ETV Bharat / state

ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆ ತಯಾರಿ: ತುಷಾರ್ ಗಿರಿನಾಥ್ - etv bharat kannada

ಅನಧಿಕೃತ ಕಟ್ಟಡಗಳ ತೆರವು ಸಂಬಂಧ ಕ್ರಿಯಾ ಯೋಜನೆ ಸಿದ್ಧಪಡಿಸಿದ ನಂತರ ವರದಿಯನ್ನು ಕೋರ್ಟ್​ಗೆ ಸಲ್ಲಿಕೆ ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.

an-action-plan-is-being-prepared-for-eviction-of-unauthorized-buildings-says-bbmp-chief-commissioner
ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ: ತುಷಾರ್ ಗಿರಿನಾಥ್
author img

By ETV Bharat Karnataka Team

Published : Aug 22, 2023, 5:05 PM IST

ಬೆಂಗಳೂರು: ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಒತ್ತುವರಿ ಮಾಡಿಕೊಂಡಿರುವ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋರ್ಟ್ ಸೂಚನೆ ಅನ್ವಯ ಅನಧಿಕೃತ ಕಟ್ಟಡ ತೆರವಿಗೆ ಕ್ರಮ ಕೈಗೊಳ್ಳಲಾಗುವುದು. ನಗರದಲ್ಲಿ ಇರುವ ಅನಧಿಕೃತ ಕಟ್ಟಡಗಳ ತೆರವಿಗೆ ಕ್ರಿಯಾ ಯೋಜನೆ ಸಿದ್ಧಪಡಿಸಲಾಗುವುದು. ಇನ್ನೂ, ಕ್ರಿಯಾ ಯೋಜನೆ ಸಿದ್ಧಪಡಿಸಿದ ನಂತರ ವರದಿಯನ್ನು ಕೋರ್ಟ್​ಗೆ ಸಲ್ಲಿಕೆ ಮಾಡಲಾಗುವುದು ಎಂದರು.

ಅನಧಿಕೃತ ಬ್ಯಾನರ್ ಕುರಿತು ಪ್ರತಿಕ್ರಿಯಿಸಿ, ಎಲ್ಲಾ ವಲಯದ ಆಯುಕ್ತರಿಗೆ ಅನಧಿಕೃತ ಫ್ಲೆಕ್ಸ್ ವಿಚಾರವಾಗಿ ದಂಡ ಹಾಕಿ ಕ್ರಮ ಕೈಗೊಳ್ಳಲು ಸೂಚನೆ ಕೊಟ್ಟಿದ್ದೆ. ಆ ಪ್ರಕಾರ ಎಲ್ಲೆಡೆ ಅನಧಿಕೃತವಾಗಿ ಅಳವಡಿಕೆಯಾಗಿರುವ ಫ್ಲೆಕ್ಸ್ ತೆರವು ಕಾರ್ಯಾಚರಣೆ ಆರಂಭಿಸಲಾಗಿದೆ. ಅದರಲ್ಲೂ, ಪೂರ್ವ ವಲಯದ ಆಯುಕ್ತರು ಕೆಪಿಸಿಸಿ ಕಚೇರಿಯಲ್ಲಿದ್ದ ಫ್ಲೆಕ್ಸ್ ತೆರವು ಮಾಡಿಸಿದ್ದಾರೆ. ಈ ಮೊದಲು ನಿಗದಿ ಮಾಡಿರುವಂತೆ ದಂಡವನ್ನೂ ವಸೂಲಿ ಮಾಡಲಾಗಿದೆ ಎಂದು ಹೇಳಿದರು.

ಯಶವಂತಪುರ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಮಾಡಿರುವ ವಿಚಾರವಾಗಿ ಮಾತನಾಡಿ, ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಲು ಅನುದಾನ ಕೊಡಲಾಗಿದೆ. ಹತ್ತು ಹಳ್ಳಿಗಳಲ್ಲಿ ಕುಡಿಯುವ ನೀರಿನ ವ್ಯತ್ಯಯ ಆಗಿದೆ. ಹೀಗಾಗಿ ಪಾಲಿಕೆಯ ಹೊರ ವಲಯಗಳಲ್ಲಿ ಅನುದಾನ ಮಂಜೂರು ಮಾಡಲಾಗಿದೆ. ಅದರಂತೆ ಯಶವಂತಪುರ ಕ್ಷೇತ್ರಕ್ಕೂ ಅನುದಾನ ಕೊಡಲಾಗಿದೆ. ಹೊರ ವಲಯಗಳಿಗೆ ಸುಮಾರು 10 ಕೋಟಿವರೆಗೆ ಅನುದಾನ ಕೊಡಲಾಗಿದೆ. ವಲಯ ಆಯುಕ್ತರ ವಿವೇಚನೆಗೆ ತಕ್ಕಂತೆ ಹಣ ಖರ್ಚು ಮಾಡಲು ಹೇಳಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.

ಇದನ್ನೂ ಓದಿ: ಮೂಲ ಸೌಕರ್ಯಗಳಿಲ್ಲದೆ ಬೆಳಗಾವಿಯ ಕೆಹೆಚ್​ಬಿ ಕಾಲೋನಿ ನಿವಾಸಿಗಳ ಗೋಳು.. ಪಾಲಿಕೆ ಆಯುಕ್ತರಿಂದ ಶೀಘ್ರ ಕ್ರಮದ ಭರವಸೆ

ಕ್ರಿಯಾ ಯೋಜನೆ ಸಲ್ಲಿಸಲು ಹೈಕೋರ್ಟ್​ ಸೂಚನೆ: ಈ ಸಂಬಂಧ ಹೈಕೋರ್ಟ್ ಇತ್ತೀಚಿಗೆ,​ ಬಿಬಿಎಂಪಿ ವ್ಯಾಪ್ತಿಯಲ್ಲಿನ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಹೆಸರಿಗೆ ಮಾತ್ರ ಮಾಡುವುದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಮುಂದಿನ ಮೂರು ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಅನಧಿಕೃತ ಕಟ್ಟಡಗಳ ತೆರವಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆ ಮುಂದೂಡಿತ್ತು.

ಸರ್ಕಾರ ಸೇರಿದಂತೆ ಎಲ್ಲ ಸಂಬಂಧಿಸಿದ ಸಂಸ್ಥೆಗಳು ಸಭೆ ನಡೆಸಿ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸಬೇಕು. ಜತೆಗೆ ಹಿಂದಿನ ಆದೇಶಗಳ ಅನುಪಾಲನಾ ವರದಿಯನ್ನೂ ಸಹ ಸಲ್ಲಿಸಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿತ್ತು. ಅಲ್ಲದೇ, ಹೈಕೋರ್ಟ್‌ನ ಹಿಂದಿನ ಆದೇಶಗಳ ಅನುಷ್ಠಾನದ ವಿಚಾರದಲ್ಲಿ ಏನೂ ಪ್ರಗತಿ ಆಗದಿರುವುದನ್ನು ಹಾಗೂ ಬಿಬಿಎಂಪಿ ಸುಮ್ಮನೆ ಕಾಟಾಚಾರಕ್ಕೆ ಅನಧಿಕೃತ ಕಟ್ಟಡಗಳ ತೆರವು ಕೈಗೊಂಡಿರುವ ಕುರಿತು ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಸಹಕರಿಸಲು ಅಮೈಕಾಸ್ ಕ್ಯೂರಿಯಾಗಿ ನೇಮಕಗೊಂಡಿರುವ ಹಿರಿಯ ನ್ಯಾಯವಾದಿ ಪ್ರಮೋದ್ ಕಟಾವಿ ಅವರು ವರದಿಯನ್ನು ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.