ETV Bharat / state

ಅಕ್ರಮ ಗಣಿಗಾರಿಕೆ ಆರೋಪ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು - ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ

ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ವಿರುದ್ಧ ಎಫ್​ಐಆರ್​ ದಾಖಲಾಗಿದೆ.

allegation-of-illegal-mining-fir-filed-against-mla-munirath
ಅಕ್ರಮ ಗಣಿಗಾರಿಕೆ ಆರೋಪ : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು
author img

By

Published : Jul 13, 2023, 1:10 PM IST

Updated : Jul 13, 2023, 2:13 PM IST

ಯಲಹಂಕ (ಬೆಂಗಳೂರು) : ಮಾಜಿ ಸಚಿವ, ರಾಜರಾಜೇಶ್ವರಿ ನಗರದ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಭೂಮಿ ದಾಖಲೆ ಸಂಬಂಧ ಎಫ್ಐಆರ್ ದಾಖಲಾಗಿದೆ. ಮುನಿರತ್ನ ಅವರನ್ನು ಆರೋಪಿ ಸಂಖ್ಯೆ 4 (A4) ಎಂದು ಗುರುತಿಸಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಸರ್ಕಾರಿ ಜಮೀನು ಸೇರಿದಂತೆ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡಿದ್ದಾರೆ ಎನ್ನಲಾದ ಪ್ರಕರಣ ಇದಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚಿಕ್ಕಜಾಲ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಕೇಸು ದಾಖಲಾಗಿದೆ. ಅನುಮತಿ ಪಡೆಯದೆ ಅಕ್ರಮವಾಗಿ ಜಿಲೆಟಿನ್​ ಸ್ಫೋಟಿಸಿದ ಆರೋಪದಡಿ ಯಲಹಂಕ ತಹಶೀಲ್ದಾರ್ ಅನಿಲ್ ಅರಳೋಕರ್ ಅವರು ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ದೂರು ದಾಖಲಿಸಿದ್ದರು. ಇದರ ಜೊತೆಗೆ ಹುಣಸಮಾರನಹಳ್ಳಿಯ ಜಮೀನಿನಲ್ಲಿ ಗಣಿಗಾರಿಕೆ ವೇಳೆ ಜಿಲೆಟಿನ್​ ಸ್ಫೋಟ ಮಾಡಿದ ಆರೋಪವೂ ಕೇಳಿಬಂದಿತ್ತು.

ಹುಣಸಮಾರನಹಳ್ಳಿ ಗ್ರಾಮಸ್ಥರಿಂದ ಪ್ರತಿಭಟನೆ : ಹುಣಸಮಾರನಹಳ್ಳಿ ಜಮೀನಿನಲ್ಲಿ ನಡೆಯುತ್ತಿದ್ದ ಗಣಿಗಾರಿಕೆ ವಿರುದ್ಧ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದ ತಹಶೀಲ್ದಾರ್ ಈ ಬಗ್ಗೆ ದೂರು ದಾಖಲು ಮಾಡಿದ್ದರು. ಹುಣಸಮಾರನಹಳ್ಳಿ ಸರ್ವೆ ನಂಬರ್ 177/3, 178/1.2.3 ಹಾಗೂ ಸೊಣಪ್ಪನಹಳ್ಳಿ ಸರ್ವೆ ನಂ. 34/1 2 3, 17/7 8,9ರಲ್ಲಿ ಗಣಿಗಾರಿಕೆ ಮಾಡಲಾಗಿದ್ದು, ಆರೋಪಿಗಳಾದ ಆನಂದನ್, ಗಣೇಶ್, ರಾಧಮ್ಮ, ಶಾಸಕ ಮುನಿರತ್ನ ವಿರುದ್ಧ ಸ್ಫೋಟಕ ಕಾಯ್ದೆ 1884 US 9B(1b), ಕರ್ನಾಟಕ ಭೂ ಕಂದಾಯ ಕಾಯ್ದೆ 1964ರಡಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ : ಕೋಮುದ್ವೇಷ ಭಾಷಣ ಆರೋಪ: ಸಚಿವ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ, ಗಣಿಗಾರಿಕೆ ಅಂದ್ರೆ ನನಗೆ ಏನೂ ಅಂತಲೂ ಗೊತ್ತಿಲ್ಲ: ಮುನಿರತ್ನ

ವಿಧಾನಸೌಧದಲ್ಲಿ ‌ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮುನಿರತ್ನ ಮಾತನಾಡಿದರು. "ಗಣಿಗಾರಿಕೆ ಮಾಡುವ ವೃತ್ತಿ ನನ್ನದಲ್ಲ. ಗಣಿಗಾರಿಕೆ ಅಂದ್ರೇನು ಅಂತಲೂ ಗೊತ್ತಿಲ್ಲ. ನಾನು ಮನೆ ಕಟ್ಟಲು ಪಾಯ ತೆಗೆಯುತ್ತಿದ್ದೇನೆ. ಗಣಿಗಾರಿಕೆ ಅಂದ್ರೆ ಸರ್ಕಾರದಿಂದ ಲೈಸನ್ಸ್ ಪಡೆಯಬೇಕು. ಅಲ್ಲಿಂದ ಹೊರಗೆ ಕಳಿಸೋದು ಗಣಿಗಾರಿಕೆ. ಕಟ್ಟಡ ಕಟ್ಟಲು ಹಿಟಾಚಿ ಮೂಲಕ ಪಾಯ ತೆಗೆಯಲಾಗ್ತಿದೆ. ಜಿಲೆಟಿನ್ ಸಿಡಿದೋನತ್ರ ಲೈಸನ್ಸ್ ಇದೆ. ಹಾಗಾಗಿ, ಇದು ಗಣಿಗಾರಿಕೆ ಅಲ್ಲ" ಎಂದು ಹೇಳಿದರು.

"ಬೆಂಗಳೂರಿನಲ್ಲಿ 28 ವಿಧಾನಸಭಾ ಕ್ಷೇತ್ರಗಳಿವೆ. 15 ದಿನದಲ್ಲಿ 30 ಅಧಿಕಾರಿಗಳು ಸಸ್ಪೆಂಡ್ ಆಗಿದ್ದಾರೆ. ಅಧಿಕಾರಿಗಳು ಕೆಲಸ ಮಾಡಲು ಹೆದರುತ್ತಿದ್ದಾರೆ. ಡಿಸಿಎಂ ಡಿಕೆಶಿ ಅವರ ಜೊತೆ ಚರ್ಚೆಗೆ ಅವಕಾಶ ಕೇಳಿದ್ದೇನೆ. ಅವರು ಅವಕಾಶ ಕೊಟ್ಟಾಗ ಈ ಬಗ್ಗೆ ಮಾತಾಡ್ತೀನಿ" ಎಂದು ತಿಳಿಸಿದರು.

ನಿಮ್ಮನ್ನು ಟಾರ್ಗೆಟ್ ಮಾಡಲಾಗ್ತಿದೆಯೇ ಎಂಬ ವಿಚಾರವಾಗಿ ಮಾತನಾಡಿ, "ಅವರೇ ಹೇಳಿದ್ರು ಒಂದು ವಿಕೆಟ್‌ ಮಿಸ್ ಆಗಿದೆ, ಅದನ್ನು ತೆಗೀಬೇಕು ಅಂತ. ಅವರು ಕ್ರಿಕೆಟ್ ಪ್ಲೇಯರ್ ಆಡಲಿ, ನೋಡೋಣ" ಎಂದು ಸೂಚ್ಯವಾಗಿ ನುಡಿದರು.

Last Updated : Jul 13, 2023, 2:13 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.