ETV Bharat / state

ಪ್ರಾಣಿಗಳಿಗೆ ಆಹಾರ, ನೀರು ಕೊಡದೆ ಪೆಟ್​ ಶಾಪ್​ ಬಂದ್​ ಮಾಡಿದ್ದ ಮಾಲೀಕರು: ಅಧಿಕಾರಿಗಳ ದಾಳಿ - animals were kept in pet shops

ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಪೆಟ್ ಶಾಪ್​ಗಳು ಬಂದ್ ಆಗಿವೆ. ಹೀಗಾಗಿ ಕೆಲವು ಪೆಟ್ ಶಾಪ್​ಗಳ ಮಾಲೀಕರು ಶಾಪ್​ಗಳನ್ನು ಬಂದ್ ಮಾಡಿಕೊಂಡು ಹೋಗಿರುವ ಪರಿಣಾಮ ಅನೇಕ ಪ್ರಾಣಿ, ಪಕ್ಷಿಗಳು ಆಹಾರ, ನೀರು ಇಲ್ಲದೆ ಸಂಕಷ್ಟಕ್ಕೆ ಸಿಲುಕಿವೆ.

pet shop
pet shop
author img

By

Published : Apr 2, 2020, 8:00 AM IST

ಬೆಂಗಳೂರು: ಕೊರೊನಾ ಎಫೆಕ್ಟ್​ನಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ. ಇದರಿಂದ ಕೇವಲ ಜನ ಜೀವನದ ಮೇಲಷ್ಟೇ ಅಲ್ಲ ಪ್ರಾಣಿ, ಪಕ್ಷಿಗಳ ಮೇಲೆಯೂ ಎಫೆಕ್ಟ್ಆಗಿದೆ.

ಹೌದು ಕಳೆದ ಒಂದು ವಾರದಿಂದ ಲಾಕ್ ಡೌನ್ ಆಗಿರುವ ಹಿನ್ನಲೆಯಲ್ಲಿ ಪೆಟ್ ಶಾಪ್​ಗಳು ಬಂದ್ ಆಗಿವೆ. ಹೀಗಾಗಿ ಕೆಲವು ಪೆಟ್ ಶಾಪ್​ಗಳ ಮಾಲೀಕರು ಪೆಟ್ ಶಾಪ್​ಗಳನ್ನು ಬಂದ್ ಮಾಡಿಕೊಂಡು ಹೋಗಿರುವ ಪರಿಣಾಮ ಅನೇಕ ಪ್ರಾಣಿ, ಪಕ್ಷಿಗಳು ಆಹಾರ, ನೀರು ಇಲ್ಲದೆ ಸಂಕಷ್ಟಕ್ಕೆ ಸಿಲುಕಿವೆ.

animals saved from pet shop
ಪೆಟ್ ಶಾಪ್​ಗಳ ಮೇಲೆ ದಾಳಿ

ಈ‌ ನಿಟ್ಟಿನಲ್ಲಿ ಇಂದು ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿಯ ಅಧಿಕಾರಿಗಳು ನಗರದ ಕೆಲ ಪ್ರಾಣಿ ದಯಾ ಸಂಘಗಳ ಜೊತೆಗೂಡಿ ಹಲವು ಪೆಟ್ ಶಾಪ್​ಗಳ ಮೇಲೆ ದಾಳಿ ನಡೆಸಿವೆ.

animals saved from pet shop
ಅಂಗಡಿಗಳಲ್ಲೇ ಬಂಧಿಯಾಗಿದ್ದ ಪ್ರಾಣಿ ಪಕ್ಷಿಗಳ ರಕ್ಷಣೆ

ಈ ದಾಳಿ ವೇಳೆ ಪ್ರಾಣಿ, ಪಕ್ಷಿಗಳು ಆಹಾರ, ನೀರು ಇಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ವಿಷಯ ಕಂಡು ಅಧಿಕಾರಿಗಳು ದಂಗಾಗಿದ್ದಾರೆ. ಕರ್ನಾಟಕ ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ಸದಸ್ಯರಾದ ಶಿವಾನಂದ್ ಡಂಬಳ್, ಕಳೆದ ಮೂರು ದಿನಗಳಿಂದ ಈ ದಾಳಿಯನ್ನು ಮುಂದುವರೆಸಿದ್ದು, ಇಂದು ‌ಬೆಂಗಳೂರು ದಕ್ಷಿಣ ಭಾಗದ ಅನೇಕ ಪೆಟ್ ಶಾಪ್​ಗಳ ಸ್ಥಿತಿಗತಿಗಳನ್ನ ಪರಿಶೀಲಿಸಿದರು.

animals saved from pet shop
ಅಂಗಡಿಗಳಲ್ಲೇ ಬಂಧಿಯಾಗಿದ್ದ ಪ್ರಾಣಿ ಪಕ್ಷಿಗಳು

ಈ ವೇಳೆ ಸಂಕಷ್ಟದಲ್ಲಿರುವ ಪ್ರಾಣಿ, ಪಕ್ಷಿಗಳ ವಾಸ್ತವ ಸ್ಥಿತಿ ಅಧಿಕಾರಿಗಳ ಗಮನಕ್ಕೆ ಬಂದಿತು. ಹಲವು ಶಾಪ್​ಗಳು ಸಂಬಂಧಪಟ್ಟ ಇಲಾಖೆಗಳಿಂದ ಅಧಿಕೃತ ಪರವಾನಿಗೆ ಪಡೆಯದೆ ರಾಜಾ ರೋಷವಾಗಿ ಪ್ರಾಣಿ ಪಕ್ಷಿಗಳನ್ನ ಹಿಡಿದು ಹಾಕಿರುವುದು, ಹಾಗೂ ಮಾರಾಟ ಮಾಡುತ್ತಿರುವುದು ಈ ದಾಳಿಯ ವೇಳೆ ಬಹಿರಂಗವಾಗಿದೆ. ಈ ಎಲ್ಲಾ ಅಂಗಡಿ ಮಾಲೀಕರುಗಳ ಮೇಲೆ ಸೂಕ್ತ ಕ್ರಮ ಜರುಗಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

animals saved from pet shop
ಅಂಗಡಿಗಳಲ್ಲೇ ಬಂಧಿಯಾಗಿದ್ದ ಪ್ರಾಣಿ ಪಕ್ಷಿಗಳು

ಇನ್ನು ಈ ದಾಳಿ ವೇಳೆ ಅಲಸೂರನಲ್ಲಿನ ಪೆಟ್ ಶಾಪ್ ಒಂದರಲ್ಲಿ ಪ್ರಾಣಿ, ಪಕ್ಷಿಗಳು ತೀರಾ ದಯನೀಯ ಸ್ಥಿತಿಯಲ್ಲಿದ್ದದ್ದು ಕಂಡು ಬಂದಿತು. ಕಳೆದ ಮೂರ್ನಾಲ್ಕು ದಿನಗಳಿಂದ ಆಹಾರ ಇಲ್ಲದೇ ಒಳಗಡೆಯೇ ಪರದಾಡುತ್ತಿದ್ದ ಕರುಣಾಜನಕ ನೋಟ ಮನಕಲಕುವಂತಿತ್ತು. ಅದಾಗಲೇ ಅಲ್ಲಿ ಎರಡು ಮೊಲಗಳು ಪ್ರಾಣ ಬಿಟ್ಟಿದ್ದು, ದೇಹ ಕೊಳೆತು ದುರ್ನಾತ ಹರಡಿತ್ತು. ಮಾಲೀಕರು ಕಳೆದ ಕೆಲ ದಿನಗಳಿಂದ ಶಾಪ್ ತೆರೆದೇ ಇಲ್ಲ ಎಂಬುದು ಅಲ್ಲಿನ ಸ್ಥಿತಿಯಿಂದ ಸ್ಪಷ್ಟವಾಗಿ ಮನವರಿಕೆಯಾಗುತ್ತಿತ್ತು. ಈ ವೇಳೆ ಶಾಪ್​ನ ಮಾಲೀಕರಿಗೆ ವಾರ್ನ್ ಮಾಡಿದ ಶಿವಾನಂದ ಡಂಬಳ್ ಪ್ರಾಣಿ, ಪಕ್ಷಿಗಳನ್ನ ಅಲ್ಲಿಂದ ಬಿಡುಗಡೆಗೊಳಿಸಿ, ಅವುಗಳನ್ನು ಪುನರ್ವಸತಿ ಕೇಂದ್ರಗಳಿಗೆ ರವಾನಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.