ETV Bharat / state

ಪುತ್ರನ ಅನಾರೋಗ್ಯ ಕಾರಣದಿಂದ ಕಾರಜೋಳ ನೆರೆ ಪೀಡಿತ ಪ್ರದೇಶಗಳಿಗೆ ತೆರಳಿಲ್ಲ: ಬಿಎಸ್​ವೈ ಸ್ಪಷ್ಟನೆ - ಕಾರಜೋಳ ಪುತ್ರನ ಅನಾರೋಗ್ಯ

ಡಿಸಿಎಂ ಗೋವಿಂದ ಕಾರಜೋಳ ಅವರ ಮಗ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಅವರ ಮಗನನ್ನು ಚೆನ್ನೈಗೆ ಕರೆದುಕೊಂಡು‌ ಹೋಗುತ್ತಿದ್ದಾರೆ. ಹಾಗಾಗಿ ಅವರು ನೆರೆ ಪೀಡಿತ ಪ್ರದೇಶಗಳಿಗೆ ತೆರಳಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

CM BS Yeduyurappa
ಶಿಕಾರಿಪುರ ಪ್ರವಾಸಕ್ಕೆ ತೆರಳಿದ ಸಿಎಂ ಬಿ.ಎಸ್.ಯಡಿಯೂರಪ್ಪ
author img

By

Published : Oct 18, 2020, 2:02 PM IST

ಬೆಂಗಳೂರು: ಡಿಸಿಎಂ ಗೋವಿಂದ ಕಾರಜೋಳ ಪುತ್ರನ ಅನಾರೋಗ್ಯ ಕಾರಣದಿಂದ ಅವರು ನೆರೆ ಪೀಡಿತ ಪ್ರದೇಶಗಳಿಗೆ ತೆರಳಿಲ್ಲ. ಉಳಿದಂತೆ ಎಲ್ಲ ಸಚಿವರು ಭೇಟಿ ನೀಡಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಶಿಕಾರಿಪುರ ಪ್ರವಾಸಕ್ಕೆ ತೆರಳಿದ ಸಿಎಂ ಬಿ.ಎಸ್.ಯಡಿಯೂರಪ್ಪ

2 ದಿನಗಳ ಕಾಲ ಸ್ವ- ಕ್ಷೇತ್ರ ಶಿಕಾರಿಪುರ ಪ್ರವಾಸಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ತೆರಳಿದರು. ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ನೆರೆಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು. ನೆರೆ ಪ್ರದೇಶಗಳಿಗೆ ಜಿಲ್ಲಾ‌ ಉಸ್ತುವಾರಿ ಸಚಿವರು ತೆರಳದ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕೆಲವು ಸಚಿವರು ನೆರೆ ಪೀಡಿತ ಜಿಲ್ಲೆಗಳಿಗೆ ಭೇಟಿ ಕೊಟ್ಟಿದ್ದಾರೆ. ಡಿಸಿಎಂ ಗೋವಿಂದ ಕಾರಜೋಳ ಅವರ ಮಗ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಅವರ ಮಗನನ್ನು ಚೆನ್ನೈಗೆ ಕರೆದುಕೊಂಡು‌ ಹೋಗುತ್ತಿದ್ದಾರೆ. ಅವರಿಗೆ ಸಮಸ್ಯೆಗಳಿವೆ. ಆದರೆ, ಉಳಿದವರು ಅವರ ಶಕ್ತಿ ಮೀರಿ ಕೆಲಸ ಮಾಡುತ್ತಿದ್ದಾರೆ. ಎರಡು ದಿನ ಶಿಕಾರಿಪುರದಲ್ಲಿದ್ದು, ಮತ್ತೆ ಬರುತ್ತೇನೆ ಎಂದರು.

ರಾಜ್ಯದ ನೆರೆ ಪರಿಸ್ಥಿತಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಸಿಎಂ, ಸಿದ್ದರಾಮಯ್ಯ ಪ್ರತಿಪಕ್ಷ ನಾಯಕರು. ಅವರು ಹೀಗೆ ಒತ್ತಾಯ ಮಾಡಿದರೆ, ತಪ್ಪೇನಿಲ್ಲ. ಪ್ರತಿಪಕ್ಷದವರಾಗಿ ಅವರು ಅವರ ಕೆಲಸ ಮಾಡಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.