ಬೆಂಗಳೂರು: ಕರ್ನಾಟಕ ರಾಜ್ಯದ ಆಗ್ನೇಯ ಪದವೀಧರರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಗಳನ್ನು ಕಾಲೋಚಿತಗೊಳಿಸಲು ನಾಮಪತ್ರಗಳ ಸ್ವೀಕೃತಿಯ ಕೊನೆಯ ದಿನಾಂಕದವರೆಗೆ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ.
ಪದವೀಧರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ನಮೂನೆ 18 ರಲ್ಲಿ ಹಾಗೂ ಶಿಕ್ಷಕರ ಮತಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಲು ನಮೂನೆ 19 ರ ದ್ವಿ-ಪ್ರತಿಯಲ್ಲಿ ಸಂಬಂಧಿಸಿದ ನೋಂದಣಾಧಿಕಾರಿಗಳಿಗೆ ಅವಶ್ಯಕ ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಅಲ್ಲದೆ, ಈ ಎಲ್ಲಾ ಕ್ಷೇತ್ರಗಳ ಮತದಾರರ ಪಟ್ಟಿಗಳನ್ನು ತಯಾರಿಸಿ ಅಂತಿಮ ಪಟ್ಟಿಯನ್ನು ಸಾರ್ವಜನಿಕರ ತಿಳುವಳಿಗಾಗಿ ಈಗಾಗಲೇ ಪ್ರಕಟಿಸಲಾಗಿದೆ.