ETV Bharat / state

ಫೈಟರ್ ರವಿ ದಾಖಲಿಸಿರುವ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಅಲೋಕ್ ಕುಮಾರ್ - ಎಡಿಜಿಪಿ ಅಲೋಕ್ ಕುಮಾರ್

ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್‌ ವಿರುದ್ಧ ಹೂಡಿರುವ ಪ್ರಕರಣದಲ್ಲಿ ಫೈಟರ್ ರವಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

High Court
ಹೈಕೋರ್ಟ್ ಮೊರೆ ಹೋದ ಅಲೋಕ್ ಕುಮಾರ್
author img

By

Published : Mar 21, 2023, 8:07 AM IST

Updated : Mar 21, 2023, 8:34 AM IST

ಬೆಂಗಳೂರು: ಭ್ರಷ್ಟಾಚಾರ ಆರೋಪದಡಿ ನನ್ನ ವಿರುದ್ಧ ಫೈಟರ್ ರವಿ ದಾಖಲಿಸಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡುವಂತೆ ಕೋರಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ನ್ಯಾಯಪೀಠ ಫೈಟರ್ ರವಿಗೆ ನೋಟಿಸ್ ಜಾರಿ ಮಾಡಿದೆ.

ವಿಚಾರಣೆಯಲ್ಲಿ ಅಲೋಕ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಸಂದೇಶ್ ಜೆ.ಚೌಟ, ಅರ್ಜಿದಾರರ ವಿರುದ್ಧದ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ತನಿಖಾಧಿಕಾರಿಗಳು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಂತಿಮ ವರದಿಯಲ್ಲಿ ಬಿ ರಿಪೋರ್ಟ್ ಎಂದು ನಮೂದಾಗಿದೆ. ಆದರೆ, ವಿಶೇಷ ನ್ಯಾಯಾಲಯ ಕೇವಲ ಫಿರ್ಯಾದುದಾರನ ದೂರು ಮತ್ತು ಪ್ರತಿಭಟನಾ ಅರ್ಜಿ ಆಧರಿಸಿ ಸಂಜ್ಞೆಯ ಅಪರಾಧದಡಿ ವಿಚಾರಣೆಗೆ ಮುಂದಾಗಿದೆ. ಆದ್ದರಿಂದ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿದರು. ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿ ಬಿ.ಎಂ.ಮಲ್ಲಿಕಾರ್ಜುನ ಅಲಿಯಾಸ್ ರವಿ ಯಾನೆ ಫೈಟರ್ ರವಿ (44) ಬಿನ್ ಎನ್.ಮಲ್ಲಯ್ಯಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣವೇನು?: ಫೈಟರ್‌ ರವಿ ವಿರುದ್ಧ ವೈಯ್ಯಾಲಿ ಕಾವಲ್ ಪೊಲೀಸ್ ಠಾಣೆ ವ್ಯಾಪ್ತಿ‌ಯಲ್ಲಿ 2014ರಲ್ಲಿ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಕೈಬಿಡಲು ಆಗಿನ ಉತ್ತರ ವಲಯದ ಜಂಟಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ 1 ಕೋಟಿ ರೂ ಲಂಚಕ್ಕೆ ಬೇಡಿಕೆ ಇರಿಸಿದ್ದರು ಎಂಬುದು ಆರೋಪ. ಈ ಸಂಬಂಧ ರವಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರು ಆಧರಿಸಿ ಲೋಕಾಯುಕ್ತ ಪೊಲೀಸರು ಭ್ರಷ್ಟಾಚಾರ ನಿಗ್ರಹ ಕಾಯ್ದೆ– ಕಲಂ 7,13 (ಡಿ) ಮತ್ತು 13 (2)ರ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದರು.

ತನಿಖೆಯ ನಂತರ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಸಿಟಿ ಸಿವಿಲ್‌ ಕೋರ್ಟ್‌ನ ಲೋಕಾಯುಕ್ತ ವಿಶೇಷ ನ್ಯಾಯಾಲಯ ಬಿ ರಿಪೋರ್ಟ್‌ ತಿರಸ್ಕರಿಸಿತ್ತು. ಜತೆಗೆ ಅಲೋಕ್ ಕುಮಾರ್, ಎಸಿಪಿ ಧನೇಶ್ ರಾವ್ ಮತ್ತಿತರರ ವಿರುದ್ಧದ ಆರೋಪಗಳನ್ನು ಸಂಜ್ಞೆಯ ಅಪರಾಧ ಎಂದು ತೀರ್ಮಾನಿಸಿ ಫೈಟರ್ ರವಿಯ ಸ್ವಯಂ ಹೇಳಿಕೆ ದಾಖಲಿಸುವ ಕ್ರಮಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಅಲೋಕ್​ ಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮುರುಘಾ ಪ್ರಕರಣ ಮತ್ತೊಂದು ಪೀಠಕ್ಕೆ: ಚಿತ್ರದುರ್ಗ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣರ ವಿರುದ್ಧ ದೂರು ಸಲ್ಲಿಸಲು ಸಂತ್ರಸ್ತೆಯರಿಗೆ ಪ್ರಚೋದನೆ ನೀಡಿದ ಆರೋಪದಡಿ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ವಿರುದ್ಧ ದಾಖಲಿಸಿರುವ ಪ್ರಕರಣದ ತನಿಖಾಧಿಕಾರಿ ಬದಲಿಸಬೇಕು ಎಂದು ಕೋರಿರುವ ಅರ್ಜಿಯನ್ನು ಹೈಕೋರ್ಟ್ ಮತ್ತೊಂದು ಪೀಠಕ್ಕೆ ವರ್ಗಾಯಿಸಿದೆ.

ಮಠದ ತಾತ್ಕಾಲಿಕ ಉಸ್ತುವಾರಿ ಸ್ವಾಮೀಜಿ ಬಸವಪ್ರಭು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ನ್ಯಾಯಪೀಠ ಅರ್ಜಿಯ ಪ್ರತಿವಾದಿಗಳಾದ ಎಸ್.ಕೆ.ಬಸವರಾಜನ್ ಮತ್ತು ಅವರ ಪತ್ನಿ ಸೌಭಾಗ್ಯ ಬಸವರಾಜನ್ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೀಗಾಗಿ ಈ ಅರ್ಜಿ ವಿಚಾರಣೆ ನಡೆಸುತ್ತಿರುವ ನ್ಯಾಯಪೀಠದ ಜೊತೆಗೆ ಈ ಅರ್ಜಿಯ ವಿಚಾರಣೆಯೂ ನಡೆಯಬೇಕೆಂಬ ಅಂಶವನ್ನು ಪರಿಗಣಿಸಿತು.

ಇದನ್ನೂ ಓದಿ: ತರ್ಲೆ ಮಾಡಿದ್ರೆ ಕಠಿಣ ಕ್ರಮ: ಎಂಇಎಸ್ ಪುಂಡರಿಗೆ ಎಡಿಜಿಪಿ ಅಲೋಕ್​ ಕುಮಾರ್ ವಾರ್ನಿಂಗ್

Last Updated : Mar 21, 2023, 8:34 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.