ಬೆಂಗಳೂರು: ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಇತ್ತೀಚೆಗೆ ಬೆಂಗಳೂರಿನ ದಾರೂಲ್ ಉಲೂಮ್ ಸಯೀದಿಯಾ ಎಂಬ ಮಕ್ಕಳ ಅನಾಥಾಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್ ಎಂಬುವರ ದೂರಿನ ಮೇರೆಗೆ ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ದಾರೂಲ್ ಉಲೂಮ್ ಸಯೀದಿಯಾ ಮಕ್ಕಳ ಅನಾಥಾಶ್ರಮಕ್ಕೆ ರಾಷ್ಟ್ರೀಯ ಆಯೋಗದ ಅಧ್ಯಕ್ಷ ಪ್ರಿಯಾಂಕ ಕಾನೂಂಗೊ ಭೇಟಿ ನೀಡಿದ್ದರು. ಅನಾಥಾಶ್ರಮದಲ್ಲಿ ಮಕ್ಕಳನ್ನು ತಾಲಿಬಾನ್ ರೀತಿಯಲ್ಲಿ ನಡೆಸಿಕೊಳ್ಳಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಮಕ್ಕಳನ್ನು ಶಾಲೆಗೆ ಕಳುಹಿಸದೇ ಶಿಕ್ಷಣದಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಮಕ್ಕಳು ತಾಲಿಬಾನ್ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ವಿಡಿಯೋ ಜೊತೆಗೆ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದರು.
-
बंगलुरु,कर्नाटक में दारूल उलूम सैय्यादिया यतीम खाना नाम से अवैध ढंग से चलते हुए एक ग़ैरपंजीकृत अनाथ आश्रम का औचक निरीक्षण किया जिसमें कई अनियमिततायें पायी गयीं।
— प्रियंक कानूनगो Priyank Kanoongo (@KanoongoPriyank) November 20, 2023 " class="align-text-top noRightClick twitterSection" data="
यहाँ क़रीब 200 यतीम (अनाथ) बच्चों को रखा गया है।
100 वर्गफ़िट के कमरे में 8 बच्चों का रखा जाता है,ऐसे 5 कमरों में 40… pic.twitter.com/dnp1g8Wj7a
">बंगलुरु,कर्नाटक में दारूल उलूम सैय्यादिया यतीम खाना नाम से अवैध ढंग से चलते हुए एक ग़ैरपंजीकृत अनाथ आश्रम का औचक निरीक्षण किया जिसमें कई अनियमिततायें पायी गयीं।
— प्रियंक कानूनगो Priyank Kanoongo (@KanoongoPriyank) November 20, 2023
यहाँ क़रीब 200 यतीम (अनाथ) बच्चों को रखा गया है।
100 वर्गफ़िट के कमरे में 8 बच्चों का रखा जाता है,ऐसे 5 कमरों में 40… pic.twitter.com/dnp1g8Wj7aबंगलुरु,कर्नाटक में दारूल उलूम सैय्यादिया यतीम खाना नाम से अवैध ढंग से चलते हुए एक ग़ैरपंजीकृत अनाथ आश्रम का औचक निरीक्षण किया जिसमें कई अनियमिततायें पायी गयीं।
— प्रियंक कानूनगो Priyank Kanoongo (@KanoongoPriyank) November 20, 2023
यहाँ क़रीब 200 यतीम (अनाथ) बच्चों को रखा गया है।
100 वर्गफ़िट के कमरे में 8 बच्चों का रखा जाता है,ऐसे 5 कमरों में 40… pic.twitter.com/dnp1g8Wj7a
ಇದಕ್ಕೆ ಪ್ರತಿಕ್ರಿಯಿಸಿದ್ದ ಆಶ್ರಮದ ಟ್ರಸ್ಟಿ ಆಶ್ರಫ್ ಖಾನ್, ತಮ್ಮ ಆಶ್ರಮದ ಮೇಲೆ ಬಂದಿರುವ ಆರೋಪ ಸುಳ್ಳು ಎಂದಿದ್ದರು. ಮಕ್ಕಳ ಹಕ್ಕುಗಳ ಸಂರಕ್ಷಣೆಯ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಆಶ್ರಮಕ್ಕೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷರಾದ ಪ್ರಿಯಾಂಕ ಕಾನೂಂಗೊ ವಿರುದ್ಧ ಡಿ ಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೊತೆಗೆ ರಾಜ್ಯ ಗೃಹ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ. ಅನಾಥಾಶ್ರಮ ನಡೆಸಲು ಅನುಮತಿ ಪಡೆದಿರುವುದು ಸೇರಿದಂತೆ ಇತರ ವಿಚಾರಗಳ ಬಗ್ಗೆ ಗೃಹ ಇಲಾಖೆ ಸಂಪೂರ್ಣ ತನಿಖೆಗೆ ಸೂಚಿಸಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಚೊಚ್ಚಲ ಕಂಬಳಕ್ಕೆ ಪೂರ್ಣಗೊಂಡ ಸಿದ್ಧತೆ: 200ಕ್ಕೂ ಹೆಚ್ಚು ಕೋಣಗಳು ಕಣಕ್ಕೆ