ಬೆಂಗಳೂರು: ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ. ಮೈತ್ರಿ ಪಕ್ಷಗಳ ಯಾರೊಂದಿಗೂ ನಾನು ಸಂಪರ್ಕದಲ್ಲಿಯೂ ಇಲ್ಲ ಎಂದು ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿಯೂ ಹೋಗಿಲ್ಲ. ಊರಲ್ಲಿಯೇ ಇದ್ದೇನೆ. ನಾನು ಪಕ್ಷಕ್ಕೆ ಬದ್ಧನಾಗಿದ್ದೇನೆ. ಕ್ಷೇತ್ರದ ಜನರು ನನ್ನನ್ನು ಆಯ್ಕೆ ಮಾಡಿದ್ದು, ಯಾವುದೇ ಕಾರಣಕ್ಕೂ ನಾನು ಪಕ್ಷ ಬಿಡೋದಿಲ್ಲ ಎಂದಿದ್ದಾರೆ.
ಮಾಧ್ಯಮಗಳಲ್ಲಿ ಎಂ.ಪಿ.ಕುಮಾರಸ್ವಾಮಿ ಪಕ್ಷ ಬೀಡುತ್ತಾರೆ ಎಂಬ ಸುಳ್ಳು ಸುದ್ದಿಗಳು ಹರಿದಾಡುತ್ತಿವೆ. ಆದರೆ, ಅದೆಲ್ಲ ಸುಳ್ಳು ಎಂದು ಎಂ.ಪಿ.ಕುಮಾರಸ್ವಾಮಿ ಸ್ಪಷ್ಟೀಕರಣ ನೀಡಿದರು.