ETV Bharat / state

ಮೇಲ್ಮನೆ ಒಂದು ಸ್ಥಾನಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಅನಿಲ್ ಕುಮಾರ್ ನಾಮಪತ್ರ ಸಲ್ಲಿಕೆ - ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ಉಪಚುನಾವಣೆ

ವಿಧಾನಪರಿಷತ್​ನ ಒಂದು ಸ್ಥಾನಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.

nomination
ನಾಮಪತ್ರ ಸಲ್ಲಿಸಿತ್ತಿರುವುದ
author img

By

Published : Feb 6, 2020, 4:33 PM IST

ಬೆಂಗಳೂರು: ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್​ ಮುಖಂಡ ಅನಿಲ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ.

ಮಾಜಿ ಸಚಿವ ಹೆಚ್.ಡಿ. ರೇವಣ್ಣ, ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಶಾಸಕ ಕೋನರೆಡ್ಡಿ ಜೊತೆಗೆ ಇಂದು ವಿಧಾನಸೌಧಕ್ಕೆ ಆಗಮಿಸಿದ ಅನಿಲ್ ಕುಮಾರ್ ಅವರು ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.

ಅನಿಲ್​ಕುಮಾರ್​ ನಾಮಪತ್ರ ಸಲ್ಲಿಸಿದರು

ಮೂಲತಃ ಜೆಡಿಎಸ್​ನಲ್ಲಿದ್ದ ಅನಿಲ್ ಕುಮಾರ್​, ನಂತರ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡರು. ಕೆಪಿಸಿಸಿಯ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸಿ ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್ ಕುಮಾರ್​ ನಾಮಪತ್ರ ಸಲ್ಲಿಸಿದ್ದಾರೆ.

ಅನಿಲ್ ಅವರಿಗೆ ಸೂಚಕರಾಗಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ದಿನೇಶ್ ಗುಂಡೂರಾವ್ ಸೇರಿದಂತೆ ಎರಡೂ ಪಕ್ಷದ ಶಾಸಕರು ಸಹಿ ಮಾಡಿದ್ದಾರೆ. ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ನಾಮಪತ್ರ ಸಲ್ಲಿಸುತ್ತಾರೆ ಎನ್ನಲಾಗಿತ್ತು. ಆದರೆ, ಕೊನೆಗಳಿಗೆಯಲ್ಲಿ ಪ್ರಕಾಶ್ ಬದಲು ಅನಿಲ್ ಕುಮಾರ್ ಗೆ ಅಭ್ಯರ್ಥಿ ಮಾಡಲು ಕೈ-ದಳ ನಾಯಕರು ತೀರ್ಮಾನ ಮಾಡಿದರು ಎಂದು ತಿಳಿದುಬಂದಿದೆ.

Intro:ಬೆಂಗಳೂರು : ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಾಂಗ್ರೆಸ್ ಮುಖಂಡ ಅನಿಲ್ ಕುಮಾರ್ ಅವರು ನಾಮಪತ್ರ ಸಲ್ಲಿಸಿದ್ದಾರೆ.Body:ಮಾಜಿ ಸಚಿವ ಹೆಚ್.ಡಿ. ರೇವಣ್ಣ, ರಾಜ್ಯಸಭಾ ಸದಸ್ಯ ಕುಪ್ಪೇಂದ್ರ ರೆಡ್ಡಿ, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಮಾಜಿ ಶಾಸಕ ಕೋನರೆಡ್ಡಿ ಜೊತೆಗೆ ಇಂದು ವಿಧಾನಸೌಧಕ್ಕೆ ಆಗಮಿಸಿದ ಅನಿಲ್ ಕುಮಾರ್, ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ನಾಮಪತ್ರ ಸಲ್ಲಿಸಿದರು.
ಮೂಲತಃ ಜೆಡಿಎಸ್ ನಲ್ಲಿದ್ದ ಅನಿಲ್ ಅವರು ನಂತರ ಕಾಂಗ್ರೆಸ್ ನಲ್ಲಿ ಗುರುತಿಸಿಕೊಂಡರು. ಸಮಾಜಸೇವಕರಾಗಿರುವ ಅವರು, ಕೆಪಿಸಿಸಿಯ ಮಾಧ್ಯಮ ಸಂಯೋಜಕರಾಗಿದ್ದರು.
ಇದೀಗ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಅನಿಲ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಅನಿಲ್ ಅವರಿಗೆ ಸೂಚಕರಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ, ದಿನೇಶ್ ಗುಂಡೂರಾವ್ ಸೇರಿದಂತೆ ಎರಡೂ ಪಕ್ಷದ ಶಾಸಕರು ಸಹಿ ಮಾಡಿದ್ದಾರೆ.
ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಪ್ರಕಾಶ್ ನಾಮಪತ್ರ ಸಲ್ಲಿಸುತ್ತಾರೆ ಎನ್ನಲಾಗಿತ್ತು. ಆದರೆ, ಕೊನೆ ಗಳಿಗೆಯಲ್ಲಿ ಪ್ರಕಾಶ್ ಬದಲು ಅನಿಲ್ ಕುಮಾರ್ ಗೆ ಅಭ್ಯರ್ಥಿ ಮಾಡಲು ಕೈ-ದಳ ನಾಯಕರು ತೀರ್ಮಾನ ಮಾಡಿದ್ದಾರೆ ಎನ್ನಲಾಗಿದೆ.
ನಾಮಪತ್ರ ಸಲ್ಲಿಸಲು ಇಂದೇ ಕೊನೆ ದಿನ. ಇಂದು ಮಧ್ಯಾಹ್ನ 3 ಗಂಟೆವರಗೆ ನಾಮಪತ್ರ ಸಲ್ಲಿಸಲು ಅವಕಾಶ ಇದೆ.
ವಿಪಕ್ಷಗಳಿಂದ ಯಾರೂ ನಾಮಪತ್ರ ಸಲ್ಲಿಸುವುದಿಲ್ಲವೆಂದೇ ಭಾವಿಸಲಾಗಿತ್ತು. ಇದರಿಂದ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ಆದಿ ಸುಗಮವಾಗುವುದೆಂದು ಹೇಳಲಾಗಿತ್ತು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.