ಬೆಂಗಳೂರು: ಸಚಿವ ಆನಂದ್ ಸಿಂಗ್ ಅವರು ಯಾರಿಗೂ ಬ್ಲ್ಯಾಕ್ಮೇಲ್ ಮಾಡಿಲ್ಲ ಎಂದು ಬಿಜೆಪಿ ಶಾಸಕ ರಾಜು ಗೌಡ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಇಂದು ಆನಂದ್ ಸಿಂಗ್ ಅವರ ಕಚೇರಿಗೆ ಆಗಮಿಸಿ ಸಚಿವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಇಷ್ಟು ದಿನ ಇಲಾಖೆ ಜವಾಬ್ದಾರಿ ತೆಗೆದುಕೊಂಡಿರಲಿಲ್ಲ. ಈಗ ಖಾತೆ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಸಚಿವರ ಅಸಮಾಧಾನ ಶಮನ ಆಗಿದೆ ಎಂದರು.
ಇದನ್ನೂ ಓದಿ:ಮುನಿಸು ಮರೆತು ಅಧಿಕಾರ ಸ್ವೀಕರಿಸಿದ ಸಚಿವ ಆನಂದ್ ಸಿಂಗ್
ಮುಖ್ಯಮಂತ್ರಿಗಳು ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆನಂದ್ ಸಿಂಗ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಿದರು.
ಸಿಎಂ ನಾಳೆ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ. ಆದರೆ, ಸಿಎಂ ಜೊತೆ ಆನಂದ್ ಸಿಂಗ್ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವರ ಅಧಿಕಾರ ಸ್ವೀಕಾರ ವಿಳಂಬದಿಂದ ಇಲಾಖೆಗೆ ನಷ್ಟ ಆಗಿದ್ದರೆ ಅದನ್ನು ಅವರು ಸರಿದೂಗಿಸುವ ಕೆಲಸ ಮಾಡುತ್ತಾರೆ ಎಂದು ರಾಜು ಗೌಡ ಹೇಳಿದರು.