ETV Bharat / state

ಅಕ್ರಮ ಗಣಿಗಾರಿಕೆ ಪ್ರಕರಣ ರದ್ದುಗೊಳಿಸಲು ಕೋರಿದ್ದ ಅರ್ಜಿ ಹಿಂಪಡೆದ ಆನಂದ್ ಸಿಂಗ್!

ಬಳ್ಳಾರಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶಿಸಿತ್ತು. ತನಿಖೆ ನಡೆಸಿದ್ದ ಸಿಬಿಐ ಆನಂದ್ ಸಿಂಗ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಮೂರು ಪ್ರತ್ಯೇಕ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ದೋಷಾರೋಪಪಟ್ಟಿಗಳನ್ನು ರದ್ದುಪಡಿಸುವಂತೆ ಕೋರಿ ಆನಂದ್ ಸಿಂಗ್ 2018ರಲ್ಲಿ ಹೈಕೋರ್ಟ್ಗೆ 3 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಅಕ್ರಮ ಗಣಿಗಾರಿಕೆ
ಆನಂದ್ ಸಿಂಗ್
author img

By

Published : Nov 24, 2020, 2:43 AM IST

ಬೆಂಗಳೂರು : ಬಳ್ಳಾರಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸಿದ ಆರೋಪ ಸಂಬಂಧ ಸಿಬಿಐ ಅಧಿಕಾರಿಗಳು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಹೈ ಕೋರ್ಟ್​ಗೆೆ ಸಲ್ಲಿಸಿದ್ದ ಮೂರು ಪ್ರತ್ಯೇಕ ಅರ್ಜಿಗಳನ್ನು ಸಚಿವ ಆನಂದ್ ಸಿಂಗ್ ಹಿಂಪಡೆದಿದ್ದಾರೆ.

ಅಕ್ರಮ ಗಣಿಗಾರಿಕೆ ನಡೆಸಿದ ಮತ್ತು ಲಕ್ಷಾಂತರ ಮೆಟ್ರಿಕ್ ಟನ್ ಅದಿರನ್ನು ಅನಧಿಕೃತವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆನಂದ್ ಸಿಂಗ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್ ಮೈಕಲ್ ಕನ್ಹ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಂಗ್ ಪರ ವಕೀಲರು ಅರ್ಜಿಗಳನ್ನು ಹಿಂಪಡೆಯುವುದಾಗಿ ತಿಳಿಸಿ ಅನುಮತಿ ನೀಡುವಂತೆ ಕೋರಿದರು. ಮನವಿ ಒಪ್ಪಿದ ಪೀಠ ಅರ್ಜಿಗಳನ್ನು ಹಿಂಪಡೆಯಲು ಅನುಮತಿ ನೀಡಿತು.

ಪ್ರಕರಣದ ಹಿನ್ನೆಲೆ :

ಬಳ್ಳಾರಿಯಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ನಿರ್ದೇಶಿಸಿತ್ತು. ತನಿಖೆ ನಡೆಸಿದ್ದ ಸಿಬಿಐ ಆನಂದ್ ಸಿಂಗ್ ವಿರುದ್ಧ ವಿಶೇಷ ನ್ಯಾಯಾಲಯಕ್ಕೆ ಮೂರು ಪ್ರತ್ಯೇಕ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ದೋಷಾರೋಪಪಟ್ಟಿಗಳನ್ನು ರದ್ದುಪಡಿಸುವಂತೆ ಕೋರಿ ಆನಂದ್ ಸಿಂಗ್ 2018ರಲ್ಲಿ ಹೈಕೋರ್ಟ್ಗೆ 3 ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು.

ಆನಂದ್ ಸಿಂಗ್ ಕ್ರಮವನ್ನೇ ಅನುಸರಿಸಿದ್ದ ಇತರೆ ಆರೋಪಿಗಳು ಸಿಬಿಐ ದಾಖಲಿಸಿರುವ ಎಫ್ಐಆರ್ ಹಾಗೂ ದೋಷಾರೋಪ ಪಟ್ಟಿಗಳನ್ನು ರದ್ದುಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳನ್ನು ತಿರಸ್ಕರಿಸಿದ ಹೈಕೋರ್ಟ್ ವಿಶೇಷ ನ್ಯಾಯಾಲಯವೇ ನಿರ್ಧರಿಸಲಿ ಎಂದು ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಅರ್ಜಿ ಹಿಂಪಡೆದಿದ್ದಾರೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.