ಬೆಂಗಳೂರು: ಬೆಳಗಾವಿ ಪ್ರವಾಸಕ್ಕೆ ತೆರಳಲು ವಿಂಡ್ಸರ್ ಮ್ಯಾನರ್ ಹೋಟೆಲ್ನಿಂದ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಒಂದೇ ಕಾರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೆರಳಿದರು.
ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿರುವ ಅಮಿತ್ ಶಾ ನಗರದ ವಿಂಡ್ಸರ್ ಮ್ಯಾನರ್ ಹೋಟೆಲ್ನಲ್ಲಿ ತಂಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗು ಆರೋಗ್ಯ ಸಚಿವ ಡಾ. ಸುಧಾಕರ್ ಹೋಟೆಲ್ಗೆ ಭೇಟಿ ನೀಡಿದ್ದರು. ಅಮಿತ್ ಶಾಗೆ ಅಭಿನಂದನೆ ಸಲ್ಲಿಸಿ ಕೆಲಕಾಲ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು. ಕೊರೊನಾ ನಿರ್ವಹಣೆ ಕುರಿತು ಅಮಿತ್ ಶಾ ಅವರು ಸಿಎಂ ಯಡಿಯೂರಪ್ಪ ಮತ್ತು ಸುಧಾಕರ್ ಕಾರ್ಯವನ್ನು ಮತ್ತೊಮ್ಮೆ ಶ್ಲಾಘಿಸಿದ್ದಾರೆ ಎನ್ನಲಾಗ್ತಿದೆ.
ಈ ಸುದ್ದಿಯನ್ನೂ ಓದಿ: ಅಮಿತ್ ಶಾ ಭ್ರಷ್ಟ ರಾಜಕಾರಣಿ: ಗೃಹ ಸಚಿವರ ವಿರುದ್ಧ ರೈತ ಮಹಿಳೆ ಗಂಭೀರ ಆರೋಪ
ನಂತರ ಅಮಿತ್ ಶಾ ಜೊತೆಯಲ್ಲೇ ಒಂದೇ ಕಾರಿನಲ್ಲಿ ಸಿಎಂ ಯಡಿಯೂರಪ್ಪ ಹಾಗು ಪ್ರಹ್ಲಾದ್ ಜೋಶಿ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ವಾಯುಪಡೆ ವಿಮಾನದ ಮೂಲಕ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ.