ETV Bharat / state

ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್​ನಿಂದ 'ಅಮಿತ್ ಶಾ ಗೋ ಬ್ಯಾಕ್' ಪ್ರತಿಭಟನೆ

author img

By

Published : May 3, 2022, 1:56 PM IST

Updated : May 3, 2022, 3:58 PM IST

ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದರೂ ಪ್ರಧಾನಿ ಮೋದಿ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಭ್ರಷ್ಟಾಚಾರವನ್ನು ಖಂಡಿಸುತ್ತಿಲ್ಲ. ಇದರಲ್ಲಿ ಕೇಂದ್ರ ಸರ್ಕಾರದ ಮಂತ್ರಿಗಳು ಹಾಗೂ ಪಕ್ಷವು ಸಹ ಪಾಲು ಪಡೆದಂತೆ ಕಾಣಿಸುತ್ತಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ದೂರಿದರು..

Youth Congress protest in Bengaluru
ಬೆಂಗಳೂರಿನಲ್ಲಿ ಯುವ ಕಾಂಗ್ರೆಸ್​ನಿಂದ ಪ್ರತಿಭಟನೆ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡುತ್ತಿರುವುದನ್ನು ಖಂಡಿಸಿ 'ಅಮಿತ್ ಶಾ ಗೋ ಬ್ಯಾಕ್', 'ಕನ್ನಡ ವಿರೋಧಿ ಅಮಿತ್ ಶಾ' ಹಾಗೂ 'ಭ್ರಷ್ಟಾಚಾರಕ್ಕೆ ಬೆಂಬಲ ನೀಡುತ್ತಿರುವ ಅಮಿತ್ ಶಾ' ಎಂದು ಘೋಷಣೆ ಕೂಗಿ ಯುವ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪಿಎಸ್ಐ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಭ್ರಷ್ಟರನ್ನು ಬಿಜೆಪಿ ಸರ್ಕಾರ ರಕ್ಷಿಸುತ್ತಿದೆ ಹಾಗೂ ಕನ್ನಡ ವಿರೋಧಿ ಹಿಂದಿ ಹೇರಿಕೆಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದನಿ ಎತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.

ಯುವ ಕಾಂಗ್ರೆಸ್​ನಿಂದ 'ಅಮಿತ್ ಶಾ ಗೋ ಬ್ಯಾಕ್' ಪ್ರತಿಭಟನೆ

ಭ್ರಷ್ಟಾಚಾರದಲ್ಲಿ ನೀವು ಭ್ರಷ್ಟಾಚಾರದ ಎಷ್ಟು ಪಾಲು ಪಡೆದಿದ್ದರೆ ಎಂಬುದರ ಬಗ್ಗೆ ರಾಜ್ಯದ ಜನತೆಗೆ ತಿಳಿಸಬೇಕೆಂದು ಅಮಿತ್ ಶಾ ಅವರಿಗೆ ಪ್ರತಿಭಟನಾಕಾರರು ಇದೇ ಸಂದರ್ಭ ಆಗ್ರಹಿಸಿದರು. ಭ್ರಷ್ಟ ಬಿಜೆಪಿ ಸರ್ಕಾರ ಎಲ್ಲ ಇಲಾಖೆಯಲ್ಲೂ ದಿನನಿತ್ಯ ಲೂಟಿ ಮಾಡುತ್ತಿದೆ. ನೇಮಕಾತಿ ಹಗರಣಗಳಲ್ಲಿ ಬಿಜೆಪಿ ಮಂತ್ರಿಗಳು ಬಿಜೆಪಿ ಪಕ್ಷದ ಮುಖಂಡರು ಭಾಗಿಯಾಗಿ ಸಮಾಜದ ಮೌಲ್ಯವನ್ನು ಹಾಳುಗೆಡುವುತ್ತಿದ್ದಾರೆ.

ಶ್ರಮವಹಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ದ್ರೋಹವೆಸಗಿದ್ದಾರೆ. ಇಂತಹ ಭ್ರಷ್ಟಾಚಾರಿಗಳನ್ನು ರಾಜ್ಯದ ಜನತೆ ಕ್ಷಮಿಸುವ ಮಾತೇ ಇಲ್ಲ. ಕರ್ನಾಟಕದ ರಾಜಕೀಯ ಕರ್ನಾಟಕದ ಇತಿಹಾಸದಲ್ಲಿ ಬಿಜೆಪಿಯಂತಹ ಹಗಲು ದರೋಡೆ ಸರ್ಕಾರ ಪಕ್ಷ ಮತ್ತೊಂದಿಲ್ಲ ಎಂಬುದು ಸಾಬೀತಾಗಿದೆ. ಇಷ್ಟೆಲ್ಲಾ ಭ್ರಷ್ಟಾಚಾರ ನಡೆದರೂ ಪ್ರಧಾನಿ ಮೋದಿ ಹಾಗೂ ಕೇಂದ್ರದ ಬಿಜೆಪಿ ನಾಯಕರು ರಾಜ್ಯದ ಭ್ರಷ್ಟಾಚಾರವನ್ನು ಖಂಡಿಸುತ್ತಿಲ್ಲ. ಭ್ರಷ್ಟಾಚಾರದಲ್ಲಿ ಕೇಂದ್ರ ಸರ್ಕಾರದ ಮಂತ್ರಿಗಳು ಹಾಗೂ ಪಕ್ಷವು ಸಹ ಪಾಲು ಪಡೆದಂತೆ ಕಾಣಿಸುತ್ತಿದೆ ಎಂದು ದೂರಿದರು.

ಹಿಂದಿ ಹೇರುವ ಪ್ರಯತ್ನ: ಅಮಿತ್ ಶಾ ಹಿಂದಿ ಭಾಷೆಯನ್ನು ಹೇರುವ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡ ನೆಲದಲ್ಲಿ ಕನ್ನಡವನ್ನು ಕಡೆಗಣಿಸುವ ಮಾತನಾಡಿದರೆ ಅತ್ಯಂತ ಕಠಿಣ ನಿರ್ಧಾರವನ್ನು ಕನ್ನಡಿಗರು ಕೈಗೊಳ್ಳುತ್ತಾರೆ ಎಂಬುದನ್ನು ಅಮಿತ್ ಶಾ ಅರ್ಥೈಸಿಕೊಳ್ಳಬೇಕು. ಹಿಂದಿ ಭಾಷೆ ನಿಮಗೆ ಕನ್ನಡ ಭಾಷೆ ಕನ್ನಡಿಗರಿಗೆ ಕನ್ನಡ ಭಾಷೆಯ ಇತಿಹಾಸ ಎಲ್ಲಾ ಭಾಷೆಗಿಂತ ಹಳೆಯದು ಎಂಬುದನ್ನು ಅರ್ಥೈಸಿಕೊಳ್ಳಬೇಕು ಹಾಗೂ ಕನ್ನಡದ ಬಗ್ಗೆ ಹಗುರವಾಗಿ ಮಾತನಾಡುವ ಯಾರನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಬೆಂಗಳೂರು ನಗರ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ನಡೆದ ಈ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಜಿ.ಜನಾರ್ದನ್, ಎಲ್.ಜಯಸಿಂಹ, ಎ.ಆನಂದ್, ಪ್ರಕಾಶ್ ರವಿಶೇಖರ್ ಮತ್ತಿತರ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಬೆಂಗಳೂರು: ಬಸವೇಶ್ವರ ಪುತ್ಥಳಿಗೆ ಅಮಿತ್ ಶಾ ಮಾಲಾರ್ಪಣೆ

Last Updated : May 3, 2022, 3:58 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.