ETV Bharat / state

Anna Bhagya scheme: ಅನ್ನಭಾಗ್ಯ ಯೋಜನೆಗೆ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ- ಸಿಎಂ ಸಿದ್ದರಾಮಯ್ಯ

ಕೇಂದ್ರ ಸರ್ಕಾರಕ್ಕೆ ಸೇರಿದ ಮೂರು ಸಂಸ್ಥೆಗಳಿಂದ ಅಕ್ಕಿ ಪಡೆಯುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
author img

By

Published : Jun 19, 2023, 3:37 PM IST

Updated : Jun 19, 2023, 4:15 PM IST

ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಾಂಗ್ರೆಸ್​ ನಾಯಕರು ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಉಚಿತ ಎಂದು ಹೇಳಿದ್ದರು. ಇದೀಗ ಅಧಿಕಾರದ ಚುಕ್ಕಾಣಿ ಹಿಡಿದಿದ್ದು ಅಕ್ಕಿ ವಿತರಣೆಯಲ್ಲಿ ಬಹಳ ಗೊಂದಲಗಳು ಸೃಷ್ಟಿಯಾಗಿವೆ. ಇದರ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಟೆಂಡರ್ ಮೂಲಕ ಅಕ್ಕಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್​ಸಿಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದೆ. ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯುವುದಕ್ಕೆ ದರಪಟ್ಟಿ ಕರೆಯಲು ಕ್ರಮಕ್ಕೆ ಮುಂದಾಗಿದ್ದೇವೆ ಎಂದು ಸಿಎಂ ತಿಳಿಸಿದರು.

ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಭಾರತೀಯ ಆಹಾರ ಮಂಡಳಿ (ಎಫ್‌ಸಿಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು. ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು.

ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840 ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ. ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದು ತಿಳಿಸಿದರು.

ಪಂಜಾಬ್ ಸರ್ಕಾರದೊಂದಿಗೆ ಚರ್ಚೆ : ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ದವಿದೆ ಎಂಬ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯಿ, ಪಂಜಾಬ್‌ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, ಜುಲೈ 1ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್​ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ, ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತ ಚಾಲನೆಗೊಳಿಸಲಿದೆ.

ಕೇಂದ್ರ ಸರ್ಕಾರ ಬಡವರ ಅಕ್ಕಿ ಕೊಡುವುದರಲ್ಲಿ ರಾಜಕಾರಣ ಹಾಗೂ ದ್ವೇಷದ ರಾಜಕಾರಣ ಮಾಡುತ್ತಿದೆ. ಕೇಂದ್ರ ಸರ್ಕಾರವೇನೂ ಭತ್ತ ಬೆಳೆಯಲು ಜಮೀನು ಇಟ್ಟುಕೊಂಡಿಲ್ಲ. ಅವರೂ ರಾಜ್ಯಗಳಿಂದ ಅಕ್ಕಿಯನ್ನು ಪಡೆದಿದ್ದಾರೆ. ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ತೆರಿಗೆ ಬರುವುದು ರಾಜ್ಯಗಳಿಂದ. ಅವರು ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಎಸ್​ಟಿ ಸಮಿತಿ ವಿಚಾರ : ಜಿಎಸ್​ಟಿ ಸಮಿತಿಗೆ ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಬಹುದಿತ್ತು ಎಂಬುದಕ್ಕೆ ಪ್ರತಿಕ್ರಿಯಿಸಿ, ಕೃಷ್ಣಬೈರೇಗೌಡರನ್ನು ಕಳಿಸಲು ಅವಕಾಶವಿದೆ. ಅದಕ್ಕೆ ಅವರು ಅರ್ಹರೂ ಕೂಡ ಎಂದು ಸಿಎಂ ಹೇಳಿದರು.

ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಚೆಕ್​ ವಿತರಣೆ

ಪರಿಹಾರದ ಚೆಕ್ ವಿತರಣೆ : ಇದಕ್ಕೂ ಮೊದಲು ಸಿದ್ದರಾಮಯ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಪ್ರಕರಣಗಳಲ್ಲಿ ಮೃತಪಟ್ಟ ಮಸೂದ್‌, ಮಹಮ್ಮದ್‌ ಫಾಝಿಲ್‌, ಅಬ್ದುಲ್‌ ಜಲೀಲ್‌ ಹಾಗೂ ದೀಪಕ್‌ ರಾವ್‌ ಕುಟುಂಬದವರಿಗೆ ಪರಿಹಾರದ ಚೆಕ್ ವಿತರಿಸಿದರು.

ಇದನ್ನೂ ಓದಿ : ಮುಸ್ಲಿಂ, ಕ್ರಿಶ್ಚಿಯನ್‌ ಧರ್ಮಗುರುಗಳನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Last Updated : Jun 19, 2023, 4:15 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.