ಬೆಂಗಳೂರು: ರಾಜಧಾನಿಯಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆ ಜಾರಿ ಸದ್ಯ ಅಭಾದಿತ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧದ ಪ್ರತಿಭಟನೆಗಳಿಗೆ ನೀಡಿದ್ದ ಅನುಮತಿ ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನ ಹೈಕೋರ್ಟ್ ನಡೆಸಿದೆ. ಜೊತೆಗೆ ಸೆಕ್ಷನ್ 144ರ ಅಡಿ ಹೊರಡಿಸಿರುವ ಆದೇಶದ ಬಗ್ಗೆ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ಜ.7ಕ್ಕೆ ಮುಂದೂಡಿದೆ.
ಸಿಆರ್ಪಿಸಿ ಕಲಂ 144ರ ಅಡಿ ಹೊರಡಿಸಿದ ಆದೇಶದ ಬಗ್ಗೆ ವಿಸ್ತೃತ ವಿಚಾರಣೆ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಅರ್ಜಿದಾರರು ಪ್ರತಿಭಟನೆಗೆ ಅನುಮತಿ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಆ ಅರ್ಜಿಗಳನ್ನು ಮೂರು ದಿನಗಳಲ್ಲಿ ವಿಲೇವಾರಿ ಮಾಡಬೇಕು. ಜೊತೆಗೆ ಮೂಲಭೂತ ಹಕ್ಕುಗಳಿಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು. ಅನುಮತಿ ನೀಡುವ ಮುನ್ನ ಕಾನೂನು ಪ್ರಕಾರ ಪ್ರಕ್ರಿಯೆಗಳನ್ನ ಅನುಸರಿಸಬೇಕು ಎಂದು ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
ನಾಳೆ ರಾತ್ರಿ ನಿಷೇಧಾಜ್ಞೆ ಮುಕ್ತಾಯವಾದ ನಂತರ ಅದನ್ನು ವಿಸ್ತರಣೆ ಮಾಡುವ ಶಂಕೆ ವ್ಯಕ್ತವಾಗಿದೆ. ನಿಷೇಧಾಜ್ಞೆ ಮುಂದುವರಿಸುವುದಾದರೆ ಅಭಿಪ್ರಾಯ ಸಂಗ್ರಹದ ನಂತರವೇ ಮಾಡಬೇಕು ಎಂದು ಕೋರ್ಟ್ ಆದೇಶಿದೆ.