ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಅವರು, ಈ ಹಿಂದೆ ಪ್ರತಿಭಟನೆ ನಡೆಸುವ ವೇಳೆ, ಸಾಮಾಜಿಕ ಅಂತರ ಪಾಲನೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಕೀಲೆ ಗೀತಾ ಮಿಶ್ರಾ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಹಜ್ ಭವನದಲ್ಲಿ ಕ್ವಾರಂಟೈನ್ನಲ್ಲಿದ್ದ ತಬ್ಲಿಘಿ ಜಮಾತ್‍ನ ವಿದೇಶಿಯರನ್ನು ತಮ್ಮ ಕ್ಷೇತ್ರದ ವ್ಯಾಪ್ತಿಯ ಖಾಸಗಿ ರೆಸಾರ್ಟ್‍ಗೆ ಸ್ಥಳಾಂತರಿಸುವ ವಿಚಾರವಾಗಿ, ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ ಪ್ರತಿಭಟನೆ ನಡೆಸಿದ್ದರು.
ಈ ವೇಳೆ, ಸಿಎಂ ರಾಜಕೀಯ ಕಾರ್ಯದರ್ಶಿ ಲಾಕ್‍ಡೌನ್ ನಿಯಮಗಳನ್ನು ಮತ್ತು ಸಾಮಾಜಿಕ ಅಂತರ ಪಾಲನೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ವಕೀಲೆ ಗೀತಾ ಮಿಶ್ರಾ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಶಾಸಕ ಎಸ್.ಅರ್. ವಿಶ್ವನಾಥ ಅವರು 50ಕ್ಕೂ ಹೆಚ್ಚು ಜನರನ್ನು ಗುಂಪು ಕಟ್ಟಿಕೊಂಡು ಪ್ರತಿಭಟನೆ ನಡೆಸಿದ್ದರು.
ಆದ್ದರಿಂದ, ಲಾಕ್‍ಡೌನ್ ನಿಯಮಗಳನ್ನು ಹಾಗೂ ಸಾಮಾಜಿಕ ಅಂತರವನ್ನು ಉಲ್ಲಂಘಿಸಿರುವ ಶಾಸಕ ಎಸ್.ಆರ್. ವಿಶ್ವನಾಥ್ ವಿರುದ್ದ ಸಾಂಕ್ರಾಮಿಕ ಕಾಯಿಲೆಗಳ (ತಿದ್ದುಪಡಿ) ಸುಗ್ರಿವಾಜ್ಞೆ ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಮನವಿ ಮಾಡಿದ್ದಾರೆ.