ETV Bharat / state

ಭೂ ಕಬಳಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದನ್ನು ತಪ್ಪಿಸಲು ಕಂದಾಯ ಕಾಯ್ದೆಗೆ ತಿದ್ದುಪಡಿ: ಮಾಧುಸ್ವಾಮಿ - Amendment to Revenue Act says Minister JC Madhuswamy

ಭೂ ಕಬಳಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದನ್ನು ತಪ್ಪಿಸಲು ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.

JC  Madhuswamy
ಸಚಿವ ಜೆ.ಸಿ.ಮಾಧುಸ್ವಾಮಿ
author img

By

Published : Mar 9, 2022, 10:03 AM IST

ಬೆಂಗಳೂರು: ಅರಣ್ಯ ಪ್ರದೇಶದ ಅಂಚಿನಲ್ಲಿರುವ ಗ್ರಾಮಗಳ ಜನರು ಕೃಷಿ ಉದ್ದೇಶಗಳಿಗೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಭೂ ಕಬಳಿಕೆ ಎಂದು ಪರಿಗಣಿಸಿ ಭೂ ಕಬಳಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದನ್ನು ಕೈಬಿಡಲು ಕಂದಾಯ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಕಂದಾಯ ಕಾಯ್ದೆಗೆ ತಿದ್ದುಪಡಿ- ಸಚಿವ ಜೆ.ಸಿ.ಮಾಧುಸ್ವಾಮಿ

ಶೂನ್ಯ ವೇಳೆಯಲ್ಲಿ ಕಾಂಗ್ರೆಸ್​​ನ ಹಿರಿಯ ಸದಸ್ಯ ಹೆಚ್.ಕೆ.ಪಾಟೀಲ್ ಹಾಗೂ ಇತರ ಶಾಸಕರು ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಲ್ಯಾಂಡ್ ಗ್ರಾಬಿಂಗ್ ತೆಗೆಯಲು ಕಾನೂನು ತಿದ್ದುಪಡಿ ತರಲಾಗುವುದು. ಭೂ ಕಬಳಿಕೆಗೆ ಸಂಬಂಧಿಸಿದಂತೆ ಕಾನೂನು ತಂದು ಬೆಂಗಳೂರಿನಲ್ಲಿ ನ್ಯಾಯಾಲಯ ಸ್ಥಾಪಿಸಿರುವುದರಿಂದ ಸಮಸ್ಯೆಯಾಗಿದೆ ಎಂದು ಹೇಳಿದರು.

ಕೃಷಿಗಾಗಿ ಅರಣ್ಯ ಒತ್ತುವರಿ ಮಾಡಿದವರನ್ನು ಭೂ ಕಬಳಿಕೆ ವ್ಯಾಪ್ತಿಗೆ ತರಲಾಗುತ್ತಿದೆ. ಇದರಿಂದ ನಿತ್ಯ 200-300 ರೈತರು ನ್ಯಾಯಾಲಯದಲ್ಲಿ ಕೇಸು ಎದುರಿಸುವಂತಾಗಿದೆ. ಪಾರಂಪರಿಕ ಅರಣ್ಯ ಹಕ್ಕು ಕಾಯ್ದೆಯಡಿ ಅರಣ್ಯ ವಾಸಿಗಳನ್ನು ರಕ್ಷಣೆ ಮಾಡುವುದೇ ಬೇರೆ. ಭೂ ಕಬಳಿಕೆ ಮಾಡುವುದೇ ಬೇರೆ.

ಒತ್ತುವರಿ ಭೂ ಕಬಳಿಕೆ ವ್ಯಾಪ್ತಿಗೆ ಬರುವುದಿಲ್ಲ: ಈಗಾಗಲೇ ಸರ್ಕಾರ ಸೂಚನೆ ಕೊಟ್ಟಿದ್ದು, 192(ಎ) ಅಡಿಯಲ್ಲಿ ಕೃಷಿಗಾಗಿ ಮಾಡಿರುವ ಒತ್ತುವರಿ ಬಿಟ್ಟು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಆದರೂ ಕೆಲವೆಡೆ ಆ ಜಾಗದಲ್ಲಿ ಬೆಳೆದ ಬೆಳೆಯನ್ನು ನಾಶಪಡಿಸಲಾಗಿದೆ. ಆಗಿರುವ ಕೃತ್ಯವನ್ನು ಸಹಿಸಲಾಗದು. ಸೋಮವಾರ(ಮಾ.7) ಮುಂಡರಗಿ ತಾಲೂಕಿನಲ್ಲಿ ಅರಣ್ಯ ತೆರವು ಸಂದರ್ಭದಲ್ಲಿ ವಿಷ ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಆ ಪ್ರಕರಣದಲ್ಲಿ ಸರ್ಕಾರ ಸೂಕ್ತ ಪರಿಹಾರ ನೀಡಲಿದೆ ಎಂದ ಅವರು, ರೈತರು ಮಾಡಿದ ಒತ್ತುವರಿ ಭೂ ಕಬಳಿಕೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಹೆಚ್.ಕೆ.ಪಾಟೀಲ್, ಪಾರಂಪರಿಕ ಅರಣ್ಯ ವಾಸಿಗಳ ಹಕ್ಕು ಜಾರಿಯಲ್ಲಿದ್ದರೂ, ಅರಣ್ಯ ಇಲಾಖೆ ಅಧಿಕಾರಿಗಳು ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುತ್ತಿದ್ದಾರೆ. ಮುಂಡರಗಿಯಲ್ಲಿ ಹಲವು ತೋಟ ನಾಶ ಮಾಡಿದ್ದಾರೆ. ನಾಶ ಮಾಡುವಾಗ ಇಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಒಬ್ಬ ಮಹಿಳೆ ಮೃತಪಟ್ಟು ಮತ್ತೊಬ್ಬ ಮಹಿಳೆ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

ಬಗರ್ ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವುದು ಜನವಿರೋಧಿ, ಕಾನೂನು ವಿರೋಧಿಯಾಗಿದೆ. ಗದಗ ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಾಗುವಳಿದಾರರ ಮೇಲೆ ಕೇಸ್​​ ದಾಖಲಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅಧಿಕಾರಿಗಳು ದರ್ಪ, ಬಲಪ್ರಯೋಗ ಮಾಡಿರುವುದನ್ನು ಖಂಡಿಸಿದರು.

ಸದನ ಸಮಿತಿ ರಚನೆಗೆ ಆಗ್ರಹ: ಈ ವಿಚಾರದ ಬಗ್ಗೆ ಸದನ ಸಮಿತಿ ರಚಿಸಬೇಕು. ರೈತರನ್ನು ಒಕ್ಕಲೆಬ್ಬಿಸಬಾರದೆಂಬ ಆದೇಶವಿದ್ದರೂ ಒಕ್ಕಲೆಬ್ಬಿಸಲಾಗುತ್ತಿದೆ ಎಂದು ಹೆಚ್.ಕೆ.ಪಾಟೀಲ್ ದೂರಿದರು.

ಸರ್ಕಾರಕ್ಕೆ ಒಳ್ಳೆ ಹೆಸರು ಬರುವುದಿಲ್ಲ: ಇದೇ ವಿಚಾರಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಹೆಚ್.ಕೆ.ಪಾಟೀಲ್ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ. ಬಗರ್ ಹುಕುಂ ಸಾಗುವಳಿದಾರರನ್ನು ಉಳಿಸುವ ಪ್ರಯತ್ನ ಮಾಡಿದ್ದೇವೆ. ಅರಣ್ಯ ಇಲಾಖೆಯಿಂದ ಒಕ್ಕಲೆಬ್ಬಿಸುತ್ತಿರುವುದು ದುರ್ದೈವದ ಸಂಗತಿ. ಇದರಿಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುವುದಿಲ್ಲ ಎಂದರು.

ಸಮಸ್ಯೆ ಪರಿಹರಿಸಲು ವಿಶೇಷ ಸಭೆ ನಡೆಸಿ ಬಡವರಿಗೆ ರಕ್ಷಣೆ ನೀಡಲು ಅರಣ್ಯ ಇಲಾಖೆ ಸೂಚನೆ ನೀಡಬೇಕು. ಸದನ ಸಮಿತಿ ರಚಿಸುವುದು ಸೂಕ್ತ ಎಂದು ಯಡಿಯೂರಪ್ಪ ಸಲಹೆ ನೀಡಿದರು. ಇದಕ್ಕೆ ಧ್ವನಿಗೂಡಿಸಿದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಪಾರಂಪರಿಕ ಸಾಗುವಳಿದಾರರಿಗೆ ಕಿರುಕುಳ ನೀಡಲಾಗುತ್ತಿದೆ. ಅನೇಕ ಭಾಗಗಳ ಸಮಸ್ಯೆ ಪರಿಶೀಲಿಸಿ ವರದಿ ನೀಡಲು ಸದನ ಸಮಿತಿ ರಚಿಸಬೇಕು ಎಂದರು. ಮಾಜಿ ಸ್ಪೀಕರ್ ರಮೇಶ್‍ಕುಮಾರ್ ಮಾತನಾಡಿ, ಮುಖ್ಯಮಂತ್ರಿ ಮತ್ತು ಕಾನೂನು ಸಚಿವರು ಸಭೆ ಕರೆದು ಪರಿಹಾರ ಕಂಡು ಕೊಳ್ಳಬೇಕು ಎಂದು ಸಲಹೆ ನೀಡಿದರು.

ಸ್ಪೀಕರ್ ಅಸಮಾಧಾನ: ಇದಕ್ಕೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ದನಿಗೂಡಿಸಿ, ಅರಣ್ಯ ವಾಸಿಗಳನ್ನು ಒಕ್ಕಲೆಬ್ಬಿಸುವ ವಿಚಾರ ಗಂಭೀರವಾದದ್ದು. ಭೂ ಕಬಳಿಕೆ ವಿರುದ್ಧ ಪ್ರಕರಣ ದಾಖಲಿಸಿ ಸಣ್ಣ ಸಣ್ಣ ರೈತರಿಗೆ ಕಿರುಕುಳ ನೀಡಲಾಗುತ್ತಿದೆ. ಅಧಿಕಾರಿಗಳು ಮನುಷ್ಯತ್ವವಿಲ್ಲದೇ ತೆಂಗು, ಬಾಳೆ ಬೆಳೆ ನಾಶ ಮಾಡಿದ್ದಾರೆ. ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.

ಬಿಜೆಪಿ ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಅರಣ್ಯ ಇಲಾಖೆ ಬ್ರಿಟಿಷರ ಪಳೆಯುಳಿಕೆಯಾಗಿದ್ದು, ಕಬ್ಬು, ಶೇಂಗಾ ಎಲ್ಲ ಬೆಳೆಯನ್ನು ನಾಶ ಮಾಡುತ್ತಿದ್ದಾರೆ. ಲಕ್ಷ ಲಕ್ಷ ಕೋಟಿಯಷ್ಟು ಭೂ ಕಬಳಿಕೆ ಮಾಡಿರುವ ಒತ್ತುವರಿ ತೆರವುಗೊಳಿಸಲು ಅಂತಹ ಅರಣ್ಯ ಅಧಿಕಾರಿಯನ್ನು ನೇಮಕ ಮಾಡಿ ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಒಬಿಸಿ ಮೀಸಲಾತಿಗೆ ಕಾಂತರಾಜ್ ಆಯೋಗದ ವರದಿ ಪರಿಗಣನೆಗೆ ಚಿಂತನೆ: ಈಶ್ವರಪ್ಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.