ಬೆಂಗಳೂರು: ಕೊರೊನಾ 3ನೇ ಅಲೆ ಹೆಚ್ಚಿನ ಹಾನಿ ಮಾಡದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಕೋವಿಡ್ ಅಲೆ ಎದುರಿಸಲು ಈಗನಿಂದಲೇ ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ತಿಳಿಸಿದ್ದಾರೆ.
ಇಂದು ಜೆಪಿ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಬಳಿಯ ಆರೋಗ್ಯದೀಪ ಸ್ವಾಸ್ಥ್ಯ ಸಮಿತಿ, ಸ್ವಾತಿ ಮಹಿಳಾ ಸಂಘ ಹಾಗೂ ಸ್ಥಳೀಯ ಮುಖಂಡರ ಸಹಯೋಗದೊಂದಿಗೆ 18-45 ವರ್ಷದೊಳಗಿನವರಿಗೆ ಉಚಿತವಾಗಿ ಕೋವಿಡ್ ಲಸಿಕೆ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕೊರೊನಾ ಮಹಾಮಾರಿ ಎಲ್ಲರನ್ನೂ ಒಂದಲ್ಲ ಒಂದು ರೀತಿಯಲ್ಲಿ ತೊಂದರೆ ಉಂಟು ಮಾಡಿದೆ. ಈ ಮಹಾಮಾರಿಯ 3ನೇ ಅಲೆಯನ್ನು ತಡೆಯಲು ಲಸಿಕಾ ಕಾರ್ಯಕ್ರಮ ಬಹಳ ಪ್ರಮುಖವಾದದ್ದು. ಈ ನಿಟ್ಟಿನಲ್ಲಿ ಕ್ಷೇತ್ರದ ಹಲವಾರು ಪ್ರದೇಶಗಳಲ್ಲಿ ಉಚಿತ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅದರ ಉಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಓದಿ: ನಮ್ಮಲ್ಲಿರುವ ಲೋಪದೋಷಗಳ ಬಗ್ಗೆ ನಾನು ಗಟ್ಟಿಯಾಗಿ ಧ್ವನಿ ಎತ್ತುತ್ತಿದ್ದೇನೆ: ಸಿ.ಪಿ ಯೋಗೇಶ್ವರ್