ETV Bharat / state

ಟ್ವಿಟರ್ ಮೂಲಕ ಬೆದರಿಕೆ: ಪೊಲೀಸರಿಗೆ ದೂರು ನೀಡಿದ ಆಲ್ಟ್ ನ್ಯೂಸ್‌ನ ಮೊಹಮ್ಮದ್ ಜುಬೇರ್

ಟ್ವಿಟರ್ ಮೂಲಕ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರು ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ.

zubair
ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್
author img

By

Published : May 2, 2023, 12:25 PM IST

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಟೋ ಕಳುಹಿಸಿ ಬೆದರಿಕೆ ಹಾಕಲಾಗಿದೆ ಎಂದು ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆಕ್ಷೇಪಾರ್ಹ ವೆಬ್​ಸೈಟ್​ನ ಸ್ಕ್ರೀನ್ ಶಾಟ್ ಲಗತ್ತಿಸಿ ತನ್ನನ್ನು ಟ್ಯಾಗ್ ಮಾಡಲಾಗಿದೆ ಎಂದು @Cyber_Huntss (ಸೈಬರ್​ ಹಂಟ್ಸ್​) ಹೆಸರಿನ ಟ್ವಿಟರ್ ಖಾತೆಯ ವಿರುದ್ಧ ಅವರು ದೂರು ದಾಖಲಿಸಿದ್ದಾರೆ.

ಅಲ್ಲದೇ ತನ್ನ ವಿಳಾಸವನ್ನು ಎಲ್ಲರಿಗೂ ತಿಳಿಯುವಂತೆ ಪ್ರಕಟಿಸಿರುವ 15 ವಿವಿಧ ಟ್ವಿಟರ್ ಖಾತೆಗಳ ವಿರುದ್ಧವು ಆರೋಪಿಸಿರುವ ಜುಬೈರ್, ತನಗೆ ಜೀವ ಬೆದರಿಕೆ ಹಾಕಲಾಗಿದೆ. ಎರಡು ಜನಾಂಗದವರ ಮಧ್ಯೆ ದ್ವೇಷವನ್ನುಂಟು ಮಾಡುವ ಕೆಲಸ ಮಾಡಲಾಗುತ್ತಿದೆ ಎಂದು ಡಿ.ಜೆ.ಹಳ್ಳಿ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.

2018 ರಲ್ಲಿ ಜುಬೈರ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್​ಗಳು ಧಾರ್ಮಿಕ‌ ಭಾವನೆಗಳಿಗೆ ಧಕ್ಕೆಯುಂಟು ಮಾಡುತ್ತಿದ್ದ ಆರೋಪದಡಿ ಕಳೆದ ವರ್ಷ ದೆಹಲಿ‌ ಪೊಲೀಸರು ಅವರನ್ನು ಬಂಧಿಸಿದ್ದರು. ಬಳಿಕ ಮನೆಯಲ್ಲಿ ಶೋಧಕಾರ್ಯ ಕೂಡ ನಡೆಸಲಾಗಿತ್ತು.

ಇದನ್ನೂ ಓದಿ: 'ದಿ ಕೇರಳ ಸ್ಟೋರಿ' ಸಿನಿಮಾ ನಿಷೇಧಕ್ಕೆ ನಟ ಚೇತನ್​ ಅಹಿಂಸಾ ವಿರೋಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.