ETV Bharat / state

ನಾಳೆ ಬಳ್ಳಾರಿಗೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ.. ರಾಜ್ಯ ನಾಯಕರೊಂದಿಗೆ ಮಹತ್ವದ ಸಭೆ

ವಿಧಾನಸಭೆ ಚುನಾವಣೆ -2023 - ಬಿಜೆಪಿ ಭರ್ಜರಿ ತಯಾರಿ - ನಾಳೆ ರಂದು ಗಣಿನಾಡು ಬಳ್ಳಾರಿ ಜಿಲ್ಲೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

Amit Shah
ಅಮಿತ್‌ ಶಾ
author img

By

Published : Feb 22, 2023, 6:46 AM IST

ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ಕಾವು ಹೆಚ್ಚಾಗುತ್ತಿದ್ದು, ಬಿಜೆಪಿ ಹೈಕಮಾಂಡ್ ನಾಯಕರ ರಾಜ್ಯ ಪ್ರವಾಸ ಮುಂದುವರೆದಿದೆ. ಗುರುವಾರ ಗಣಿ ಜಿಲ್ಲೆಯ ಬಿಜೆಪಿ ನಾಯಕರಿಗೆ ಎಲೆಕ್ಷನ್ ಬೂಸ್ಟರ್ ಡೋಸ್ ನೀಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ರಾಜ್ಯ ಬಿಜೆಪಿ ನಾಯಕರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ.

ಪ್ರಯಾಣದ ವಿವರ: ಗುರುವಾರ ಬೆಳಗ್ಗೆ 10 ಗಂಟೆಗೆ ದೆಹಲಿ ನಿವಾಸದಿಂದ ರಸ್ತೆ ಮೂಲಕ ಏರ್​ಪೋರ್ಟ್ ಗೆ ಪ್ರಯಾಣಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ 10:15ಕ್ಕೆ ವಾಯುಪಡೆ ವಿಶೇಷ ವಿಮಾನದ ಮೂಲಕ ರಾಜ್ಯಕ್ಕೆ ಆಗಮಿಸಲಿದ್ದಾರೆ. 12:50ಕ್ಕೆ ಹುಬ್ಬಳ್ಳಿ ಏರ್​ಪೋರ್ಟ್​ ತಲುಪಲಿದ್ದಾರೆ. 12:55ಕ್ಕೆ ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ಪ್ರಯಾಣಿಸಲಿದ್ದು, ಮಧ್ಯಾಹ್ನ 1:25ಕ್ಕೆ ಸಂಡೂರು ಹೆಲಿಪ್ಯಾಡ್ ತಲುಪಲಿದ್ದಾರೆ. 1:30 ಕ್ಕೆ ಹೆಲಿಪ್ಯಾಡ್ ನಿಂದ ರಸ್ತೆ ಮೂಲಕ ಸಾರ್ವಜನಿಕ ಸಮಾವೇಶದ ಸ್ಥಳಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 1:30 ರಿಂದ 2:30 ರವರೆಗೆ ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದು, ಸುಮಾರು 2 ಲಕ್ಷ ಜನರು ಸಮಾವೇಶದಲ್ಲಿ ಸೇರುವ ಸಾಧ್ಯತೆ ಇದೆ ಬಿಜೆಪಿ ನಾಯಕರು ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ: ಮಧ್ಯಾಹ್ನ 2:30ಕ್ಕೆ ಸಂಡೂರಿನಿಂದ ತೋರಣಗಲ್​ ಖಾಸಗಿ ಹೋಟೆಲ್​​ಗೆ ತೆರಳಲಿರುವ ಅಮಿತ್ ಶಾ ಮಧ್ಯಾಹ್ನ 3 ಗಂಟೆಗೆ ಬಳ್ಳಾರಿ, ಕೊಪ್ಪಳ, ವಿಜಯನಗರ, ರಾಯಚೂರು ಜಿಲ್ಲೆಗಳ ನಾಯಕರ ಜೊತೆಗೆ ಸಭೆ ನಡೆಸಲಿದ್ದಾರೆ. ಸುಮಾರು 1 ಗಂಟೆ ಬಿಜೆಪಿ ನಾಯಕರ ಜತೆಗೆ ಅಮಿತ್ ಶಾ ಹೈವೋಲ್ಟೇಜ್ ಮೀಟಿಂಗ್ ನಡೆಸಲಿದ್ದು, ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗಿಯಾಗಲಿದ್ದಾರೆ. 4 ಜಿಲ್ಲೆಯ ಜಿಲ್ಲಾಧ್ಯಕ್ಷರು, ಪ್ರಮುಖ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಭೆ ಮುಗಿಸಿ ಸಂಡೂರು ಹೆಲಿಪ್ಯಾಡ್​​ಗೆ ರಸ್ತೆ ಮೂಲಕ ಪ್ರಯಾಣಿಸಲಿರುವ ಅಮಿತ್ ಶಾ, ಸಂಡೂರು ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಸಂಜೆ 4:40 ಕ್ಕೆ ಜಕ್ಕೂರು ಹೆಲಿಪ್ಯಾಡ್ ತಲುಪಲಿರುವ ಅವರು 4:45ಕ್ಕೆ ಜಕ್ಕೂರು ಹೆಲಿಪ್ಯಾಡ್ ನಿಂದ ತಾಜ್ ವೆಸ್ಟೆಂಡ್ ಹೋಟೆಲ್​​ಗೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. 5:10ಕ್ಕೆ ತಾಜ್ ವೆಸ್ಟೆಂಡ್ ಹೋಟೆಲ್ ತಲುಪಲಿರುವ ಅವರು, ಸಂಜೆ 6 ಗಂಟೆಗೆ ಬಿಜೆಪಿ ಪ್ರಮುಖರ ಜೊತೆಗೆ ಸಂವಾದ ನಡೆಸಲಿದ್ದಾರೆ.

ಮಿಷನ್ 150 ಟಾರ್ಗೆಟ್ ಕುರಿತ ಸಮಾಲೋಚನೆ: ಸಂಜೆ 7:10 ರಿಂದ 8:00 ಗಂಟೆಯವರೆಗೆ ವಿಶೇಷ ಭೋಜನಕೂಟದಲ್ಲಿ ಭಾಗಿಯಾಗಲಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜತೆಗೆ ರಾತ್ರಿ ಊಟ ಮಾಡಲಿರುವ ಅಮಿತ್ ಶಾ, ರಾತ್ರಿ 8 ಗಂಟೆಗೆ ರಾಜ್ಯ ಬಿಜೆಪಿ ನಾಯಕರ ಜೊತೆಗೆ ಹೈವೋಲ್ಟೇಜ್ ಮೀಟಿಂಗ್ ನಡೆಸಲಿದ್ದಾರೆ. ಚುನಾವಣೆಯ ತಯಾರಿ ಬಗ್ಗೆ ಚರ್ಚೆ ನಡೆಸಲಿದ್ದು, ಮಿಷನ್ 150 ಟಾರ್ಗೆಟ್ ಕುರಿತ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಮಂಡ್ಯದಲ್ಲೂ ಬದಲಾವಣೆ, ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋದು ಖಚಿತ: ಅಮಿತ್​ ಶಾ ವಿಶ್ವಾಸ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.