ETV Bharat / state

ಏ.1ರಂದು ರಾಜ್ಯಕ್ಕೆ ಅಮಿತ್ ಶಾ ಭೇಟಿ: ಬಿಜೆಪಿ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ

author img

By

Published : Mar 28, 2022, 10:34 PM IST

ರಾಜ್ಯಕ್ಕೆ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಉನ್ನತಮಟ್ಟದ ಸಭೆ ನಡೆಯಿತು. ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಾಚರಣೆ ಪ್ರಯುಕ್ತ ಏ.1ರಂದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರಲ್ಲಿ ಅಮಿತ್​ ಶಾ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ರೂಪುರೇಷೆಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸಭೆಯಲ್ಲಿ ಚರ್ಚಿಸಲಾಗಿದೆ.

High level of meeting in the BJP office
ಬಿಜೆಪಿ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ

ಬೆಂಗಳೂರು: ಏ.1 ರಂದು ತುಮಕೂರು ಸಿದ್ದಗಂಗಾ ಮಠದಲ್ಲಿ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸಣ್ಣ ನೀರಾವರಿ, ಕಾನೂನು, ಸಂಸದೀಯ ವ್ಯವಹಾರ ಮತ್ತು ಶಾಸನ ರಚನೆ ಸಚಿವರಾದ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

High level of meeting in the BJP office
ಬಿಜೆಪಿ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ

ಬಿಜೆಪಿ ಕಚೇರಿಯಲ್ಲಿ ಉನ್ನತಮಟ್ಟದ ಸಭೆ: ರಾಜ್ಯಕ್ಕೆ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿಯಲ್ಲಿ ಉನ್ನತಮಟ್ಟದ ಸಭೆ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಸಚಿವರು, ಶಾಸಕರು ಭಾಗಿಯಾಗಿದ್ದರು. ಅಮಿತ್ ಶಾ ಭಾಗಿಯಾಗಲಿರುವ ಕಾರ್ಯಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಕಾರ್ಯಕ್ರಮದ ರೂಪುರೇಷೆ ತಯಾರಿ ಕುರಿತು ಚರ್ಚೆ: ತುಮಕೂರಿನಲ್ಲಿ ನಡೆಯಲಿರುವ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮದ ರೂಪುರೇಷೆ ತಯಾರಿ ಕುರಿತು ತುಮಕೂರು ವಿಭಾಗದ ಪದಾಧಿಕಾರಿಗಳ ಜೊತೆಯೂ ಸಮಾಲೋಚನೆ ನಡೆಸಲಾಯಿತು. ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆಯೂ ಚರ್ಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆಗೆ ಸಂಬಂಧಿಸಿದಂತೆ ಸೋಮವಾರ ಸಭೆ ನಡೆಸಲಾಗಿದೆ.

ಇದನ್ನೂ ಓದಿ: ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ವಿರುದ್ಧ ತನಿಖೆಗೆ ಆಗ್ರಹಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಸಭೆ ನಂತರ ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸ್ವಾಮೀಜಿ ಅವರಿಗೆ ಗೌರವ ಸಲ್ಲಿಸಲು ಅಮಿತ್ ಶಾ ಬರಲಿದ್ದಾರೆ. ಅವರ ಜೊತೆ ಕಾರ್ಯಕರ್ತರು ಸೇರಲು ನಿರ್ಧರಿಸಲಾಗಿದೆ. ಈ ಕಾರ್ಯಕ್ರಮವನ್ನು ಚೆನ್ನಾಗಿ ಮಾಡಬೇಕು ಎನ್ನುವ ಸಂಕಲ್ಪ ಹೊಂದಿದ್ದೇವೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ರೂಪಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕ್ಷೀರ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದಲ್ಲೂ ಅಮಿತ್ ಶಾ ಭಾಗವಹಿಸಲಿದ್ದಾರೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.