ETV Bharat / state

ಸಚಿವೆ ಸ್ಥಳಕ್ಕೆ ಬರೋವರೆಗೆ ಕದಲೋದಿಲ್ಲ: ಅಂಗನವಾಡಿ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ

ಎಲ್​ಕೆಜಿ, ಯುಕೆಜಿಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು. ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಬೇಕೆಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಅಹೋರಾತ್ರಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಜಯಮಾಲಾ ಬರುವವರೆಗೂ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ.

author img

By

Published : Jul 5, 2019, 11:33 PM IST

ಅಹೋರಾತ್ರಿ ಧರಣಿ

ಬೆಂಗಳೂರು: ಒಂದೆಡೆ ನಗರದಲ್ಲಿ ಮಳೆಗಾಲ. ತಂಪು ವಾತಾವರಣದ ಜೊತೆಗೆ ತುಂತುರು ಮಳೆ. ಇದರ ನಡುವೆಯೇ ಅಂಗನವಾಡಿಯ ನೂರಾರು ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಕುಳಿತಿದ್ದಾರೆ.

ಧರಣಿ ಕುಳಿತಿರುವ ಅಂಗನವಾಡಿ ಕಾರ್ಯಕರ್ತೆಯರು

ಎಲ್ ಕೆಜಿ, ಯುಕೆಜಿ ಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು, ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಎರಡು ದಿನಗಳ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ. ಕೇವಲ ಟಾರ್ಪಲ್ ಹಾಕಿ ರಸ್ತೆಯಲ್ಲೇ ಕುಳಿತು ಪ್ರತಿಭಟಿಸುತ್ತಿರುವ ಕಾರ್ಯಕರ್ತೆಯರು ಮಳೆ ಬಂದರೂ ಪ್ರತಿಭಟನೆ ಕೈಬಿಡದಿರಲು ತೀರ್ಮಾನಿಸಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಜಯಮಾಲಾ ಸ್ಥಳಕ್ಕೆ ಬರುವವರೆಗೂ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕಾಗಮಿಸಿದ್ದ ಇಲಾಖೆಯ ನಿರ್ದೇಶಕಿ, ಡಾ ಅರುಂದತಿ ಚಂದ್ರಶೇಖರ್ ಅವರು ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆಯಲ್ಲಿದೆ. ಮುಖ್ಯಮಂತ್ರಿ, ಸಚಿವರು ಬಂದಕೂಡಲೇ ಸಭೆ ನಡೆಸಲಾಗುವುದು. ಒಂದು ತಿಂಗಳಲ್ಲಿ ಈ ಬಗ್ಗೆ ನಿರ್ಧಾರಕ್ಕೆ ಬರಲಾಗುವುದು ಎಂದರು.

ಇನ್ನು ಮಹಿಳಾ ಹೋರಾಟಗಾರರು ಇರುವುದರಿಂದ ಮಹಿಳಾ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲದೆ ಬ್ಯಾರಿಕೇಡ್ ಸೇರಿದಂತೆ ರಾತ್ರಿಯೂ ಪ್ರತಿಭಟನೆ ಮುಂದುವರಿಯುವುದರಿಂದ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಪ್ರತಿಭಟನಾಕಾರರಿಗೆ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಸಚಿವೆ ಜಯಮಾಲಾ ಅವರು ಬೆಂಗಳೂರಿಗೆ ಬರುವ ನಿರೀಕ್ಷೆಯಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ.

Intro:ಸಚಿವರು ಸ್ಥಳಕ್ಕೆ ಬರೋವರೆಗೆ ಕದಲೋದಿಲ್ಲ- ಅಹೋರಾತ್ರಿ ಪ್ರತಿಭಟನೆಗೆ ಸಜ್ಜಾದ ಅಂಗನವಾಡಿ ಕಾರ್ಯಕರ್ತೆಯರು

ಬೆಂಗಳೂರು- ಒಂದೆಡೆ ನಗರದಲ್ಲಿ ಮಳೆಗಾಲ ತಂಪು ವಾತಾವರಣದ ಜೊತೆಗೆ ತುಂತುರು ಮಳೆ. ಇದರ ನಡುವೆಯೇ ಅಂಗನವಾಡಿಯ ನೂರಾರು ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ಕುಳಿತಿದ್ದಾರೆ.
ಎಲ್ ಕೆಜಿ, ಯುಕೆಜಿ ಯನ್ನು ಅಂಗನವಾಡಿಗಳಲ್ಲೇ ಆರಂಭಿಸಬೇಕು, ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ನೀಡಬೇಕೆಂದು ಒತ್ತಾಯಿಸಿ ಎರಡು ದಿನಗಳ ಅಹೋರಾತ್ರಿ ಧರಣಿಗೆ ಮುಂದಾಗಿದ್ದಾರೆ.
ಕೇವಲ ಟಾರ್ಪಲ್ ಹಾಕಿ ರಸ್ತೆಯಲ್ಲೇ ಕುಳಿತು ಪ್ರತಿಭಟಿಸುತ್ತಿರುವ ಕಾರ್ಯಕರ್ತೆಯರು ಮಳೆ ಬಂದರೂ ಪ್ರತಿಭಟನೆ ಕೈಬಿಡದಿರಲು ತೀರ್ಮಾನಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಜಯಮಾಲಾ ಸ್ಥಳಕ್ಕೆ ಬರುವವರೆಗೂ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕೆ ಬಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕಿ, ಡಾ ಅರುಂದತಿ ಚಂದ್ರಶೇಖರ್ ಅವರು ಪ್ರತಿಭಟನಾಕಾರರಿಂದ ಮನವಿ ಪಡೆದರು. ಈ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆಯಲ್ಲಿದೆ.ಮುಖ್ಯಮಂತ್ರಿಗಳು, ಸಚಿವರು ಬಂದಕೂಡಲೆ ಸಭೆ ನಡೆಸಲಾಗುವುದು. ಒಂದು ತಿಂಗಳಲ್ಲಿ ಈ ಬಗ್ಗೆ ನಿರ್ಧಾರಕ್ಕೆ ಬರಲಾಗುವುದು ಎಂದರು.
ಇನ್ನು ಮಹಿಳಾ ಹೋರಾಟಗಾರರು ಇರುವುದರಿಂದ ಮಹಿಳಾ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಬೀಡುಬಿಟ್ಟಿದ್ದಾರೆ. ಅಲ್ಲದೆ ಬ್ಯಾರಿಕೇಡ್ ಸೇರಿದಂತೆ ರಾತ್ರಿಯೂ ಪ್ರತಿಭಟನೆ ಮುಂದುವರಿಯುವುದರಿಂದ ಹೆಚ್ಚಿನ
ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಪ್ರತಿಭಟನಾಕಾರರಿಗೆ ಶೌಚಾಲಯದ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಸಚಿವೆ ಜಯಮಾಲಾ ಅವರು ಬೆಂಗಳೂರಿಗೆ ಬರುವ ನಿರೀಕ್ಷೆಯಿದ್ದು, ಪ್ರತಿಭಟನಾ ಸ್ಥಳಕ್ಕೆ ಭೇಟಿನೀಡಲಿದ್ದಾರೆ ಎನ್ನಲಾಗಿದೆ.

ಸೌಮ್ಯಶ್ರೀ
Kn_Bng_02_Anganvadi_protest_7202707Body:..Conclusion:..

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.