ETV Bharat / state

698 ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡಿರುವುದು ಪತ್ತೆ: ಪಾಲಿಕೆ ವಿಶೇಷ ಆಯುಕ್ತ ಜಯರಾಂ ರಾಯಪುರ - ಈಟಿವಿ ಭಾರತ ಕನ್ನಡ

ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ - ಇನ್ನಿತರ ವಾರ್ಡ್​ಗಳಲ್ಲಿ ಎ ಖಾತೆ ವರದಿ ನೀಡಲು ಸೂಚನೆ - ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ

allegations-on-a-khatha-b-khatha-properties-in-bbmp
698 ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡಿರುವುದು ಪತ್ತೆ: ಪಾಲಿಕೆ ವಿಶೇಷ ಆಯುಕ್ತ ಜಯರಾಂ ರಾಯಪುರ
author img

By

Published : Mar 15, 2023, 10:28 PM IST

ಬೆಂಗಳೂರು: ಅಂಜನಾಪುರ ಉಪವಿಭಾಗದಲ್ಲಿ 698 ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡಿರುವುದು ಪತ್ತೆಯಾಗಿದ್ದು, ಇದೇ ರೀತಿ ಇನ್ನಿತರ ವಾರ್ಡ್‌ಗಳಲ್ಲಿನ ಅಕ್ರಮವಾಗಿ ಎ ಖಾತೆ ನೀಡಿರುವ ಕುರಿತಂತೆ ವರದಿ ನೀಡುವಂತೆ ಎಲ್ಲ ಸಹಾಯಕ ಕಂದಾಯ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಬಿಬಿಎಂಪಿ ಹಣಕಾಸು ವಿಭಾಗದ ವಿಶೇಷ ಆಯುಕ್ತ ಜಯರಾಂ ರಾಯಪುರ ತಿಳಿಸಿದರು.

ಇಂದು ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ ಖಾತಾ ಆಸ್ತಿಗಳಿಗೆ ಎ ಖಾತೆ ನೀಡುವ ಕುರಿತಂತೆ ಸಾಕಷ್ಟು ದೂರುಗಳು ಬಂದಿವೆ. ಈ ಕುರಿತಂತೆ ಪರಿಶೀಲಿಸುವ ಸಲುವಾಗಿ ನನ್ನ ಅಧ್ಯಕ್ಷತೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಸಮಿತಿಯನ್ನೂ ರಚಿಸಲಾಗಿದೆ. ಸಮಿತಿಯು ಮಾರ್ಚ್ 8ರಂದು ಅಂಜನಾಪುರ ಉಪವಿಭಾಗದ ಕಚೇರಿಗೆ ತೆರಳಿ ಪರಿಶೀಲನೆ ನಡೆಸಿತ್ತು. ಈ ವೇಳೆ ಖಾತಾಗೆ ಸಂಬಂಧಿಸಿದಂತೆ 41 ನೋಂದಣಿ ಪುಸ್ತಕಗಳನ್ನು ಪರಿಶೀಲಿಸಲಾಗಿದೆ. ಈ ವೇಳೆ, 698 ಬಿ ಖಾತಾ ಆಸ್ತಿಗಳಿಗೆ ಅಕ್ರಮವಾಗಿ ಎ ಖಾತೆ ನೀಡಲಾಗಿರುವುದು ತಿಳಿದು ಬಂದಿದೆ. ಈ ಕುರಿತಂತೆ ಮತ್ತಷ್ಟು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಎ ಖಾತೆ ನೀಡುವ ಕುರಿತಂತೆ ಸಂಪೂರ್ಣವಾಗಿ ಪರಿಶೀಲಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ಬಿಬಿಎಂಪಿಯ 64 ಉಪವಿಭಾಗ ವ್ಯಾಪ್ತಿಯ ಸಹಾಯಕ ಕಂದಾಯ ಅಧಿಕಾರಿಗಳು ಮಾರ್ಚ್ 24ರೊಳಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖಾತೆ ನೀಡಿರುವ ಕುರಿತ ವರದಿ ನೀಡುವಂತೆ ತಿಳಿಸಲಾಗಿದೆ. ಹೀಗೆ ನೀಡಲಾದ ವರದಿಯಲ್ಲಿನ ಮಾಹಿತಿ ತಪ್ಪು ಹಾಗೂ ಅಪೂರ್ಣವಾಗಿದ್ದರೆ ಅಂತಹ ಸಹಾಯಕ ಕಂದಾಯ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಿದ್ದರೆ ಅಕ್ರಮ: ಬಿ ಖಾತಾ ಆಸ್ತಿಗಳಿಗೆ ಎ ಖಾತಾ ನೀಡಿದ್ದರೆ ಆ ಆಸ್ತಿಗಳಲ್ಲಿ ನಿರ್ಮಿಸಲಾದ ಕಟ್ಟಡಗಳಿಗೆ ನೀಡಲಾದ ಸ್ವಾಧೀನ ಪತ್ರ, ನಕ್ಷೆಗಳು ಅಕ್ರಮ ಎಂದಾಗಲಿದೆ. ಹೀಗಾಗಿ ಅವುಗಳನ್ನೂ ರದ್ದು ಮಾಡಬೇಕಾಗಲಿದ್ದು, ಅವುಗಳ ವಿರುದ್ಧ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು. ಅಲ್ಲದೆ, ಅಕ್ರಮವಾಗಿ ಖಾತಾ ನೀಡಿರುವ ಅಧಿಕಾರಿ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಬಿಡಿಎಯನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್​ : ಭೂ ಮಾಲೀಕರಿಗೆ ವರ್ಗಾವಣೆ ಅಭಿವೃದ್ಧಿ ಹಕ್ಕು ಪ್ರಮಾಣ ಪತ್ರ ನೀಡದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಬಿಡಿಎದ ಕ್ರಮದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್​, ಇದು ಈಸ್ಟ್ ಇಂಡಿಯಾ ಕಂಪನಿಯ ಮನಸ್ಥಿತಿಯನ್ನು ಪ್ರತಿಬಿಂಬಿಸುವಂತಿದೆ ಎಂದು ಅಭಿಪ್ರಾಯಪಟ್ಟಿದೆ.

ಇನ್ನು, ಅಭಿವೃದ್ಧಿ ಕಾರ್ಯಗಳಿಗೆ ಜಮೀನು ನೀಡಿದ್ದ ಭೂ ಮಾಲೀಕರಿಗೆ ಟಿಡಿಆರ್ ನೀಡಲು ಬಿಡಿಎ ಹಿಂಜರಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಜಯಮ್ಮ ಮತ್ತಿತರರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ, ಈ ಹಿಂದೆ ಬಿಡಿಎ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ಆದೇಶಿಸಿದೆ. ಜೊತೆಗೆ ಅರ್ಜಿದಾರರಿಗೆ ಟಿಡಿಆರ್ ಪ್ರಮಾಣಪತ್ರಗಳನ್ನು ವಿತರಿಸುವಂತೆ ತಿಳಿಸಿದೆ.

ಇದನ್ನೂ ಓದಿ : ಬೆಂಗಳೂರು ಮೈಸೂರು ಟೋಲ್ ಗೊಂದಲ, ಆಕ್ಷೇಪಣೆ ಸಲ್ಲಿಸಲು ಎನ್ಎಚ್ಎಐಗೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.