನು ಗುರುತಿಲಾಗಿದೆ. ಕಳೆದ ಒಂದು ವರ್ಷದಲ್ಲಿ ಕೊರೊನಾ ಸೋಂಕಿನಿಂದ ಜಿಲ್ಲೆಯಲ್ಲಿ 51 ಮಕ್ಕಳು ನಿಧನ ಹೊಂದಿದ್ದಾರೆ. ರಾಜ್ಯದಲ್ಲಿ ಇದುವರೆಗೂ 0-9 ವಯಸ್ಸಿನ 67687 ಮತ್ತು 09-18 ವಯಸ್ಸಿನ 170565 ಮಕ್ಕಳು ಒಟ್ಟು 0-18 ವಯಸ್ಸಿನ 2,38,252 ಮಕ್ಕಳು ಸೋಂಕಿಗೆ ತುತ್ತಾಗಿದ್ದಾರೆ.

ಜಿಲ್ಲೆಯಲ್ಲಿ ಒಂದು ವರ್ಷದಲ್ಲಿ 2 ಮಕ್ಕಳು ತಂದೆ ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ. ಅವರಿಗೆ ಮುಖ್ಯಮಂತ್ರಿ ಬಾಲ ಸೇವಾ ಯೋಜನೆ ಮೂಲಕ ಸಹಾಯಧನ ನೀಡಲಾಗುವುದು ಎಂದು ಸಚಿವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಲಸಿಕೆ:

ರಾಜ್ಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರು ಮುಂಚೂಣಿ ಕಾರ್ಯಕರ್ತೆಯರಾಗಿ ಕೆಲಸ ಮಾಡುತ್ತಿದ್ದಾರೆ. ಕೊವಿಡ್​ನಿಂದ ನಿಧನ ಹೊಂದಿದರೆ ಅವರಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಬೆಂಗಳೂರು ನಗರದಲ್ಲಿ 3 ಅಂಗನವಾಡಿ ಕಾರ್ಯಕರ್ತೆಯರು ನಿಧನ ಹೊಂದಿದ್ದಾರೆ. ಅವರಲ್ಲಿ 2ರಿಗೆ ಪರಿಹಾರ ನೀಡಲಾಗುತ್ತಿದೆ. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ 2,587 ಅಂಗನವಾಡಿ ಕೇಂದ್ರಗಳಿವೆ.

4564 ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿದ್ದಾರೆ. ಅವರಲ್ಲಿ ಶೇ 90ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕೊವಿಡ್ ಮೊದಲ ಲಸಿಕೆ ಪಡೆದಿದ್ದಾರೆ. ಶೇ 49ರಷ್ಟು ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎಡರನೇ ಡೋಸ್ ಲಸಿಕೆ ಪಡೆದಿದ್ದಾರೆ.ಅಂಗನವಾಡಿ ಬಂದ್ ಇರುವುದರಿಂದ ಪ್ರತಿ 15 ದಿನಕ್ಕೊಮ್ಮೆ ಮಕ್ಕಳಿಗೆ ಆಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ. ಜೊತೆಗೆ ಅವರ ಆರೋಗ್ಯದ ಮಾಹಿತಿ ಪಡೆದು ಸೂಕ್ತ ಚಿಕಿತ್ಸೆ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ 22,871 ಗರ್ಭಿಣಿಯರು, 19,131 ಬಾಣಂತಿಯರು, 97 ಕಿಶೋರಿಯರು ಇದ್ದಾರೆ. ಜಿಲ್ಲೆಯಲ್ಲಿ 124 ಮಕ್ಕಳು ತೀವ್ರ ಅಪೌಷ್ಡಿಕತೆಯಿಂದ ಬಳಲುತ್ತಿದ್ದಾರೆ. 9761 ಮಕ್ಕಳು ಸಾಧಾರಣ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಜಿಲ್ಲೆಯಲ್ಲಿ 39 ಪೋಕ್ಸೊ ಪ್ರಕರಣಗಳು ನಡೆದಿದ್ದು, 37 ಪ್ರಕರಣಗಳಲ್ಲಿ ಪರಿಹಾರ ಒದಗಿಸಲಾಗಿದೆ. 168 ಬಾಲ್ಯ ವಿವಾಹಗಳಾಗಿದ್ದು, 122 ಬಾಲ್ಯ ವಿವಾಹ ತಡೆಯಲಾಗಿದೆ.

28 ಬಾಲ್ಯ ವಿವಾಹ ಪ್ರಕರಣಗಳಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಈ ಬಾರಿಯ ಲಾಕ್​ಡೌನ್ ಅವಧಿಯಲ್ಲಿ ಏಪ್ರಿಲ್​​ನಿಂದ ಇಲ್ಲಿಯವರೆಗೆ 3 ಬಾಲ್ಯ ವಿವಾಹ ಪ್ರಕರಣಗಳು ಬೆಳಕಿಗೆ ಬಂದಿದ್ದು, 2 ಬಾಲ್ಯ ವಿವಾಹ ತಡೆ ಹಿಡಿಯಲಾಗಿದೆ. ಒಂದು ಪ್ರಕರಣದಲ್ಲಿ ಎಫ್​ಐಆರ್ ದಾಖಲಿಸಲಾಗಿದೆ. ಹೊರಗಡೆಯಿಂದ ಬೆಂಗಳೂರಿಗೆ ವಲಸೆ ಬಂದಿರುವ 513 ಮಕ್ಕಳಿಗೆ ಆಹಾರ ವಿತರಣೆ ಮಾಡಲಾಗಿದೆ ಎಂದು ಸಚಿವರು ವಿವರಿಸಿದರು.

ಮಕ್ಕಳ ಮೇಲೆ ಲಸಿಕೆ ಪ್ರಯೋಗ:

ಇದೇ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 30 ಮಕ್ಕಳ ಮೇಲೆ ಲಸಿಕೆ ಪ್ರಯೋಗ ಮಾಡಲಾಗಿದೆ. ಅದು ಯಶಸ್ವಿಯಾದರೆ ಮುಂದಿನ ತೀರ್ಮಾನ ಸಿಎಂ, ಪಿಎಂ ತೆಗೆದುಕೊಳ್ಳುತ್ತಾರೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗುವುದು. ತಜ್ಞರ ವರದಿಯಲ್ಲಿ ಅಧಿಕೃತವಾಗಿ ಏನು ವರದಿ ನೀಡಿದ್ದಾರೆ ಎನ್ನುವುದು ನಮ್ಮ ಇಲಾಖೆಗೆ ಇನ್ನೂ ಮಾಹಿತಿ ಬಂದಿಲ್ಲ. ಸಿಎಂ ನೋಡಿ ನಮ್ಮ ಇಲಾಖೆಗೆ ಕಳುಹಿಸಿಕೊಡುತ್ತಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.