ETV Bharat / state

ಎಪಿಎಂಸಿ‌ ಕಾಯಿದೆಗೆ ತಿದ್ದುಪಡಿ ತರಲು ಹೊರಟಿರುವುದು ಸರಿಯಲ್ಲ: ಹೆಚ್.ಡಿ. ದೇವೇಗೌಡ - corona lock down

ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮುಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಹೆಚ್.ಡಿ. ದೇವೇಗೌಡ
ಹೆಚ್.ಡಿ. ದೇವೇಗೌಡ
author img

By

Published : May 14, 2020, 3:39 PM IST

ಬೆಂಗಳೂರು: ಇಡೀ ರಾಜ್ಯ ಕೊರೊನಾ ವಿರುದ್ಧ ಸಮರ ನಡೆಸುತ್ತಿರುವ ಈ ಸಮಯದಲ್ಲಿ ಸುಗ್ರೀವಾಜ್ಞೆ ಮೂಲಕ ಎಪಿಎಂಸಿ‌ ಕಾಯಿದೆಗೆ ತಿದ್ದುಪಡಿ ಮಾಡಲು ಹೊರಟಿರುವುದು ಸರಿಯಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ

ರೈತ ಸಮುದಾಯದ ಅಭಿಪ್ರಾಯ ಪಡೆಯದೇ ಹಾಗೂ ಈ ತಿದ್ದುಪಡಿ ಕಾಯಿದೆಯನ್ನು ಸದನದಲ್ಲಿ ಮಂಡಿಸದೇ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ನಿರ್ಧಾರವನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಹೆಚ್.ಡಿ. ದೇವೇಗೌಡ ಟ್ವೀಟ್​
ಹೆಚ್.ಡಿ. ದೇವೇಗೌಡ ಟ್ವೀಟ್​

ಈ ರೀತಿ ಏಕಾಏಕಿ ತೀರ್ಮಾನ ಕೈಗೊಂಡರೆ ರೈತರು ಸಂಕಷ್ಟಕ್ಕೀಡಾಗುತ್ತಾರೆ. ಮಧ್ಯವರ್ತಿಗಳ‌‌ ಕಪಿಮುಷ್ಟಿಯಿಂದ ಎಪಿಎಂಸಿ ಕಾಯ್ದೆ ರೈತರಿಗೆ ತಕ್ಕ ಮಟ್ಟಿನ ರಕ್ಷಣೆ ನೀಡಿತ್ತು. ಆದರೆ, ಎಪಿಎಂಸಿಯ ತಿದ್ದುಪಡಿ ಕಾಯ್ದೆ ಜಾರಿಯಾದರೆ ಬಂಡವಾಳಶಾಹಿ ಹಾಗೂ ಬಹುರಾಷ್ಟ್ರೀಯ ಕಂಪನಿಗಳಿಂದ ರೈತರು ಶೋಷಣೆಗೊಳಗಾಗುವ ಅಪಾಯವಿದೆ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹೆಚ್.ಡಿ. ದೇವೇಗೌಡ ಟ್ವೀಟ್​
ಹೆಚ್.ಡಿ. ದೇವೇಗೌಡ ಟ್ವೀಟ್​

ಎಪಿಎಂಸಿಯ ಕಾಯಿದೆಯನ್ನು ತಿದ್ದುಪಡಿ ಮೂಲಕ ದುರ್ಬಲಗೊಳಿಸಿದರೆ ರೈತರು ಶೋಷಣೆಗೊಳಗಾದಾಗ ಯಾವುದೇ ರಕ್ಷಣೆ ನೀಡಲು ಸಾಧ್ಯವಾಗದು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.