ETV Bharat / state

ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ: ಅಲೋಕ್​ ಕುಮಾರ್ ಆದೇಶ - bangalore latest news

ಎರಡು ದಿನ ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು. 2 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಪ್ರತಿಭಟನೆ, ಧರಣಿ ಮಾಡುವಂತಿಲ್ಲ ಎಂದು ನಗರ ಪೊಲೀಸ್​ ಆಯುಕ್ತ ಅಲೋಕ್​ ಕುಮಾರ್​ ಆದೇಶ ಹೊರಡಿಸಿದ್ದಾರೆ.

ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸ್​ ಬಂದೋಬಸ್ತ್
author img

By

Published : Jul 27, 2019, 8:39 PM IST

ಬೆಂಗಳೂರು: ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸೋಮವಾರ ಹಾಗೂ ಮಂಗಳವಾರ ಅಧಿವೇಶನ ನಡೆಯುವುದರಿಂದ ಯಾವುದೇ ಸಂಘಟನೆ ಮುಖಂಡರು ಪ್ರತಿಭಟನೆ ಮುಂದಾಗಬಾರದು ಅದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನಗರ ಪೊಲೀಸ್​ ಆಯುಕ್ತ ಅಲೋಕ್​ ಕುಮಾರ್​ ಆದೇಶಿಸಿದ್ದಾರೆ.

ಕಲಾಪದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿಧಾನಸೌಧದ ಬಳಿ ಪ್ರತಿಭಟನೆ ಅಥವಾ ಬೇಡಿಕೆ ಮಂಡನೆ ಮಾಡುವ ಸಾಧ್ಯತೆಗಳಿವೆ. ಸುಗಮ ಕಲಾಪ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಬೆಳಗ್ಗೆ 6 ಗಂಟೆಯಿಂದ ಮಂಗಳವಾರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ ಎಂದು ತಿಳಿಸಿದರು.

bgl
ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸ್​ ಬಂದೋಬಸ್ತ್
ವಿಧಾನಸೌಧದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಮೆರವಣಿಗೆ ಹಾಗೂ ಸಭೆಗಳನ್ನ ನಡೆಸುವಂತಿಲ್ಲ. ಮಾರಕಾಸ್ತ್ರಗಳು ಹಾಗೂ ದೈಹಿಕ ಹಿಂಸೆ ಉಂಟು ಮಾಡುವ ವಸ್ತುಗಳು, ಸ್ಫೋಟಕಗಳನ್ನ ನಿಷೇಧಿಸಲಾಗಿದ್ದು. ಯಾವುದೇ ವ್ಯಕ್ತಿಯ ಪ್ರತಿಕೃತಿ ದಹನ ಹಾಗೂ ಪ್ರಚೋದನಕಾರಿ ಭಾಷಣ ಮಾಡುವಂತಿಲ್ಲ. ಸಂಕೇತಗಳು ಅಥವಾ ಭಿತ್ತಿಪತ್ರಗಳನ್ನ ಪ್ರದರ್ಶಿಸುವಂತಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Intro:nullBody:ವಿಧಾನಸಭಾ ಚುನಾವಣೆ ಹಿನ್ನೆಲೆ: ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ

ಬೆಂಗಳೂರು: ಸೋಮವಾರ ಹಾಗೂ ಮಂಗಳವಾರ ಎರಡು ದಿನ ವಿಧಾನಸಭಾ ಅಧಿವೇಶನ ನಡೆಯಲಿರುವುದರಿಂದ ಮಂಜಾಗ್ರತ ಕ್ರಮವಾಗಿ ವಿಧಾನಸೌಧ ಸುತ್ತಮುತ್ತ 2 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್ ಆದೇಶಿಸಿದ್ದಾರೆ.
ಕಲಾಪದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ವಿಧಾನಸೌಧದ ಬಳಿ ಪ್ರತಿಭಟನೆ ಅಥವಾ ಬೇಡಿಕೆ ಮಂಡನೆ ಮಾಡುವ ಸಾಧ್ಯತೆಗಳಿದ್ದು ಸುಗಮ ಕಲಾಪ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕಾ ಕ್ರಮವಾಗಿ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಮಂಗಳವಾರ ರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ವಿಧಿಸಲಾಗಿದೆ.
ನಿಷೇದಾಜ್ಞೆ ಜಾರಿಯಿರುವ ವಿಧಾನಸೌಧದ ಸುತ್ತಮುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಮೆರವಣಿಗೆ ಹಾಗೂ ಸಭೆಗಳನ್ನ ನಡೆಸುವಂತಿಲ್ಲ. ಮಾರಕಾಸ್ತ್ರಗಳು ಹಾಗೂ ದೈಹಿಕ ಹಿಂಸೆ ಉಂಟು ಮಾಡುವ ವಸ್ತುಗಳು, ಸ್ಫೋಟಕಗಳನ್ನ ನಿಷೇಧಿಸಲಾಗಿದ್ದು ಯಾವುದೇ ವ್ಯಕ್ತಿಯ ಪ್ರತಿಕೃತಿ ದಹನ ಹಾಗೂ ಪ್ರಚೋದನಕಾರಿ ಭಾಷಣ ಮಾಡುವಂತಿಲ್ಲ. ಸಂಕೇತಗಳು ಅಥವಾ ಭಿತ್ತಿಪತ್ರಗಳನ್ನ ಪ್ರದರ್ಶಿಸುವಂತಿಲ್ಲ ಎಂದು ಆದೇಶ ಪ್ರಕಟಿಸಲಾಗಿದೆ.Conclusion:null
ETV Bharat Logo

Copyright © 2025 Ushodaya Enterprises Pvt. Ltd., All Rights Reserved.