ETV Bharat / state

ನಾಳೆ ಸಂಜೆ ಅಂಬರೀಶ್ ಸ್ಮಾರಕ ಲೋಕಾರ್ಪಣೆ; ಸಿಎಂ ಸೇರಿ ಹಲವು ಗಣ್ಯರ ಉಪಸ್ಥಿತಿ

author img

By

Published : Mar 26, 2023, 9:42 PM IST

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಎತ್ತಿದೆ. ಇದನ್ನು ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಲಿದ್ದಾರೆ.

ಅಂಬರೀಶ್ ಸ್ಮಾರಕ
ಅಂಬರೀಶ್ ಸ್ಮಾರಕ

ಬೆಂಗಳೂರು : ಇಲ್ಲಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದ್ದು, ನಾಳೆ ಸಂಜೆ 6 ಗಂಟೆಗೆ ಅಂಬರೀಷ್ ಸ್ಮಾರಕ ಲೋಕಾರ್ಪಣೆಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್. ಅಶೋಕ್, ತೋಟಗಾರಿಕಾ ಸಚಿವ ಮುನಿರತ್ನ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಸುಮಾರು 1.34 ಎಕರೆ ವಿಸ್ತಾರದ ಪ್ರದೇಶದಲ್ಲಿ ಸ್ಮಾರಕ ನಿರ್ಮಾಣಗೊಂಡಿದ್ದು, ಇದಕ್ಕಾಗಿ 2020ರಲ್ಲಿ ಅಂದಿನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ 5 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದರು. ಕಂಠೀರವ ಸ್ಟುಡಿಯೋದಲ್ಲಿ ನಿರ್ಮಾಣಗೊಂಡಿರುವ ಅಂಬರೀಶ್ ಸ್ಮಾರಕವು ಡಾ ರಾಜ್ ಕುಮಾರ್ ಸ್ಮಾರಕದ ಎದುರು ಭಾಗದಲ್ಲಿಯೇ ಇದೆ. ಇದೇ ಪ್ರದೇಶದಲ್ಲಿ ಶೀಘ್ರವೇ ಪುನೀತ್ ರಾಜ್​ಕುಮಾರ್ ಸ್ಮಾರಕ ಸಹ ನಿರ್ಮಾಣಗೊಳ್ಳಲಿದೆ. ಮೂವರು ನಟರು ಸಾಕಷ್ಟು ದೊಡ್ಡ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿದ್ದು, ಪ್ರತಿದಿನ ಇವರ ಸ್ಮಾರಕಕ್ಕೆ ನೂರಾರು ಮಂದಿ ಭೇಟಿ ನೀಡುತ್ತಿದ್ದಾರೆ.

ಅಂಬರೀಶ್
ಅಂಬರೀಶ್

ರಸ್ತೆಗೂ ನಾಮಕರಣ : ನಗರದ ರೇಸ್​ಕೋರ್ಸ್ ರಸ್ತೆಗೆ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಒಪ್ಪಿಗೆ ನೀಡಿದ್ದು, ಈ ನಾಮಕರಣ ಸಹ ನಾಳೆಯೇ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು ರೇಸ್ ಕೋರ್ಸ್ ರಸ್ತೆಗೆ ಇಡುವಂತೆ ಸರ್ಕಾರಕ್ಕೆ ಮನವಿ ಮಾಡಿತ್ತು. ಇದನ್ನು ಸರ್ಕಾರ ಪುರಸ್ಕರಿಸಿತ್ತು. ರಾಜಕಾರಣಿಯಾಗಿಯೂ ಅವರು ಸಾಕಷ್ಟು ಜನಪರ ಕೆಲಸಗಳನ್ನು ಮಾಡಿದ್ದಾರೆ. ಈ ಎಲ್ಲ ಸೇವೆಯನ್ನು ಪರಿಗಣಿಸಿರುವ ಸರ್ಕಾರ ರೇಸ್ ಕೋರ್ಸ್ ರಸ್ತೆಗೆ ಹೆಸರು ಇಡಲು ಒಪ್ಪಿಗೆ ನೀಡಿದೆ.

ಇದನ್ನೂ ಓದಿ : ಗೋರ್ಟಾ ಗ್ರಾಮಕ್ಕೆ ಅಮಿತ್​ ಶಾ ಭೇಟಿ.. ಸರ್ದಾರ್ ಪಟೇಲ್ ಪ್ರತಿಮೆ, 103 ಅಡಿ ಎತ್ತರದ ರಾಷ್ಟ್ರ ಧ್ವಜ ಸ್ತಂಭ ಅನಾವರಣ

ಸಿಎಂ ತಿಳಿಸಿದ್ದರು: ರೆಬಲ್ ಸ್ಟಾರ್ ಅಂಬರೀಶ್ ಅವರ ಸ್ಮಾರಕವನ್ನು ಮಾರ್ಚ್ 27 ರಂದು ಲೋಕಾರ್ಪಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನ ಹಿಂದೆಯೇ ಹೇಳಿದ್ದಾರೆ. ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದ ಉದ್ಘಾಟನೆಯ ಸಮಾರಂಭದಲ್ಲಿ ಮಾತನಾಡಿದ್ದ ಅವರು, ‘ನನ್ನ ನೆಚ್ಚಿನ ಗೆಳೆಯ ಅಂಬರೀಶ್ ಅವರ ಸ್ಮಾರಕವನ್ನು ಇದೇ ಮಾರ್ಚ್ 27ಕ್ಕೆ ಉದ್ಘಾಟನೆ ಮಾಡಲಿದ್ದೇನೆ’ ಎಂದು ಘೋಷಿಸಿದ್ದರು. ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ಅಂದೇ ಇಡುವುದಾಗಿಯೂ ತಿಳಿಸಿದ್ದರು.

ಇದನ್ನೂ ಓದಿ : ಜೆಡಿಎಸ್ ಭದ್ರಕೋಟೆ ಒಡೆದಿದೆ, ಛಿದ್ರ ಮಾಡೋದೊಂದೇ ಬಾಕಿ: ಸಂಸದೆ ಸುಮಲತಾ ಅಂಬರೀಶ್​

ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಸ್ಮಾರಕ ತಲೆಯೆತ್ತಿದೆ. ವಿಶೇಷ ವಿನ್ಯಾಸದಲ್ಲಿ ಸ್ಮಾರಕವನ್ನು ನಿರ್ಮಾಣ ಮಾಡಲಾಗಿದೆ. ಈಗಾಗಲೇ ಸ್ಮಾರಕದ ಬಹುತೇಕ ಕೆಲಸಗಳು ಕೂಡ ಮುಗಿದಿವೆ. ಉದ್ಘಾಟನೆಗೆ ಈಗ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ : ಜನರಲ್ಲಿ ಜಾತಿ ಧರ್ಮದ ವೈಷಮ್ಯ ಬಿತ್ತಿ, ಒಡೆದು ಆಳುವ ಪಕ್ಷ ನಮ್ಮದಲ್ಲ: ಹೆಚ್ ಡಿ ದೇವೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.