ETV Bharat / state

ಅಂಬೇಡ್ಕರ್ ಭವನ ಲೋಕಾರ್ಪಣೆ - ಬೆಂಗಳೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಭವನ

ಬೆಂಗಳೂರಿನ ಕುವೆಂಪುನಗರದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಭವನವನ್ನು ಮಾಜಿ ಸಚಿವ,ಶಾಸಕ ಕೃಷ್ಣಭೈರೇಗೌಡ ಲೋಕಾರ್ಪಣೆಗೊಳಿಸಿದರು.

ambedkar-bhavan-inaguaration-in-bengalore
ಅಂಬೇಡ್ಕರ್ ಭವನ ಲೋಕಾರ್ಪಣೆ
author img

By

Published : Feb 1, 2020, 2:09 AM IST

ಬೆಂಗಳೂರು: ಕುವೆಂಪುನಗರದಲ್ಲಿ ನಿರ್ಮಿಸಿರುವ ನೂತನ ಸಮುದಾಯ ಭವನವನ್ನು ಮಾಜಿ ಸಚಿವ,ಶಾಸಕ ಕೃಷ್ಣಭೈರೇಗೌಡ ಲೋಕಾರ್ಪಣೆಗೊಳಿಸಿದರು.

ಬಡವರು ಕೂಡಾ ತಮ್ಮ ಕುಟುಂಬದ ಮದುವೆ, ನಾಮಕರಣದಂತಹ ಕಾರ್ಯಕ್ರಮಗಳನ್ನು ಆಚರಿಸಿಕೊಳ್ಳುವಂತಾಗಲಿ ಎಂಬ ಸದುದ್ದೇಶದಿಂದ ಬ್ಯಾಟರಾಯನಪುರ ಕ್ಷೇತ್ರದ ಕುವೆಂಪುನಗರದಲ್ಲಿ ಸುಮಾರು 35 ಲಕ್ಷ ರೂ ಅಂದಾಜು ವೆಚ್ಚದಲ್ಲಿ ನೂತನವಾದ ಡಾ.ಅಂಬೇಡ್ಕರ್ ಸಮುದಾಯ ಭವನ ನಿರ್ಮಿಸಲಾಗಿದೆ ಎಂದು ಪಾಲಿಕೆ ಸದಸ್ಯ ಪಾರ್ಥಿಬರಾಜನ್ ಹೇಳಿದ್ದಾರೆ.

ಅಂಬೇಡ್ಕರ್ ಭವನ ಲೋಕಾರ್ಪಣೆ

ಸುಮಾರು 35 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನಿರ್ಮಿಸಿರುವ ಈ ಕಟ್ಟಡದಲ್ಲಿ ಸುಮಾರು 200ಜನರು ಕುಳಿತುಕೊಳ್ಳಬಹುದಾದ ಸಭಾಂಗಣ ಹೊಂದಿದೆ. ಸಮುದಾಯ ಭವನದ ಮುಂಭಾಗದಲ್ಲಿ ಊಟದ ವ್ಯವಸ್ಥೆ ಮಾಡಲು ಸ್ಥಳಾವಕಾಶ ಕಲ್ಪಿಸಲಾಗಿದೆ.

ಸಮುದಾಯ ಬನವನ ಲೋಕಾರ್ಪಣೆ ನಂತರ ಮಾತನಾಡಿದ ಶಾಸಕ ಕೃಷ್ಣ ಭೈರೇಗೌಡ ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡಜನರು ವಾಸಿಸುತ್ತಾರೆ. ಅವರಿಗೆ ದುಬಾರಿ ಹಣ ನೀಡಿ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ಇನ್ನಿತರ ಸಮಾರಂಭಗಳನ್ನು ಮಾಡಲು ಹಣಕಾಸಿನ ಸಮಸ್ಯೆ ಎದುರಾಗುತ್ತದೆ. ಅವರಿಗೆ ಅನುಕೂಲವಾಗುವ ಯಾವುದೇ ಖಾಸಗಿ ಕಲ್ಯಾಣ ಮಂಟಪ, ಪಾರ್ಟಿ ಹಾಲ್ ಗಳಿಗೆ ಕಡಿಮೆ ಇಲ್ಲದಂತೆ ಸುಸಜ್ಜಿತವಾಗಿ ನಿರ್ಮಿಸಲಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.