ETV Bharat / state

ಆನಂದ್ ಮಾಮನಿ, ಸಿಪಿಐ ಇಲ್ಲಾಳ ಆರೋಗ್ಯ ವಿಚಾರಿಸಿದ ಸಿಎಂ - cm bommayi news

ಗಾಂಜಾ ದಂಧೆ ಕೋರರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾದ ಸಿಪಿಐ ಇಲ್ಲಾಳ ಮತ್ತು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ದಾಖಲಾಗಿರುವ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ಅವರನ್ನು ಸಿಎಂ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

cm bommayi
ಆನಂದ್ ಮಾಮನಿ, ಸಿಪಿಐ ಇಲ್ಲಾಳ ಆರೋಗ್ಯ ವಿಚಾರಿಸಿದ ಸಿಎಂ
author img

By

Published : Oct 10, 2022, 7:49 PM IST

ಬೆಂಗಳೂರು: ಕಲಬುರಗಿ ಗ್ರಾಮೀಣ ಸಿಪಿಐ ಶ್ರೀಮಂತ ಇಲ್ಲಾಳ ಮಹಾರಾಷ್ಟ್ರದಲ್ಲಿ ಗಾಂಜಾ ದಂಧೆ ಕೋರರಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದರು. ಇನ್ನೂ ಅನಾರೋಗ್ಯದ ನಿಮಿತ್ತ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ ಅವರನ್ನು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರನ್ನು ಸೋಮವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕಾ ಸಚಿವ ಡಾ. ಮುರುಗೇಶ್ ಆರ್ ನಿರಾಣಿ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.

ಆನಂದ್ ಮಾಮನಿ, ಸಿಪಿಐ ಇಲ್ಲಾಳ ಆರೋಗ್ಯ ವಿಚಾರಿಸಿದ ಸಿಎಂ
ಆನಂದ್ ಮಾಮನಿ, ಸಿಪಿಐ ಇಲ್ಲಾಳ ಆರೋಗ್ಯ ವಿಚಾರಿಸಿದ ಸಿಎಂ

ಈ ವೇಳೆ, ಮಾತನಾಡಿದ ಸಚಿವ ನಿರಾಣಿ, ಶ್ರೀಮಂತ ಇಲ್ಲಾಳ ಹಾಗೂ ವಿಧಾನಸಭೆ ಉಪಸಭಾಧ್ಯಕ್ಷ ಆನಂದ್ ಮಾಮನಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದೇನೆ. ಇಬ್ಬರೂ ಕೂಡ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆದಷ್ಟು ಬೇಗ ಗುಣಮುಖರಾಗಿ ಕರ್ತವ್ಯಕ್ಕೆ ಪುನಃ ಹಾಜರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

ಇದನ್ನೂ ಓದಿ: ಬಿಜೆಪಿಯಿಂದ ರಾಜ್ಯ ಪ್ರವಾಸ: ಜನಸಂಕಲ್ಪ ಯಾತ್ರೆಗೆ ನಾಳೆ ರಾಯಚೂರಿನಲ್ಲಿ ಚಾಲನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.