ಬೆಂಗಳೂರು: ಡಿ.ಜೆ. ಹಳ್ಳಿಯಲ್ಲಿ ನಡೆದ ಗಲಭೆಗೆ ಪ್ರಚೋದನೆ ನೀಡಿ ಹಾಗೂ ಬಲವಂತವಾಗಿ ಅಂಗಡಿ-ಮುಂಗಟ್ಟುಗಳನ್ನ ಮುಚ್ಚಿಸಿದ ಆರೋಪದಡಿ ಓರ್ವ ವ್ಯಕ್ತಿಯನ್ನು ಡಿ.ಜೆ. ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಮಕ್ಬುಲ್ ಎಂಬಾತ ಬಂಧಿತ ಆರೋಪಿ. ಈ ಗಲಭೆಯಲ್ಲಿ ಬಂಧಿತರಾಗಿರುವ ಪ್ರಮುಖ ಆರೋಪಿಗಳೊಡನೆ ಗುರುತಿಸಿಕೊಂಡಿದ್ದ ಮಕ್ಬುಲ್, ಗಲಭೆ ನಡೆದ ರಾತ್ರಿ ಡಿ.ಜೆ. ಹಳ್ಳಿ ಹಾಗೂ ಕಾವಲ್ ಭೈರಸಂದ್ರ ಕಡೆಗೆ ಬಂದಿದ್ದ ಎನ್ನಲಾಗ್ತಿದೆ. ಗಲಭೆ ನಡೆದ ಸ್ಥಳಗಳಲ್ಲಿ ಸೇರಿದ್ದ ಜನರನ್ನು ಪ್ರಚೋದಿಸುವ ಕೆಲಸ ಮಾಡಿದ್ದು, ಠಾಣೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೆರೆದಿದ್ದ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಮುಚ್ಚಿಸುವ ಕೆಲಸ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಒತ್ತಾಯ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಿ, ಬಳಿಕ ಕಿಡಿಗೇಡಿಗಳ ಜೊತೆ ಸೇರಿ ಮಕ್ಬುಲ್ ದೊಂಬಿ ಎಬ್ಬಿಸಿ ತಲೆಮರೆಸಿಕೊಂಡಿದ್ದ. ಇದೀಗ ಈತನನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.