ETV Bharat / state

ನಾಳೆ ರಾಜ್ಯಕ್ಕೆ ಅಮಿತ್ ಶಾ...  ಹುಬ್ಬಳ್ಳಿಯಲ್ಲಿ ಸಂಪುಟ‌ ವಿಸ್ತರಣೆ ಕುರಿತ ಮಹತ್ವದ ಚರ್ಚೆ..! - ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ

ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಹುಬ್ಬಳ್ಳಿಯ ಡೆನಿಸನ್ ಹೋಟೆಲ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.

amit-shah-to-visit-state-tomorrow-significant-talks-on-volume-expansion-in-hubli
ನಾಳೆ ರಾಜ್ಯಕ್ಕೆ ಅಮಿತ್ ಶಾ ಭೇಟಿ
author img

By

Published : Jan 17, 2020, 11:41 AM IST

ಬೆಂಗಳೂರು: ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು, ಹುಬ್ಬಳ್ಳಿಯ ಡೆನಿಸನ್ ಹೋಟೆಲ್​ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲು ವರಿಷ್ಠರ ಭೇಟಿಗೆ ಸಾಕಷ್ಟು ಬಾರಿ ಪ್ರಯತ್ನ ನಡೆಸಿದ್ದರೂ ಅವಕಾಶ ಸಿಗದೆ ನಿರಾಸೆಗೊಳಗಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊನೆಗೂ ಅಮಿತ್ ಶಾ ಜೊತೆ ಮಾತುಕತೆ ನಡೆಸಲು ಸಮಯ ನಿಗದಿಯಾಗಿದೆ.

ನಾಳೆ ಮಧ್ಯಾಹ್ನ 12.15ಕ್ಕೆ ಯಲಹಂಕ ಏರ್​ಫೋರ್ಸ್​ಗೆ ಆಗಮಿಸಲಿರುವ ಅಮಿತ್ ಶಾ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ವಿವೇಕಾದೀಪಿನಿ ಮಹಾಸಮರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.25 ಕ್ಕೆ ಯಲಹಂಕ ಏರ್​ಫೋರ್ಸ್​ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 4.30ಕ್ಕೆ ಹುಬ್ಬಳ್ಳಿಗೆ ತಲುಪಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನೆಹರು ಸ್ಟೇಡಿಯಂ ಗೆ ಪ್ರಯಾಣಿಸಲಿದ್ದು, ಸಂಜೆ 4.55 ರಿಂದ 5.25 ರವರೆಗೆ ನೆಹರೂ ಮೈದಾನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹುಬ್ಬಳ್ಳಿಯ ಡೆನಿಸನ್ ಹೋಟೆಲ್​ನಲ್ಲಿ ಅಮಿತ್ ಶಾ ನಾಳೆ ವಾಸ್ತವ್ಯ ಹೂಡಲಿದ್ದು, ಜನವರಿ 19 ರ ಬೆಳಗ್ಗೆ 9.15 ದೆಹಲಿಗೆ ವಾಪಸಾಗಲಿದ್ದಾರೆ. ನಾಳೆ ಹುಬ್ಬಳ್ಳಿಯಲ್ಲಿ ತಂಗಲಿರುವ ಹಿನ್ನಲೆಯಲ್ಲಿ ನಾಳೆ ಸಂಜೆ ಕಾರ್ಯಕ್ರಮ ಮುಗಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಅಮಿತ್ ಶಾ ಮಹತ್ವದ ಮಾತುಕತೆ ನಡೆಸಲಿದ್ದಾರೆ.

ಡೆನಿಸನ್ ಹೋಟೆಲ್​ನಲ್ಲೇ ಸಚಿವ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲಿದ್ದು, ಬಹುತೇಕ ಸಂಪುಟ ವಿಸ್ತರಣೆ ದಿನಾಂಕವನ್ನೂ ನಿಗದಿಪಡಿಸಲಿದ್ದಾರೆ. ಜನವರಿ 20 ರಂದು ಸಿಎಂ ದಾವೂಸ್ ಪ್ರವಾಸಕ್ಕೆ ತೆರಳುತ್ತಿದ್ದು, ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಕುರಿತು ಸಿಎಂ ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.

Intro:

ಬೆಂಗಳೂರು: ನಾಳೆ ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸುತ್ತಿದ್ದು ಹುಬ್ಬಳ್ಳಿಯ ಡೆನಿಸನ್ ಹೋಟಲ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸಲಿದ್ದಾರೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತುಕತೆ ನಡೆಸಲು ವರಿಷ್ಠರ ಭೇಟಿಗೆ ಸಾಕಷ್ಟು ಬಾರಿ ಪ್ರಯತ್ನ ನಡೆಸಿದ್ದರೂ ಅವಕಾಶ ಸಿಗದೆ ನಿರಾಸೆಗೊಳಗಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಕೊನೆಗೂ ಅಮಿತ್ ಶಾ ಜೊತೆ ಮಾತುಕತೆ ನಡೆಸಲು ಸಮಯ ನಿಗದಿಯಾಗಿದೆ.

ನಾಳೆ ಮಧ್ಯಾಹ್ನ 12.15 ಕ್ಕೆ ಯಲಹಂಕ ಏರ್ ಪೋರ್ಸ್ ಗೆ ಅಗಮಿಸಲಿರುವ ಅಮಿತ್ ಶಾ ಮಧ್ಯಾಹ್ನ 1 ಗಂಟೆಗೆ ಅರಮನೆ ಮೈದಾನದಲ್ಲಿ ವೇದಾಂತ ಭಾರತಿ ವಿವೇಕಾದೀಪಿನಿ ಮಹಾಸಮರ್ಪಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3.25 ಕ್ಕೆ ಯಲಹಂಕ ಏರ್ ಪೊರ್ಸ್ ಮೂಲಕ ಹುಬ್ಬಳ್ಳಿಗೆ ಪ್ರಯಾಣ ಬೆಳೆಸಲಿದ್ದು ಸಂಜೆ 4.30 ಕ್ಕೆ ಹುಬ್ಬಳ್ಳಿಗೆ ತಲುಪಲಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ನೆಹರು ಸ್ಟೇಡಿಯಂ ಗೆ ಪ್ರಯಾಣಿಸಲಿದ್ದು ಸಂಜೆ 4.55 ರಿಂದ 5.25 ರವರೆಗೆ ನೆಹರು ಮೈದಾನದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಹುಬ್ಬಳ್ಳಿಯ ಡೆನಿಸನ್ ಹೋಟೆಲ್ ನಲ್ಲಿ ಅಮಿತ್ ಶಾ ನಾಳೆ ವಾಸ್ತವ್ಯ ಹೂಡಲಿದ್ದು ಜನವರಿ 19 ರ ಬೆಳಗ್ಗೆ 9.15 ದೆಹಲಿಗೆ ವಾಪಸಾಗಲಿದ್ದಾರೆ. ನಾಳೆ ಹುಬ್ಬಳ್ಳಿಯಲ್ಲಿ ತಂಗಲಿರುವ ಹಿನ್ನಲೆಯಲ್ಲಿ ನಾಳೆ ಸಂಜೆ ಕಾರ್ಯಕ್ರಮ ಮುಗಿದ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆ ಅಮಿತ್ ಶಾ ಮಹತ್ವದ ಮಾತುಕತೆ ನಡೆಸಲಿದ್ದಾರೆ.ಡೆನಿಸನ್ ಹೋಟೆಲ್ ನಲ್ಲೇ ಸಚಿವ ಸಂಪುಟ ವಿಸ್ತರಣೆ ಕುರಿತು ಸಮಾಲೋಚನೆ ನಡೆಸಲಿದ್ದು ಬಹುತೇಕ ಸಂಪುಟ ವಿಸ್ತರಣೆ ದಿನಾಂಕವನ್ನೂ ನಿಗದಿಪಡಿಸಲಿದ್ದಾರೆ.ಜನವರಿ 20 ರಂದು ಸಿಎಂ ದಾವೂಸ್ ಪ್ರವಾಸಕ್ಕೆ ತೆರಳುತ್ತಿದ್ದು ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆ ಕುರಿತು ಸಿಎಂ ಮಾತುಕತೆ ನಡೆಸಿ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.