ಬೆಂಗಳೂರು: ನಗರದ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ವೃದ್ಧನೊರ್ವ ಕುಸಿದು ಬಿದ್ದ ಕಾರಣ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮೆಜೆಸ್ಟಿಕ್ ನ 13 ನೇ ಪ್ಲಾಟ್ಫಾರಂ ಬಳಿ ವೃದ್ಧ ಏಕಾಏಕಿ ಕುಸಿದು ಬಿದ್ದಿದ್ದು, ಅವನ ಬಳಿಯಲ್ಲಿದ್ದ ಜನ ಗಾಬರಿಗೊಂಡು ಅಲ್ಲಿಂದ ಚದುರಿಹೋಗಿದ್ದಾರೆ. ವಿಚಾರ ತಿಳಿದ ತಕ್ಷಣ ಬಿಎಂಟಿಸಿ ಸಿಬ್ಬಂದಿ, ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳು ಸ್ಥಳಕ್ಕೆ ಧಾವಿಸಿ ವೃದ್ಧನಿಗೆ ಸ್ಯಾನಿಟೈಸ್ ಮಾಡಿ, ಪಿಪಿಇ ಕಿಟ್ ಹಾಕಿ ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸದ್ಯ ಅವರು ಜ್ವರದಿಂದ ಬಳಲುತ್ತಿದ್ದು, ನಿಶ್ಯಕ್ತಿಯಿಂದ ಕುಸಿದು ಬಿದ್ದಿರುವ ಮಾಹಿತಿ ಲಭ್ಯವಾಗಿದೆ.
ವೃದ್ಧ ಬಿದ್ದ ಜಾಗವನ್ನ ಬಿಎಂಟಿಸಿ ಸಿಬ್ಬಂದಿ ಹಾಗೂ ಬಿಬಿಎಂಪಿ ಸಿಬ್ಬಂದಿ ಸ್ಯಾನಿಟೈಸ್ ಮಾಡಿದ್ದಾರೆ. ಹಾಗೆ ವಿಚಾರ ತಿಳಿದು ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್ ಸ್ಥಳಕ್ಕೆ ದೌಡಾಯಿಸಿ ವೃದ್ಧನ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.