ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೋವಿಡ್-19 ಸೋಂಕಿಗೆ ಒಳಗಾಗಿರುವುದರಿಂದ ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿಗೆ ಹೋಂ ಕ್ವಾರಂಟೈನ್ ಆಗುವಂತೆ ವೈದ್ಯರು ಸಲಹೆ ನೀಡಿದ್ದಾರೆ.
ವೈದ್ಯರಿಂದ ಮುಂದಿನ ಸೂಚನೆ ಬರುವವರೆಗೂ ಶಾಸಕಿ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ. ಕೊರೊನಾ ಅತೀ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಕೆಲ ದಿನಗಳ ಕಾಲ ಜೆಪಿನಗರದ ಗೃಹ ಕಚೇರಿ ಬಳಿಯೂ ಸಾರ್ವಜನಿಕರ ಪ್ರವೇಶ ಬೇಡವೆಂದು ವೈದ್ಯರು ಸಲಹೆ ನೀಡಿದ್ದಾರೆ.
ಈ ಹಿನ್ನೆಲೆ ಅನ್ಯತಾ ಭಾವಿಸದೆ ಕಾರ್ಯಕರ್ತರು, ಮುಖಂಡರುಗಳು ಸಹಕರಿಸಬೇಕೆಂದು ಮನವಿ ಮಾಡಲಾಗಿದೆ. ಪ್ರತಿಯೊಬ್ಬರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಅನಿತಾ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.