ಬೆಂಗಳೂರು: ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದು ರುಜುವಾದ ಹಿನ್ನೆಲೆ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧಿಸಿ ಕ್ರಮವನ್ನು ಇದು ಸೆಪ್ಟೆಂಬರ್ ಕ್ರಾಂತಿ ಎಂದು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಬಣ್ಣಿಸಿದ್ದಾರೆ.
ಕಳೆದ 11 ವರ್ಷಗಳ ಹಿಂದೆ ಅಂದರೆ 2011 ಸೆ.26 ರಂದು ಸಿಮಿ ಸಂಘಟನೆ ನಿಷೇಧಿಸಿದ್ದ ಕೇಂದ್ರ ಸರ್ಕಾರ ಇದೀಗ 2022 ಸೆ. 28ರಂದು ಪಿಎಫ್ ಐ ಬ್ಯಾನ್ ಮಾಡಿದೆ. ಇದು ಸೆಪ್ಟಂಬರ್ ಕ್ರಾಂತಿಯಾಗಿದೆ. ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಕಾಪಾಡಲು ಬದ್ಧ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮದ ಭರವಸೆ ಮೂಡಿದೆ. ಪರಿತ್ರಾಣಾಯ ಸಾಧೂನಾಂ ವಿನಾಶಾಯ ಚ ದುಷ್ಕೃತಾಮ್ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಕಳೆದ ವಾರವಷ್ಟೇ ರಾಷ್ಟ್ರೀಯ ತನಿಖಾ ಸಂಸ್ಥೆ ದೇಶ ಸೇರಿದಂತೆ ರಾಜ್ಯದಲ್ಲಿ ಪಿಎಫ್ಐ ಕಾರ್ಯಕರ್ತರ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ 100ಕ್ಕೂ ಹೆಚ್ಚು ಜನರನ್ನ ಬಂಧಿಸಿತ್ತು. ಅಲ್ಲದೇ ಎನ್ಐಎ ದಾಳಿ ನಡೆಸಿ ವಾರ ಕಳೆಯುವಷ್ಟರಲ್ಲೇ ಎರಡನೇ ಬಾರಿಗೆ ರಾಜ್ಯದಲ್ಲಿ ಪಿಎಫ್ಐ ಮುಖಂಡರ ಮೇಲೆ ಪೊಲೀಸರು ದಾಳಿ ನಡೆಸಿ 40ಕ್ಕೂ ಹೆಚ್ಚು ಮುಖಂಡರನ್ನ ಬಂಧಿಸಿದ್ದರು. ಇನ್ನು ಕಾನೂನು ಬಾಹಿರ ಚಟುವಟಿಕೆ ಬಾಹಿರ ತಡೆ ಕಾಯ್ದೆ ಅಡಿಯಲ್ಲಿ ಪಿಎಫ್ಐ ಸಂಘಟನೆಯನ್ನ ನಿನ್ನೆ ಬೆಳಗ್ಗೆ ಕೇಂದ್ರ ಸರ್ಕಾರ ನಿಷೇಧಿಸಿ ಮಹತ್ವದ ಆದೇಶ ಹೊರಡಿಸಿತ್ತು.
ಇದನ್ನೂ ಓದಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಯುಎಪಿಎ ಕಾಯ್ದೆಯಡಿ ಬ್ಯಾನ್.. ಇಲ್ಲಿದೆ ಸಂಪೂರ್ಣ ವಿವರ