ETV Bharat / state

ಬಾಲ ನ್ಯಾಯ ಮಂಡಳಿ ಆಯ್ಕೆ ಸಮಿತಿಗೆ ಅರ್ಹರಲ್ಲದವರ ನೇಮಕ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬಾಲ ನ್ಯಾಯ ಮಂಡಳಿ ಆಯ್ಕೆ ಸಮಿತಿಗೆ ಅರ್ಹರಲ್ಲದವರ ನೇಮಕ ಆರೋಪ ಹಿನ್ನೆಲೆ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ.

High court notice to Government,  High court notice to Government news, Balanayayya Select Committee, ಬಾಲನ್ಯಾಯ ಮಂಡಳಿ ಆಯ್ಕೆ ಸಮಿತಿ, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್, ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಸುದ್ದಿ,
ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
author img

By

Published : Dec 18, 2020, 2:51 PM IST

Updated : Dec 18, 2020, 2:59 PM IST

ಬೆಂಗಳೂರು : ರಾಜ್ಯದಲ್ಲಿರುವ ಬಾಲ ನ್ಯಾಯ ಮಂಡಳಿಗಳು ಹಾಗೂ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡುವ ಕರ್ನಾಟಕ ರಾಜ್ಯ ಆಯ್ಕೆ ಸಮಿತಿಗೆ ಇಬ್ಬರು ಅನರ್ಹ ಸದಸ್ಯರನ್ನು ನೇಮಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಡಳಿ ಮತ್ತು ಸಮಿತಿಗಳಿಗೆ ಸದಸ್ಯ-ಅಧ್ಯಕ್ಷರನ್ನು ನೇಮಕ ಮಾಡುವ ಆಯ್ಕೆ ಸಮಿತಿಗೆ ಅರ್ಹತೆ ಇಲ್ಲದವರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ವಕೀಲೆ ಸುಧಾ ಕಾಟ್ವ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿಯನ್ನು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿದಾರರ ಪರ ವಕೀಲ ಎಸ್. ಉಮಾಪತಿ ಅವರ ವಾದ ಆಲಿಸಿದ ಪೀಠ, ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜನವರಿ 28ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ...

ರಾಜ್ಯದ ಬಾಲ ನ್ಯಾಯ ಮಂಡಳಿ ಮತ್ತು ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ಆಯ್ಕೆ ಮಾಡುವ ಅಧಿಕಾರವನ್ನು ಕರ್ನಾಟಕ ರಾಜ್ಯ ಆಯ್ಕೆ ಸಮಿತಿ ಹೊಂದಿದೆ. ಈ ಸಮಿತಿಗೆ ಸರ್ಕಾರೇತರ ಸಂಸ್ಥೆಗೆ ಸೇರಿದ ಲತಾ ಜಗದೀಶ್ ನಾರಾಯಣ ಮತ್ತು ಎಸ್.ಎಂ.ಬಡಸ್ಕರ್ ಅವರನ್ನು ಸದಸ್ಯರನ್ನಾಗಿ ಸರ್ಕಾರ ನೇಮಿಸಿದೆ. ಅವರ ನೇಮಕಾತಿಯು ಬಾಲ ನ್ಯಾಯ ಕಾಯ್ದೆ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಮಾದರಿ ನಿಯಮಗಳು-2016ರ ನಿಯಮ 87(1)(3)ಕ್ಕೆ ವಿರುದ್ಧವಾಗಿದೆ ಎಂದು ಕೋರ್ಟ್​ ಅಭಿಪ್ರಾಯಪಟ್ಟಿತು.

ಲತಾ ಹಾಗೂ ಬಡಸ್ಕರ್ ಅವರಿಗೆ ಮಕ್ಕಳ ಅಭಿವೃದ್ಧಿ ಮತ್ತು ಆರೈಕೆ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳಲ್ಲಿ ಯಾವುದೇ ಪರಿಣಿತಿ ಹಾಗೂ ಅನುಭವ ಇಲ್ಲ. ಸಕಾರಣಗಳು ಇಲ್ಲದೇ ಅವರನ್ನು ನೇಮಕ ಮಾಡಲಾಗಿದೆ. ಆದ್ದರಿಂದ ಇವರು ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುವುದಕ್ಕೆ ತಡೆ ನೀಡಬೇಕು. ಸರ್ಕಾರೇತರ ಸಂಸ್ಥೆಗಳಿಂದ ಅರ್ಹರನ್ನು ಆಯ್ಕೆ ಸಮಿತಿಗೆ ನೇಮಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿದ್ದಾರೆ.

Last Updated : Dec 18, 2020, 2:59 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.