ETV Bharat / state

ಚುನಾವಣಾ ಅಕ್ರಮ: 200 ಕೋಟಿ ಗಡಿ ದಾಟಿದ ಅಕ್ರಮ ನಗದು, ಮದ್ಯ, ಉಡುಗೊರೆ ಜಪ್ತಿ ಮೊತ್ತ - karnataka assembly election 2023

ಚುನಾವಣಾ ಆಯೋಗ ನೀತಿ ಸಂಹಿತೆ ಉಲ್ಲಂಘನೆ ಜಾರಿ ಆದಗಿಂದಲು ಈ ವರೆಗೆ ಸೂಕ್ತ ದಾಖಲೆ ಇಲ್ಲದ ನಗದು, ಮದ್ಯ, ಸೇರಿ ಈ ವರೆಗೂ 200 ಕೋಟಿಗೂ ಅಧಿಕ ಬೆಲೆಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸರು ವಶಕ್ಕೆ ಪಡೆದಿರುವ ವಸ್ತುಗಳು
ಪೊಲೀಸರು ವಶಕ್ಕೆ ಪಡೆದಿರುವ ವಸ್ತುಗಳು
author img

By

Published : Apr 20, 2023, 7:22 AM IST

ಬೆಂಗಳೂರು: ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ನಂತರ ಈವರೆಗೆ ವಶಪಡಿಸಿಕೊಂಡಿರುವ ನಗದು, ಮದ್ಯ, ವಸ್ತುಗಳ ಮೊತ್ತ 200 ಕೋಟಿ ರೂ. ದಾಟಿದೆ. ಈ ಬಾರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ಚುನಾವಣಾ ಆಯೋಗ ರಾಜ್ಯಾದ್ಯಂತ ಹದ್ದಿನ ಕಣ್ಣಿಟ್ಟಿದೆ. ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಚುನಾವಣಾ ಆಯೋಗ 204.09 ಕೋಟಿ ಮೌಲ್ಯದ ಅಕ್ರಮ ನಗದು, ಮದ್ಯ, ವಸ್ತುಗಳನ್ನು ಜಪ್ತಿ ಮಾಡಿದೆ.

ವಿಚಕ್ಷಣಾ ದಳ, ಸ್ಥಿರ ಕಣ್ಗಾವಲು ತಂಡ, ಐಟಿ, ಪೊಲೀಸ್ ಅಧಿಕಾರಿಗಳು ಈವರೆಗೆ ಒಟ್ಟು 76.70 ಕೋಟಿ ನಗದು ವಶಕ್ಕೆ ಪಡೆದಿದ್ದಾರೆ. ಒಟ್ಟು 19.59 ಮೌಲ್ಯದ ಉಚಿತ ಕೊಡುಗೆಗಳನ್ನು ವಶಕ್ಕೆ ಪಡೆಯಲಾಗಿದೆ. ಈವರೆಗೆ ಓಟ್ಟು 42.82 ಕೋಟಿ ರೂ. ಮೌಲ್ಯದ 10,72,767 ಲೀಟರ್ ಮದ್ಯವನ್ನು ಜಪ್ತಿ ಮಾಡಲಾಗಿದೆ. 15.25 ಕೋಟಿ ಮೌಲ್ಯದ 915 ಕೆ.ಜಿ. ಡ್ರಗ್ಸ್​​ನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು 45.81 ಕೋಟಿ ಮೌಲ್ಯದ 95.77 ಕೆ.ಜಿ ಬಂಗಾರವನ್ನು ವಶಕ್ಕೆ ಪಡೆಯಲಾಗಿದೆ. 3.89 ಕೋಟಿ ರೂ. ಮೌಲ್ಯದ 561 ಕೆ.ಜಿ. ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ನಗದು, ಮದ್ಯ, ಮಾದಕ ದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆ ವಸ್ತುಗಳನ್ನು ವಶಪಡಿಸಿಕೊಂಡಿರುವ ವಿಚಕ್ಷಣ ದಳ, ಸ್ಥಿರ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 1,629 ಪ್ರಥಮ ತನಿಖಾ ವರದಿ (FIR) ದಾಖಲಿಸಿದ್ದಾರೆ.

ಚುನಾವಣೆ ಘೋಷಣೆಯಾದ ದಿನಾಂಕದಿಂದ ಇಲ್ಲಿಯವರೆಗೆ ಒಟ್ಟಾರೆ 69,281 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 19 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 4,361 ಪ್ರಕರಣಗಳನ್ನು ದಾಖಲಸಲಾಗಿದೆ, ಅವುಗಳಲ್ಲಿ 6,660 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. ಚುನಾವಣೆ ಘೋಷಣೆಯಾದ ದಿನದಿಂದ ಇಲ್ಲಿಯವರೆಗೆ 11,276 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ.

ಅಬಕಾರಿ ಇಲಾಖೆಯು 2,082 ಗಂಭೀರ ಪ್ರಕರಣಗಳನ್ನು ಹಾಗೂ 1,601 ಮದ್ಯದ ಪರವಾನಿಗೆ ಉಲ್ಲಂಘಿಸಿದ ಪ್ರಕರಣಗಳು, 73 ಎನ್‌ಡಿಪಿಎಸ್ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965ರ ಪರಿಚ್ಛೇದ 15 (ಎ) ಅನ್ವಯ ಒಟ್ಟು 11,389 ಪ್ರಕರಣಗಳನ್ನು ದಾಖಲಿಸಿದೆ ಮತ್ತು 1,412 ವಿವಿಧ ಮಾದರಿಯ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಕ್ಷಣ ದಳ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭೆ ಕ್ಷೇತ್ರದಲ್ಲಿ 60.50 ರೂ. ನಗದು ಜಪ್ತಿ ಮಾಡಿದೆ. ಸ್ಥಿರ ಕಣ್ಗಾವಲು ತಂಡ ಧಾರವಾಡ ವಿಧಾನಸಭೆ ಕ್ಷೇತ್ರದಲ್ಲಿ 50,42,736 ರೂ. ಮೌಲ್ಯದ 7.793 ಕೆ.ಜಿ ಬಂಗಾರವನ್ನು ವಶಪಡಿಸಿಕೊಂಡಿದೆ. ಸ್ಥಿರ ಕಣ್ಗಾವಲು ತಂಡ ಹಾವೇರಿ ಕ್ಷೇತ್ರದಲ್ಲಿ 6,49,17,519 ಮೌಲ್ಯದ 11.42 ಕೆ.ಜಿ ಬಂಗಾರವನ್ನು ವಶಪಡಿಸಿಕೊಂಡಿದೆ. ಸ್ಥಿರ ಕಣ್ಗಾವಲು ತಂಡ ಧಾರವಾಡ ಹಾವೇರಿ ಕ್ಷೇತ್ರದಲ್ಲಿ 44,63,973 ರೂ. ಮೌಲ್ಯದ 74.896 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ಇದನ್ನೂ ಓದಿ: ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಟಿಫಿನ್ ಬಾಕ್ಸ್, ಹೊಲಿಗೆ ಯಂತ್ರಗಳ ಜಪ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.