ETV Bharat / state

ಯುಗಾದಿಗೂ ಮುನ್ನಾ ದಿನ ಕೆಎಸ್​ಆರ್​ಟಿಸಿ ನೌಕರರಿಂದ ಮುಷ್ಕರ: ಹಬ್ಬಕ್ಕೆ ತೆರಳುವವರಿಗೆ ತಟ್ಟಲಿದೆ ಮುಷ್ಕರದ ಬಿಸಿ - kannada top news

ಯುಗಾದಿ ಹಬ್ಬದ ಮುನ್ನಾ ದಿನವೇ ರಾಜ್ಯದಲ್ಲಿ ಸಾರಿಗೆ ಮುಷ್ಕರ, ಹಬ್ಬಕ್ಕೆ ಊರಿಗೆ ತೆರಳುವ ಸಿದ್ಧತೆ ಮಾಡಿಕೊಂಡಿರುವವರಿಗೆ ಸಾರಿಗೆ ಮುಷ್ಕರದ ಬಿಸಿ ತಟ್ಟಲಿದೆ.

an-indefinite-strike-by-ksrtc-employees-on-the-eve-of-ugadi
ಯುಗಾದಿಗೂ ಮುನ್ನಾ ದಿನ ಕೆಎಸ್​ಆರ್​ಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ: ಹಬ್ಬಕ್ಕೆ ತೆರಳುವವರಿಗೆ ತಟ್ಟಲಿದೆ ಮುಷ್ಕರದ ಬಿಸಿ..!
author img

By

Published : Mar 15, 2023, 8:01 PM IST

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ವಿಮರ್ಶೆ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್ 21ರ ಬೆಳಗ್ಗೆ 6 ಗಂಟೆಯಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಪ್ರಕಟಿಸಿದೆ. ಇದರಿಂದಾಗಿ ಯುಗಾದಿ ಹಬ್ಬಕ್ಕೆ ಊರಿಗೆ ತೆರಳುವ ಸಿದ್ಧತೆಯಲ್ಲಿರುವವರಿಗೆ ಸಾರಿಗೆ ಮುಷ್ಕರದ ಬಿಸಿ ತಟ್ಟಲಿದೆ.

2023ರ ಮಾರ್ಚ್ 8ರಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಜೊತೆ ವೇತನ ಪರಿಷ್ಕರಣೆ ಕುರಿತು ಚರ್ಚಿಸಲಾಗಿದೆ. ಆದರೆ ಮೂಲ ವೇತನದ ಶೇ.10 ರಷ್ಟು ಹೆಚ್ಚಳದ ಭರವಸೆಗೆ ನಮ್ಮ ಸಮ್ಮತಿ ಇಲ್ಲದ ಕಾರಣ ಮತ್ತೊಮ್ಮೆ ಸಭೆ ನಡೆಸುವ ಆಶ್ವಾಸನ ನೀಡಲಾಗಿತ್ತು. ಆದರೆ ಸರ್ಕಾರ ನಮ್ಮ ಬೇಡಿಕೆಗಳ ವಿಚಾರದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸುವ ಲಕ್ಷಣಗಳ ಕಾಣುತ್ತಿಲ್ಲ. ಅಲ್ಲದೆ ಚುನಾವಣೆ ಆರಂಭದ ಹೊಸ್ತಿಲಿನಲ್ಲಿದ್ದೇವೆ. ಚುನಾವಣಾ ಆಯುಕ್ತರು ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದಾರೆ. ಚುನಾವಣೆಯ ಪ್ರಕಟಣೆಯಾದರೆ ಸಾರಿಗೆ ನೌಕರರು ತಮ್ಮ ಬೇಡಿಕೆಗಳೆಲ್ಲಾ ಅನಿರ್ಧಿಷ್ಟವಾಧಿಗೆ ನೆನೆಗುದಿಗೆ ಬೀಳಬಹುದೆಂಬ ಭೀತಿಯಲ್ಲಿದ್ದಾರೆ. ಈಗಾಗಲೇ ಹಿಂದಿನ ವೇತನ ಹೆಚ್ಚಳದ ಅವಧಿಯ 39 ತಿಂಗಳುಗಳು ಕಳೆದಿದೆ. ಅಷ್ಟೆ ಅಲ್ಲದೆ ಬೆಲೆ ಏರಿಕೆಯಿಂದಲೂ ನೌಕರರು ತತ್ತರಿಸುತ್ತಿದ್ದಾರೆ. ಇವುಗಳ ಬಗ್ಗೆ ನೌಕರರು ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ.

ಸರ್ಕಾರದ ವಿಳಂಬ ಧೋರಣೆ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸುತ್ತಿದ್ದಾರೆ ಈ ಹಿನ್ನೆಲೆಯಲ್ಲಿ ಜಂಟಿ ಕ್ರಿಯಾ ಸಮಿತಿಯು ಸಭೆ ಸೇರಿ, ಸುಧೀರ್ಘವಾಗಿ ಪರಿಸ್ಥಿತಿಯ ಅವಲೋಕನ ಮಾಡಿ ಸರ್ಕಾರದ ಕಣ್ತೆರೆಸಲು ನಾಲ್ಕೂ ನಿಗಮಗಳ ಎಲ್ಲಾ ವರ್ಗಗಳ ನೌಕರರೂ ತಮ್ಮ ಬೇಡಿಕೆಗಳ ಈಡೇರಿಕೆಗಾಗಿ 2023ರ ಮಾರ್ಚ್ 21ರ ಮಂಗಳವಾರ ಬೆಳಿಗ್ಗೆ 6.00 ಗಂಟೆಯಿಂದ ಅನಿರ್ಧಿಷ್ಟಾವಧಿ ಮುಷ್ಕರದಲ್ಲಿ ತೊಡಗಬೇಕು ಎನ್ನುವ ಒಮ್ಮತದ ನಿರ್ಣಯಕ್ಕೆ ಬಂದಿದೆ. ಹಾಗಾಗಿ ಯುಗಾದಿ ಮುನ್ನಾ ದಿನವೇ ರಾಜ್ಯದಲ್ಲಿ ಸಾರಿಗೆ ಮುಷ್ಕರ ಬಹುತೇಕ ಖಚಿತವಾಗಿದೆ. ಹಬ್ಬಕ್ಕೆ ಊರಿಗೆ ತೆರಳುವ ಸಿದ್ಧತೆ ಮಾಡಿಕೊಂಡಿರುವವರಿಗೆ ಸಾರಿಗೆ ಮುಷ್ಕರದ ಬಿಸಿ ತಟ್ಟಲಿದೆ.

ಬೇಡಿಕೆಗಳು: ಮೂಲ ವೇತನಕ್ಕೆ ಬಿ.ಡಿ.ಎ. ವಿಲೀನಗೊಳಿಸಿ (Merge), ಪರಿಷ್ಕೃತ ಮೂಲ ವೇತನದ ಶೇ.25 ರಷ್ಟನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸತಕ್ಕದ್ದು. ಇನ್ಕ್ರಿಮೆಂಟ್ ದರ ಪರಿಷ್ಕೃತ ಮೂಲ ವೇತನದ ಶೇ.3 ಇರತಕ್ಕದ್ದು.

ಆಯ್ಕೆ ಶ್ರೇಣಿ ಹಾಗು ಉನ್ನತ ಶ್ರೇಣಿಗಳ ವೇತನ ಶ್ರೇಣಿಗೂ ಮೊದಲ ಬೇಡಿಕೆಯ ಅಂಶವನ್ನೇ ಪರಿಗಣಿಸಬೇಕು, ಆಯ್ಕೆ ಶ್ರೇಣಿ ಹಾಗು ಉನ್ನತ ಶ್ರೇಣಿಗಳ ವೇತನ ಶ್ರೇಣಿಗಳ ಇನ್ಕ್ರಿಮೆಂಟ್ ದರ ಪರಿಷ್ಕೃತ ಆಯ್ಕೆ ಶ್ರೇಣಿ ಹಾಗು ಉನ್ನ ಶ್ರೇಣಿಗಳ ಮೂಲ ವೇತನದ ಶೇ.3 ಇರತಕ್ಕದ್ದು, ಆಯ್ಕೆ ಶ್ರೇಣಿ ಬಡ್ತಿಯನ್ನು ಸೇವಾವಧಿಯ ಪ್ರತಿ 10 ವರ್ಷಕ್ಕೊಮ್ಮೆ ನೀಡಬೇಕು.

ಚಾಲಕರು, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿಗಳಿಗೂ ಮತ್ತು ಇತರ ಎಲ್ಲಾ ನೌಕರರಿಗೂ ಹಾಲಿ ಇರುವ ಬಾಟಾ, ಮಾಸಿನ, ದೈನಂದಿನ ಭತ್ಯೆಗಳನ್ನು (ಕ್ಯಾಷ್, ರಿಪಾಸ್ಟ್, ಬಟ್ಟೆ ತೊಳೆಯುವ, ರಾತ್ರಿಪಾಳಿ, ಪ್ರೋತ್ಸಾಹ ಭತ್ಯೆ ಮತ್ತಿತರ ಭತ್ಯೆಗಳು) ಐದು ಪಟ್ಟು ಹೆಚ್ಚಿಸಬೇಕು, ಹೊಲಿಗೆ ಭತ್ಯೆ, ಷೂ, ಜರ್ಸಿ, ರೈನ್ ಕೋಟ್ ಇತ್ಯಾದಿಗಳಿಗೆ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು, ಎಲ್ಲಾ ನಿರ್ವಾಹಕರಿಗೂ ಕ್ಯಾಷಿಯರ್​ಗಳಿಗೆ ಸಮಾನವಾದ ಕ್ಯಾಷ್ ಅಲೋವೆನ್ಸ್ ನೀಡಬೇಕು.

ಏಪ್ರಿಲ್ 2021 ಮುಷ್ಕರದ ಸಂದರ್ಭದಲ್ಲಿ ಸೇವೆಯಿಂದ ವಜಾಗೊಂಡ ನೌಕರರನ್ನು ಯಾವುದೇ ಷರತ್ತಿಲ್ಲದೆ ಮರುನೇಮಕ ಮಾಡಬೇಕು. ಲೋಕ ಅದಾಲತ್‌ನಲ್ಲಿ ಷರತ್ತುಗಳನ್ನು ಒಪ್ಪಿ ಸೇವೆಗೆ ಮರುನೇಮಕಗೊಂಡಿರುವ ನೌಕರರಿಗೆ ಹಿಂದಿನ ದಿನಾಂಕದಿಂದ ಅನ್ವಯವಾಗುವಂತೆ ಷರತ್ತುಗಳನ್ನು ರದ್ದುಪಡಿಸಬೇಕು.

ಒಟ್ಟಿನಲ್ಲಿ ಸಾರಿಗೆ ನೌಕರರು ಮತ್ತೆ ಬೀದಿಗಿಳಿಯಲು ಸಿದ್ದರಾಗಿದ್ದು, ಹಬ್ಬಕ್ಕೆ ಮುಷ್ಕರವಿಲ್ಲದ ಸಮಯದಲ್ಲಿಯೇ ಖಾಸಗಿ ಬಸ್​ಗಳು ದುಪ್ಪಟ್ಟಿಗಿಂತಲೂ ಹೆಚ್ಚಿನ ದರವನ್ನು ಪ್ರಯಾಣಿಕರಿಂದ ವಸೂಲಿ ಮಾಡುತ್ತವೆ ಇನ್ನು ಈ ಬಾರಿ ಸಾರಿಗೆ ನಿಗಮದ ಬಸ್​ಗಳೂ ಇಲ್ಲ ಎಂದರೆ ಬಸ್ ಪ್ರಯಾಣ ದರ ಮತ್ತಷ್ಟು ದುಬಾರಿಯಾಗುವುದು ಪಕ್ಕಾ ಆಗಿದೆ. ಹಾಗಾಗಿ ಹಬ್ಬಕ್ಕೆ ಊರಿಗೆ ಹೊರಡುವ ಸಿದ್ದತೆ ಮಾಡಿಕೊಳ್ಳುತ್ತಿರುವವರು ಮುಷ್ಕರದ ಪರಿಸ್ಥಿತಿ ನೋಡಿಕೊಂಡು ಪ್ರಯಾಣಕ್ಕೆ ಸಿದ್ಧರಾಗಬೇಕಿದೆ.

ಇದನ್ನೂ ಓದಿ: ರೈತರು, ವಿದ್ಯಾರ್ಥಿಗಳಿಗೆ ಗುಡ್​ ನ್ಯೂಸ್​.. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್​ ಮಾಡದಿರಲು ಎಲ್ಲ ಎಸ್ಕಾಂಗಳ ನಿರ್ಧಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.