ETV Bharat / state

ಖಾಸಗಿ ಹೋಟೆಲ್​ನಲ್ಲಿ ರಾಜ್ಯ ಬಿಜೆಪಿ ನಾಯಕರ ಜೊತೆ ಅಮಿತ್ ಶಾ ಸಭೆ ಆರಂಭ: ಬಂಡಾಯ, ಲಿಂಗಾಯತ ವಿರೋಧಿ ಅಸ್ತ್ರದ ಕುರಿತು ಚರ್ಚೆ..! - ದೇವನಹಳ್ಳಿ ರೋಡ್​ ಶೋ

ದೇವನಹಳ್ಳಿ ರೋಡ್​ ಶೋ ರದ್ದಾದ ಹಿನ್ನೆಲೆ ನಿಗದಿಯಾಗಿದ್ದ ಸಮಯಕ್ಕೂ ಮುನ್ನ ಸಭೆ ಪ್ರಾರಂಭಿಸಿದ ಅಮಿತ್​ ಶಾ.

Central Home Minister Amith Shah
ಕೇಂದ್ರ ಗೃಹ ಸಚಿವ ಅಮಿತ್​ ಶಾ
author img

By

Published : Apr 21, 2023, 7:09 PM IST

ಬೆಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯದ ಬಳಿಕ ಮೊದಲ ಬಾರಿ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಈ ನಡುವೆ ಖಾಸಗಿ ಹೋಟೆಲ್​ನಲ್ಲಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಜೊತೆ ಮಹತ್ವದ ಸಭೆ ನಡೆಸುತ್ತಿದ್ದಾರೆ. ಲಿಂಗಾಯತ ವಿರೋಧಿ ಅಸ್ತ್ರಕ್ಕೆ ಪ್ರತ್ಯಸ್ತ್ರ ಸೇರಿದಂತೆ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆ ನಡೆಸಲಿದ್ದಾರೆ.

ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್​ ಹೋಟೆಲ್​ಗೆ ಆಗಮಿಸಿರುವ ಅಮಿತ್ ಶಾ ಸಂಜೆ 6 ರಿಂದ 7 ರವರೆಗೆ ಸಮಯವನ್ನು ಕಾಯ್ದಿರಿಸಿದ್ದು, ಆಯ್ದ ನಾಯಕರ ಜೊತೆ ಸಮಾಲೋಚನೆ ನಡೆಸಿ ಸಂಜೆ 7 ರಿಂದ 7.40 ರವರೆಗೆ ಭೋಜನಕ್ಕೆ ಸಮಯ ಕಾಯ್ದಿರಿಸಿದ್ದಾರೆ. ರಾತ್ರಿ 7.45 ರಿಂದ 9.00 ಗಂಟೆವರೆಗೂ ರಾಜಕೀಯ ವಿಷಯಗಳ ಕುರಿತು ಪಕ್ಷದ ಜೊತೆ ಸಭೆಗೆ ಸಮಯ ನಿಗದಿಯಾಗಿತ್ತು. ಆದರೆ ದೇವನಹಳ್ಳಿ ರೋಡ್ ಶೋ ರದ್ದಾದ ಹಿನ್ನೆಲೆಯಲ್ಲಿ ನಿಗದಿತ ಸಮಯಕ್ಕೂ ಮೊದಲೇ ತಾಜ್ ವೆಸ್ಟ್ ಎಂಡ್ ಹೋಟೆಲ್​ಗೆ ಆಗಮಿಸಿರುವ ಅಮಿತ್ ಶಾ ಭೋಜನ ಕೂಟದೊಂದಿಗೆ ಸಭೆಯನ್ನು ಒಟ್ಟಿಗೆ ನಡೆಸಲು ನಿರ್ಧರಿಸಿದ್ದಾರೆ.

ಹಾಗಾಗಿ ಎರಡು ಹಂತದ ಸಭೆ ಒಟ್ಟಿಗೆ ನಡೆಯುತ್ತಿದೆ. ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಚುನಾವಣಾ ನಿರ್ವಹಣಾ ಸಂಚಾಲಕಿ ಶೋಭಾ ಕರಂದ್ಲಾಜೆ ಸೇರಿದಂತೆ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು ಸೇರಿದಂತೆ ಚುನಾವಣಾ ಜವಾಬ್ದಾರಿ ನಿರ್ವಹಣೆ ಮಾಡುತ್ತಿರುವ ಒಟ್ಟು 54 ಮುಖಂಡರು ಅಮಿತ್ ಶಾ ನಡೆಸುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಸಹ ಉಸ್ತುವಾರಿ ಅಣ್ಣಾಮಲೈ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಗೆ ಆಹ್ವಾನಿಸಲಾಗಿದೆ.

ಪಕ್ಷದಲ್ಲಿ ಟಿಕೆಟ್ ಹಂಚಿಕೆ ನಂತರ ನಡೆಯುತ್ತಿರುವ ವಿದ್ಯಮಾನಗಳ ಕುರಿತು ಅಮಿತ್ ಶಾ, ರಾಜ್ಯ ನಾಯಕರ ಜೊತೆ ಮಹತ್ವದ ಮಾತುಕತೆ ನಡೆಸುತ್ತಿದ್ದಾರೆ. ಬಂಡಾಯ ಶಮನಕ್ಕೆ ನಡೆಸಿರುವ ಪ್ರಯತ್ನಗಳ ಕುರಿತು ರಾಜ್ಯದ ನಾಯಕರು ವಿವರಣೆ ನೀಡಲಿದ್ದಾರೆ. ಈ ಬಾರಿ 73 ಕಡೆ ಹೊಸ ಮುಖಕ್ಕೆ ಅವಕಾಶ ನೀಡಿದ್ದು, ಅಲ್ಲೆಲ್ಲಾ ಬಂಡಾಯ ಶಮನಕ್ಕೆ ನಡೆಸಿರುವ ಪ್ರಯತ್ನ ಮತ್ತು ಪ್ರಸ್ತುತ ಸನ್ನಿವೇಶಗಳ ವಿವರ ನೀಡಲಿದ್ದಾರೆ. ಇದೇ ವೇಳೆ, ಬಹು ಮುಖ್ಯವಾಗಿ ಲಿಂಗಾಯತ ವಿರೋಧಿ ಬಿಜೆಪಿ ಎನ್ನುವ ಅಸ್ತ್ರವನ್ನು ಕಾಂಗ್ರೆಸ್ ಪ್ರಯೋಗ ಮಾಡುತ್ತಿರುವ ಕುರಿತು ಚರ್ಚೆ ನಡೆಯಲಿದೆ.

ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಇಬ್ಬರ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿಗೆ ಲಿಂಗಾಯತ ವಿರೋಧಿ ಎನ್ನುವ ಹಣೆಪಟ್ಟಿ ಕಟ್ಟಲು ಹೊರಟಿರುವ ಕಾಂಗ್ರೆಸ್ ತಂತ್ರಕ್ಕೆ ಪ್ರತಿತಂತ್ರ ರೂಪಿಸುವ ಕುರಿತು ಚರ್ಚೆ ನಡೆಯಲಿದೆ. ಯಡಿಯೂರಪ್ಪ ನಿವಾಸದಲ್ಲಿ ನಡೆದ ಪಕ್ಷದ ಲಿಂಗಾಯತ ನಾಯಕರ ಸಭೆಯಲ್ಲಿ ಮುಂದಿನ ಸಿಎಂ ಲಿಂಗಾಯತ ವ್ಯಕ್ತಿ ಆಗಿರಲಿದ್ದಾರೆ ಎನ್ನುವ ಭರವಸೆ ಜನರಿಗೆ ನೀಡಬೇಕು ಎನ್ನುವ ಒಲವು ವ್ಯಕ್ತವಾಗಿದ್ದು, ಈ ಬಗ್ಗೆಯೂ ಸಮಾಲೋಚನೆ ನಡೆಸಲಾಗುತ್ತದೆ. ಜೊತೆಗೆ ಕಾಂಗ್ರೆಸ್​ಗೆ ಯಾವ ರೀತಿ ಟಾಂಗ್ ನೀಡಬೇಕು ಎನ್ನುವ ಕುರಿತು ಚರ್ಚಿಸಲಾಗುತ್ತದೆ ಎನ್ನಲಾಗಿದೆ.

ಶೆಟ್ಟರ್ ಹಾಗೂ ಸವದಿ ಕ್ಷೇತ್ರದಲ್ಲಿ ಯಾವ ರೀತಿ ಪ್ರಚಾರ ಕಾರ್ಯ ನಡೆಸಬೇಕು, ಸಮಾವೇಶಗಳು, ರ‍್ಯಾಲಿಗಳು ಯಾವ ರೀತಿ ನಡೆಯಬೇಕು, ಸ್ಟಾರ್ ಪ್ರಚಾರಕರ ಬಳಕೆ ಹೇಗೆ ಇತ್ಯಾದಿಗಳ ಕುರಿತು ಚರ್ಚೆ ನಡೆಯಲಿದ್ದು, ಇಡೀ ಪ್ರಚಾರ ಕಾರ್ಯದ ನೀಲನಕ್ಷೆಯ ಕುರಿತು ಚರ್ಚಿಸಲಾಗುತ್ತದೆ ಎನ್ನಲಾಗಿದೆ. ಸಭೆ ಕುರಿತು ಮಾಹಿತಿ ನೀಡಿದ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಅಮಿತ್ ಶಾ ಬಂದಿದ್ದಾರೆ. ಪ್ರಮುಖರ ಜೊತೆ ಸಭೆ ಇದೆ. 140ಕ್ಕೂ ಹೆಚ್ಚು ಸೀಟು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ಆಶಯ ಇದೆ. ಅದಕ್ಕಾಗಿ ಅವರೆಲ್ಲಾ ರಾಜ್ಯದಲ್ಲಿ ಓಡಾಡ್ತಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸ್ತೇವೆ ಎಂದರು.

ಸ್ವತಃ ಪ್ರಧಾನಿಯವರು ಈಶ್ವರಪ್ಪ ಅವರಿಗೆ ಕರೆ ಮಾಡಿದ್ದರು. ರಾಜಕೀಯ ವಿಚಾರ ತಿಳಿದುಕೊಂಡು ಧೈರ್ಯ ತುಂಬಿದ್ದಾರೆ. ಪ್ರಧಾನಿ ಕರೆಯಿಂದ ಈಶ್ವರಪ್ಪ ಕುಟುಂಬ ಕೂಡ ಖುಷಿಯಾಗಿದೆ. ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಓಡಾಡುವುದಾಗಿ ಹೇಳಿದ್ದಾರೆ ಎಂದರು.

ಇದನ್ನೂ ಓದಿ: ಲಿಂಗಾಯತ ಮತಗಳನ್ನು ಸೆಳೆಯಲು ಶೆಟ್ಟರ್​ಗೆ ಟಾಸ್ಕ್ ಕೊಟ್ಟ 'ಕೈ': ಶೆಟ್ಟರ್ ಹಣಿಯಲು ಆರ್​ಎಸ್​ಎಸ್​ ರಣತಂತ್ರ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.