ETV Bharat / state

ಆ್ಯಂಬಿಡೆಂಟ್ ವಂಚನೆ ಪ್ರಕರಣ: ತನಿಖೆ ಹೊಣೆ ಸಿಸಿಬಿಯಿಂದ ಸಿಐಡಿ ಹೆಗಲಿಗೆ - ಹಗರಣದ ತನಿಖೆಯನ್ನು ಸಿಸಿಬಿ ಬದಲು ಸಿಐಡಿ

ಆ್ಯಂಬಿಡೆಂಟ್ ಬಹುಕೋಟಿ ವಂಚನೆ ಹಗರಣದ ತನಿಖೆಯನ್ನು ಸಿಸಿಬಿ ಬದಲು ಸಿಐಡಿಗೆ ವಹಿಸಲಾಗಿದೆ ಎಂದು ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಸಿಸಿಬಿ
ಸಿಸಿಬಿ
author img

By

Published : Jan 29, 2020, 6:01 PM IST

ಬೆಂಗಳೂರು: ಆ್ಯಂಬಿಡೆಂಟ್ ವಂಚನೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ‌ ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಸರ್ಕಾರದ ಪರ ವಕೀಲರು ಪೀಠಕ್ಕೆ ವಿವರಣೆ ನೀಡಿ, ಈ ಮೊದಲು ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ವಿಭಾಗಕ್ಕೆ (ಸಿಸಿಬಿ) ನೀಡಲಾಗಿತ್ತು. ಇದೀಗ ಪ್ರಕರಣದ ಮತ್ತಷ್ಟು ಸಮರ್ಥ ತನಿಖೆಗಾಗಿ ಅಪರಾಧ ತನಿಖಾ ವಿಭಾಗದ (ಸಿಐಡಿ)ತನಿಖೆಗೆ ವಹಿಸಲಾಗಿದೆ ಎಂದು ತಿಳಿಸಿದರು. ವಕೀಲರ ಹೇಳಿಕೆ ಪರಿಗಣಿಸಿದ ಪೀಠ, ಹಾಗಿದ್ದರೆ ಇನ್ನು ಮುಂದೆ ಸಿಐಡಿ‌ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಿ ಎಂದು ಸೂಚಿಸಿ, ವಿಚಾರಣೆ ಮುಂದೂಡಿತು.

ಹೆಚ್ಚಿನ ಲಾಭಾಂಶ ನೀಡುವುದಾಗಿ ಆಮಿಷವೊಡ್ಡಿದ್ದ ಆ್ಯಂಬಿಡೆಂಟ್ ಸಂಸ್ಥೆ ಸಾರ್ವಜನಿಕರಿಂದ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸಿತ್ತು. ಆರಂಭದಲ್ಲಿ ಕೆಲವೇ ಕೆಲವು ಹೂಡಿಕೆದಾರರಿಗೆ ಹಣ ಹಿಂದಿರುಗಿಸಿದ್ದ ಸಂಸ್ಥೆ ಬಳಿಕ ಲಾಭಾಂಶ, ಬಂಡವಾಳ ಸೇರಿದಂತೆ ಯಾವುದೇ ಹಣ ನೀಡದೆ ವಂಚಿಸಿತ್ತು ಎನ್ನಲಾಗ್ತಿದೆ. ಈ ಸಂಬಂಧ ಹಲವು ಹೂಡಿಕೆದಾರರು ದೂರು ದಾಖಲಿಸಿದ್ದರು. ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.