ETV Bharat / state

ಬಿಡಿಎ ಪ್ರಧಾನ ಕಚೇರಿಯ ವಿವಿಧ ವಿಭಾಗಗಳ ಮೇಲೆ ಲೋಕಾಯುಕ್ತ ದಾಳಿ

ಬಿಡಿಎ ಪ್ರಧಾನ ಕಚೇರಿ ಮೇಲೆ ಲೋಕಾಯುಕ್ತ ದಾಳಿ - ಆರು ತಂಡಗಳಿರುವ 35 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿಯಿಂದ ದಾಖಲೆ ಪರಿಶೀಲನೆ - ಇಂದು ರಾಜ್ಯದ ವಿವಿಧೆಡೆ ದಾಳಿ ನಡೆಸಿರುವ ಅಧಿಕಾರಿಗಳು

author img

By

Published : Feb 10, 2023, 10:34 AM IST

Updated : Feb 10, 2023, 8:00 PM IST

Lokayukta
ಲೋಕಾಯುಕ್ತ
ಬಿಡಿಎ ಪ್ರಧಾನ ಕಚೇರಿಯ ವಿವಿಧ ವಿಭಾಗಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ​(ಬಿಡಿಎ) ಪ್ರಧಾನ ಕಚೇರಿ ಮೇಲೆಯೂ ದಾಳಿ ನಡೆದಿದೆ. ಕುಮಾರಕೃಪ ರಸ್ತೆಯಲ್ಲಿರುವ ಬಿಡಿಎ ಕಚೇರಿ ಆರು ತಂಡಗಳಿಂದ 35 ಮಂದಿ ಅಧಿಕಾರಿ ಹಾಗೂ ಸಿಬ್ಬಂದಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್​ ಪಾಟೀಲ್​ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಎಂಜಿನಿಯರಿಂಗ್ ವಿಭಾಗ, ನಗರ ಯೋಜನಾ ವಿಭಾಗ, ಭೂ ಪರಿಹಾರ ವಿಭಾಗ ಸೇರಿದಂತೆ ನಾಲ್ಕು ವಿಭಾಗಗಳ‌‌ಲ್ಲಿ ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ. ಅಲ್ಲದೆ, ಲೋಕಾಯುಕ್ತ ಐಜಿ ಸುಬ್ರಮಣ್ಯೇಶ್ವರ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಬಿಡಿಎ ಕಚೇರಿಗೆ ಭೇಟಿ ನೀಡಿದ್ದಾರೆ.

ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರರು, ಬಿಡಿಎ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ನಮ್ಮ ತಂಡದಿಂದ ದಾಳಿ ನಡೆದಿದೆ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯ ದಾಖಲೆ ಪರಿಶೀಲನೆ ನಡೆಯುತ್ತಿದೆ. ಪೂರ್ಣಗೊಂಡ ಬಳಿಕ ಈ ಬಗ್ಗೆ ವಿಸ್ತೃತ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಆದಾಯಕ್ಕೂ ಅಧಿಕ ಆಸ್ತಿ ಸಂಗ್ರಹ ಆರೋಪದಡಿ ಮೊಟ್ಟ ಮೊದಲ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಆರೋಪಿ ಅಧಿಕಾರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದ್ದರು. ಕೋಲಾರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟೇಶ್. ಜಿ ವಿರುದ್ಧ ಆದಾಯಕ್ಕೂ ಅಧಿಕ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿತ್ತು. ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ರಾಮನಗರ,‌ ಕೋಲಾರ, ಬೆಂಗಳೂರು ಸೇರಿದಂತೆ ವೆಂಕಟೇಶ್ ಅವರಿಗೆ ಸಂಬಂಧಿಸಿದ 8 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಮನಗರದ ಮಾಗಡಿ - ರಾಮನಗರ ರಸ್ತೆಯಲ್ಲಿರುವ ಗುಡ್ಡಹಳ್ಳಿಯ ಚೇತನ್ ಫಾರ್ಮ್ ಹೌಸ್ ಮೇಲೆ ದಾಳಿ ನಡೆದಿದೆ. ಲೋಕಾಯುಕ್ತ ಸಿಪಿಐ ಸತೀಶ್ ನೇತೃತ್ವದಲ್ಲಿ ದಾಳಿ ನಡೆದಿದ್ದು, 6ಕ್ಕೂ ಹೆಚ್ಚು ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಫಾರಂ ಹೌಸ್​ನಲ್ಲಿ ಬೆಲೆಬಾಳುವ ಮರಗಳು, ಮನೆ ಮೌಲ್ಯ ಸೇರಿದಂತೆ ಆಸ್ತಿ ಪತ್ರ ದಾಖಲಾತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಲಂಚಕ್ಕೆ ಬೇಡಿಕೆ: ಬಳ್ಳಾರಿಯಲ್ಲಿ ಇಬ್ಬರು ಸರ್ವೇಯರ್‌ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಬಲೆಗೆ ಸರ್ಕಾರಿ ವಿಶೇಷ ಅಭಿಯೋಜಕಿ: ಆರೋಪಿಯಿಂದ ಲಂಚ ಸ್ವೀಕರಿಸುವ ವೇಳೆ ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತರ ಬಲೆಗೆ ಬಿದ್ದಿರುವ ಘಟನೆ ದಾವಣಗೆರೆಯಲ್ಲಿ ಇತ್ತೀಚೆಗೆ ವರದಿಯಾಗಿತ್ತು. ರೇಖಾ ಕೋಟೆಗೌಡರ ಲೋಕಾಯುಕ್ತರ ಬಲೆಗೆ ಬಿದ್ದಿರುವ ಸರ್ಕಾರಿ ವಿಶೇಷ ಅಭಿಯೋಜಕಿ. ಒಂದು ಲಕ್ಷ 87 ಸಾವಿರ ರೂಪಾಯಿ‌ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್​ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದರು.

ರೇಖಾ ಕೋಟೆಗೌಡರ ಅವರು ದಾವಣಗೆರೆಯ ವಿಶೇಷ ಪೋಕ್ಸೋ ಕೋರ್ಟ್​​ನ ವಿಶೇಷ ಅಭಿಯೋಜಕಿಯಾಗಿದ್ದು, ದಾವಣಗೆರೆ ನಗರದ ಪಿಜೆ ಬಡಾವಣೆಯ ಅವರ ನಿವಾಸದಲ್ಲಿ ಲಂಚ ಸ್ವೀಕಾರ ಮಾಡುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದರು. ಪೋಕ್ಸೋ ಪ್ರಕರಣದ ಆರೋಪಿ ಮದನ್ ಎಂಬಾತನಿಂದ ಮೂರು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗ್ತಿದೆ. ಕೆಲ ದಿನಗಳ ಹಿಂದೆ ಒಂದು ಲಕ್ಷದ 13 ಸಾವಿರ ರೂಪಾಯಿ ಪಡೆದಿದ್ದ ಅಭಿಯೋಜಕಿ, ಉಳಿದ ಹಣ 1.87 ಲಕ್ಷ ಹಣ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದರು.

ಇದನ್ನೂ ಓದಿ: ಆರೋಪಿಯಿಂದ ಲಂಚ ಸ್ವೀಕಾರ; ಲೋಕಾಯುಕ್ತ ಬಲೆಗೆ ಸರ್ಕಾರಿ ವಿಶೇಷ ಅಭಿಯೋಜಕಿ

ಲಂಚ ನೀಡುವಂತೆ ಲಾರಿ ಚಾಲಕನಿಗೆ ಬೇಡಿಕೆ: ಲಂಚ ಪಡೆಯುತ್ತಿದ್ದಾಗ ಪೊಲೀಸ್​ ಕಾನ್​ಸ್ಟೆಬಲ್​ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿತ್ತು. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ಕಾನ್ಸ್​ಟೇೆಬಲ್​ ಸಜನ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಮಣ್ಣು ಸಾಗಿಸುತ್ತಿದ್ದ ಲಾರಿ ತಡೆದ ಸಜನ್​​ ಕೇಸ್​ ಹಾಕದೆ, ಲಾರಿ ಚಾಲಕ​ ಮಡಿಕೇರಿ ತಾಲೂಕಿನ ಬಿಳಿಗೇರಿಯ ಕಿರಣ್​ಗೆ, ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದೀರಾ, ಕೇಸ್​ ಹಾಕುತ್ತೇವೆ ಎಂದು ಹೆದರಿಸಿದ್ದಾರೆ. ಕೇಸ್​ ಹಾಕುತ್ತಾರೆ ಎನ್ನುವ ಭಯದಲ್ಲಿ ಪೊಲೀಸ್​ ಬಳಿ ಲಾರಿ ಚಾಲಕ ರಿಕ್ವೆಸ್ಟ್​ ಮಾಡಿಕೊಂಡಾಗ ಮತ್ತಷ್ಟು ಭಯಪಡಿಸಿದ್ದಾರೆ. ಅಷ್ಟೇ ಅಲ್ಲದೇ ಮೂವತ್ತು ಸಾವಿರ ರೂಪಾಯಿ ಲಂಚ ಬೇಡಿಕೆ ಇಟ್ಟು, ಹಣ ಕೊಟ್ಟರೆ ಬಿಡುತ್ತೇನೆ, ಇಲ್ಲವೆಂದರೆ ಕೇಸ್ ಹಾಕಿ ಲಾರಿ ಸೀಜ್​ ಮಾಡಬೇಕಾಗುತ್ತದೆ ಎಂದು ಬೆದರಿಸಿದ್ದಾಗಿ ಆರೋಪಿಸಲಾಗಿತ್ತು.

ಇದನ್ನೂ ಓದಿ: ಲಂಚ ನೀಡುವಂತೆ ಲಾರಿ ಚಾಲಕನಿಗೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಕಾನ್​ಸ್ಟೆಬಲ್​

Last Updated : Feb 10, 2023, 8:00 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.