ಬೆಂಗಳೂರು: ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಗೃಹ ಸಚಿವರಾದ ಅಮಿತ್ ಶಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾಳೆ ನಗರಕ್ಕೆ ಆಗಮಿಸುತ್ತಿರುವುದರಿಂದ ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ತಿಳಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಭದ್ರಾವತಿಗೆ ಭೇಟಿ ನೀಡುತ್ತಿದ್ದು, ಆರ್.ಎ.ಎಫ್ ಘಟಕದ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಳಗ್ಗೆ ದೆಹಲಿಯಿಂದ ಹೊರಡುವ ಅಮಿತ್ ಶಾ 11 ಗಂಟೆಗೆ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದು, ಆವರನ್ನ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಸಚಿವರು ಸ್ವಾಗತಿಸಲಿದ್ದಾರೆ.
ನೂತನ ಸಚಿವ ಅರವಿಂದ ಲಿಂಬಾವಳಿ ಮತ್ತು ಸಿ.ವಿ.ರಾಮನ್ ನಗರದ ಶಾಸಕ ರಘು ಅವರ ನೇತೃತ್ವದಲ್ಲಿ, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಕೇಂದ್ರ ಗೃಹ ಸಚಿವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲು ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ನಗರದ ಸುತ್ತ ಮುತ್ತ ಬಿಜೆಪಿ ಫ್ಲಾಗ್ಗಳನ್ನು ಕಟ್ಟುವ ಮೂಲಕ ಅಮಿಶ್ ಶಾ ಸ್ವಾಗತಕ್ಕೆ ತಯಾರಿ ಮಾಡುತ್ತಿದ್ದಾರೆ.
ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಮಾಜಿ ಎಮ್ಎಲ್ಸಿ ಅಶ್ವಥ್ ನಾರಾಯಣ, ನಾಳೆ ಬೆಳಗ್ಗೆ 11 ಗಂಟೆಗೆ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ ನೀಡಿ ರಾಜ್ಯದ ಸಚಿವರು, ಶಾಸಕರು ಹಾಗೂ ಸಂಸದರನ್ನ ಸೌಹಾರ್ಧಯುತವಾಗಿ ಭೇಟಿ ಮಾಡಲಿದ್ದಾರೆ. ನಂತರ ಹೆಲಿಕಾಪ್ಟರ್ ಮೂಲಕ 12:30ಕ್ಕೆ ಭದ್ರಾವತಿಗೆ ಹೋಗಲಿದ್ದಾರೆ. ಅಲ್ಲಿ ಅವರ ಇಲಾಖೆಯ ಕಾರ್ಯಕ್ರಮವಿದ್ದು, ಮುಗುಸಿಕೊಂಡು ನಂತರ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 3:30ಕ್ಕೆ ವಾಪಸ್ ಆಗಲಿದ್ದಾರೆ ಎಂದರು.
ಓದಿ:'ಉತ್ತರ ಕರ್ನಾಟಕದಲ್ಲಿ 21 ಸಾವಿರ ಕೋಟಿ ರೂ. ವೆಚ್ಚದಲ್ಲಿ 13 ಹೆದ್ದಾರಿಗಳ ಅಭಿವೃದ್ಧಿ'
ಅವರನ್ನು ಸ್ವಾಗತ ಮಾಡಲು ನಗರದ ಕೆಆರ್ಪುರ, ಮಹದೇವಪುರ, ಸಿ.ವಿ.ರಾಮನ್ ನಗರ, ಮತ್ತು ಸರ್ವಜ್ಞ ನಗರದ ನಾಲ್ಕು ಮಂಡಲಗಳಿಂದ ನಾಲ್ಕು ಸಾವಿರ ಬಿಜೆಪಿ ಕಾರ್ಯಕರ್ತರು ಆಗಮಿಸುತ್ತಿದ್ದಾರೆ. ನಂತರ ಇಲ್ಲಿಂದ ಹೆಚ್ಎಎಲ್ನಿಂದ ದೊಮ್ಮಲೂರು ಸರ್ಕಲ್ನಲ್ಲಿ ಶಾಂತಿ ನಗರ, ಬಿಟಿಎಂ ಲೇಔಟ್, ಜಯನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಿಂದ ಅಮಿಶ್ ಶಾ ಅವರಿಗೆ ಸ್ವಾಗತ ಏರ್ಪಡಿಸಲಾಗಿದೆ.ಟ್ರಿನಿಟಿ ಸರ್ಕಲ್ ಭೇಟಿ ನೀಡಿ ಅಲ್ಲಿ ಶಿವಾಜಿ ನಗರ, ಗಾಂಧಿನಗರ, ಚಾಮರಾಜಪೇಟೆ, ರಾಜಾಜಿನಗರ ಕ್ಷೇತ್ರದ ಬಿಜೆಪಿ ಬೆಂಬಲಿಗರು ವಿನೂತವಾಗಿ ಸ್ವಾಗತ ಕೋರಲು ಸಿದ್ಧತೆ ಮಾಡಲಾಗಿದೆ ಎಂದರು.