ETV Bharat / state

ಜಲಪ್ರಳಯಕ್ಕೆ ನಲುಗಿದ ಕರುನಾಡು: ನಾಳೆ ಅಮಿತ್​​​​ ಶಾರಿಂದ ವೈಮಾನಿಕ ಸಮೀಕ್ಷೆ - Amit Shah visit to karnataka

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ನಾಳೆ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಅಮಿತ್​ ಶಾ
author img

By

Published : Aug 10, 2019, 8:20 PM IST

ಬೆಂಗಳೂರು: ನೆರೆಯಿಂದ ತತ್ತರಿಸಿರುವ ರಾಜ್ಯದ ಪರಿಸ್ಥಿತಿ ವೀಕ್ಷಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಸಮೀಕ್ಷೆ ನಡೆಸಲಿದ್ದಾರೆ.

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದೆ. ನಾಳೆ ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಅಮಿತ್ ಶಾ ಜೊತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಭೇಟಿ ಹಿನ್ನೆಲೆಯಲ್ಲಿ ನಾಳಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸವನ್ನು ಸಿಎಂ ರದ್ದುಗೊಳಿಸಿ ಬೆಳಗಾವಿಗೆ ತೆರಳುತ್ತಿದ್ದಾರೆ.

ಬೆಳಗ್ಗೆ 10.45ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12.05ಕ್ಕೆ ಸಿಎಂ ತೆರಳಲಿದ್ದಾರೆ. ವಿಮಾನ ನಿಲ್ದಾಣದಲ್ಲಿಯೇ ಹಿರಿಯ ಅಧಿಕಾರಿಗಳ ಜೊತೆ ಕೇಂದ್ರ ಗೃಹ ಸಚಿವರು ನಡೆಸುವ ಸಭೆಯಲ್ಲಿ ಪಾಲ್ಗೊಂಡು ನಂತರ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಸಂಜೆ 4.30ಕ್ಕೆ ಮತ್ತೊಮ್ಮೆ ಹಿರಿಯ ಅಧಿಕಾರಿಗಳ ಜೊತೆ ಶಾ ನಡೆಸುವ ಚರ್ಚೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ ನಂತರ ಸಂಜೆ 6.25ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ‌ ಹೊರಟು ಸಂಜೆ 7.25ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.

Intro:

ಬೆಂಗಳೂರು: ನೆರೆಯಿಂದ ತತ್ತರಿಸಿರುವ ರಾಜ್ಯದ ಪರಿಸ್ಥಿತಿ ವೀಕ್ಷಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗು ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ.17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಸಮೀಕ್ಷೆ ನಡೆಸಲಿದ್ದಾರೆ.

ಪ್ರವಾಹ ಪರಿಸ್ಥಿತಿ ವೀಕ್ಷಿಸಲು ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದ್ದು,
ಮಧ್ಯಾಹ್ನ ಬೆಳಗಾವಿಗೆ ಆಗಮಿಸಲಿರುವ ಅಮಿತ್ ಶಾ ಜೊತೆ ಸಿಎಂ ಬಿ.ಎಸ್. ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

ಅಮಿತ್ ಶಾ ರಾಜ್ಯ ಭೇಟಿ ಹಿನ್ನಲೆಯಲ್ಲಿ ನಾಳಿನ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪ್ರವಾಸವನ್ನು ಸಿಎಂ ರದ್ದುಗೊಳಿಸಿ ಬೆಳಗಾವಿಗೆ ತೆರಳುತ್ತಿದ್ದಾರೆ.

ಬೆಳಗ್ಗೆ 10.45 ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12.05 ಕ್ಕೆ ಸಿಎಂ ತೆರಳಲಿದ್ದಾರೆ.ವಿಮಾನ ನಿಲ್ದಾಣದಲ್ಲಿಯೇ ಹಿರಿಯ ಅಧಿಕಾರಿಗಳ ಜೊತೆ ಕೇಂದ್ರ ಗೃಹ ಸಚಿವರು ನಡೆಸುವ ಸಭೆಯಲ್ಲಿ ಪಾಲ್ಗೊಂಡು ನಂತರ ಹೆಲಿಕ್ಯಾಪ್ಟರ್ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಸಂಜೆ 4.30 ಕ್ಕೆ ಮತ್ತೊಮ್ಮೆ ಹಿರಿಯ ಅಧಿಕಾರಿಗಳ ಜೊತೆ ಶಾ ನಡೆಸುವ ಚರ್ಚೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಸಭೆ ನಡೆಸಿದ ನಂತರ ಸಂಜೆ 6.25 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣದಿಂದ‌ ಹೊರಟು ಸಂಜೆ 7.25 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ.
Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.